subsidy for purchase tractor ತೋಟಗಾರಿಕೆ ಇಲಾಖೆಯಲ್ಲಿ ಹುಬ್ಬಳ್ಳಿ ತಾಲೂಕು ಹಾಗೂ ಧಾರವಾಡ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ 2021-22ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್ಎಚ್ಎಂ) ಯೋಜನೆಯಡಿಯಲ್ಲಿ ರೈತರಿಗೆ (subsidy for purchase tractor) ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಣ್ಣ ನರ್ಸರಿ ಸ್ಥಾಪನೆ, ಹಣ್ಣು(ಬಾಳೆ), ಹೂ (ಗುಲಾಬಿ, ಬಿಡಿ ಸೇವಂತಿಗೆ, ಚೆಂಡು ಹೂವು) ತರಕಾರಿ ಹೊಸ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕಗಳು, ಸಂರಕ್ಷಿತ ಬೇಸಾಯದಡಿ (ಹಸಿರು ಮನೆ, ನೆರಳು ಪರದೆ, ಪ್ಲಾಸ್ಟಿಕ್ ಮಲ್ಚಿಂಗ್), ಯಾಂತ್ರೀಕರಣ ಘಟಕದಡಿಯಲ್ಲಿ 20 ಪಿಟಿಓ ಹೆಚ್ ಪಿ ಸಾಮರ್ಥ್ಯಕ್ಕಿಂತ ಕಡಿಮೆಯಿರುವ ಟ್ರ್ಯಾಕ್ಟರ್, ಕೋಯ್ಲೋತ್ತರ ನಿರ್ವಹಣೆ ಅಡಿಯಲ್ಲಿ ಪ್ಯಾಕ್ ಹೌಸ್, ಹಣ್ಣು ಮಾಗಿಸುವ ಘಟಕ, ಈರುಳ್ಳಿ ಶೇಖರಣಾ ಘಟಕ, ಮತ್ತು ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗಾಗಿ ತಳ್ಳುವ ಗಾಡಿಗಳ ಸೌಲಭ್ಯಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನವಾಗಿದೆ.
ಇನ್ನೂ ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ಶೇ 60 ರಷ್ಟು ಪ್ರೋತ್ಸಾಹಧನದಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ (Farm machinery) ಪಟ್ಟಿ ಇಲ್ಲಿದೆ
ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲಿಚ್ಚಿಸುವ ರೈತರು ಸ್ವಂತ ಜಮೀನು ಮತ್ತು ನೀರಾವರಿ ಸೌಲಭ್ಯ ಹೊಂದಿರಬೇಕು. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಗಣಕೀಕರಣ ಬೆಳೆ ದೃಢೀಕರಣ ಪತ್ರ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಪಾಸ್ಬುಕ್ ಹೊಂದಿರಬೇಕು.
ಪರಿಶಿಷ್ಟ ಜಾತಿಯವರಿಗೆ ಶೇ. 16.25, ಪರಿಶಿಷ್ಟ ಪಂಗಡ ಶೇ. 6..55, ಮಹಿಳೆಯರಿಗೆ ಶೇ. 33, ಅಲ್ಪಸಂಖ್ಯಾತರಿಗೆ ಶೇ. 5 ಹಾಗೂ ಅಂಗವಿಕಲರಿಗೆ ಶೇ. 3 ರಷ್ಟು ಮೀಸಲಾತಿ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ 0836-2744376 ಗೆ ಸಂಪರ್ಕಿಸಲು ಕೋರಲಾಗಿದೆ. ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.
subsidy for purchase tractor ಟ್ರ್ಯಾಕ್ಟರ್ ಬಳಕೆ ದಿನದಿಂದ ದಿನಕ್ಕೆ ಹೆಚ್ಚಳ
ಇತ್ತೀಚೆಗೆ ಆಧುನಿಕ ತಂತ್ರಜ್ಞಾನಗಳಿಗೆ ರೈತರು ಹೊಂದಿಕೊಳ್ಳುತ್ತಿದ್ದಾರೆ. ಜಮೀನಿನ ಉಳುುಮೆಯಿಂದ ಹಿಡಿದು ಬೆಳೆ ಕಟಾವುವರೆೆೆಗೆ ಕೃಷಿ ಯಂತ್ರೋಪಕರಣಗಳು ಸಿಗುತ್ತಿವೆ. ಈ ಯಂತ್ರೋಪಕರಣಗಳನ್ನು ರೈತರು ಬಳಕೆ ಸಹ ಮಾಡುತ್ತಿದ್ದಾರೆ. ಈ ಹಿಂದೆ ಸಣ್ಣ ಮತ್ತು ಅತೀ ಸಣ್ಣ ರೈತರು ಯಂತ್ರೋಪಕರಣಗಳನ್ನು ಬಳಸುತ್ತಿರಲಿಲ್ಲ. ಆದರೆ ಇಂದು ಕಡಿಮೆ ದರದಲ್ಲಿ ಯಂತ್ರೋಪಕರಣಗಳು ಸಿಗುತ್ತಿದ್ದರಿಂದ ರೈತರು ಕೃಷಿಗೆ ಬೇಕಾಗುವ ಯಂತ್ರೋಪಕರಣಗಳನ್ನು ಖರೀದಿ ಮಾಡುತ್ತಿದ್ದಾರೆ. ಮತ್ತು ಈ ಯಂತ್ರೋಪಕರಣಗಳ ಸಹಾಯದಿಂದ ಲಾಭ ಸಹ ಮಾಡಿಕೊಳ್ಳುತ್ತಿದ್ದಾರೆ. ಟ್ರ್ಯಾಕ್ಟರ್ ಗಳು ಸಹ ಕಡಿಮೆ ದರದಲ್ಲಿ ಸಿಗುತ್ತಿವೆ. ಯಾರಿಗೆ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲವೋ ಅಂತಹ ರೈತರಿಗೆ ಬಾಡಿಗೆ ರೂಪದಲ್ಲಿ ಪಡೆಯಲು ಸರ್ಕಾರದ ವತಿಯಿಂದ ಬಾಡಿಗೆ ಕೇಂದ್ರಗಳನ್ನು ಸಹ ತೆರೆದಿದೆ. ಹೀಗಾಗಿ ರೈತರಿಗೆ ಅನಕೂಲವಾಗುತ್ತಿದೆ.