ಕರ್ನಾಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ವಿಶೇಷ ಘಟಕದ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಕುರಿ ಮೇಕೆ ಘಟಕಗಳ ಸ್ಥಾಪನೆಗೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಕುರಿ ಸಾಕಾಣಿಕೆ ಘಟಕ ಸ್ಥಾಪನೆಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. 6+1  ಕುರಿ/ಮೇಕೆ ಘಟಕದ ವೆಚ್ಚ 45 ಸಾವಿರ ರೂಪಾಯಿಯಿದೆ. ಇದರಲ್ಲಿ  40500 ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.

ಕಲಬುರಗಿ, ದಾವಣಗೆರೆ, ಯಾದಗಿರಿ, ಮೈಸೂರು, ಬೀದರ್ ಜಿಲ್ಲೆಗಳ ರೈತರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 

ಕುರಿ/ಮೇಕೆ ಘಟಕದ ವೆಚ್ಚ ವಿವರಗಳು

ಆರು ತಳಿ ಯೋಗ್ಯ ಹೆಣ್ಣು ಕುರಿ/ಮೇಕೆಗಳಿಗೆ (ಪ್ರತಿ ಕುರಿ/ಮೇಕೆಗೆ ರೂಪಾಯಿ 5700 ರೂಪಾಯಿಯಂತೆ ಒಟ್ಟು 34200 ರೂಪಾಯಿ, ಒಂದು ಸುಧಾರಿತ ತಳಿ ಟಗರು/ಹೋತಕ್ಕೆ 8000 ರೂಪಾಯಿ, ಸಾಗಾಣಿಕೆ, ಆಹಾರ ಹಾಗೂ ಇತರೆ ವೆಚ್ಚ 2800 ರೂಪಾಯಿ ಸೇರಿದಂತೆ  ಒಟ್ಟು 45 ಸಾವಿರ ರೂಪಾಯಿ ಘಟಕದ ವೆಚ್ಚವಾಗಿರುತ್ತದೆ.

ಅರ್ಜಿ ಸಲ್ಲಿಸಲು ಇರುವ ಅರ್ಹತೆ

ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಎಸ್ಸಿ, ಎಸ್ಟಿ 18 ರಿಂದ 60 ವಯೋಮಾನದ ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ 10 ರಿಂದ 60 ವಯೋಮಾನದ ಪುರುಷರು ಅರ್ಜಿ ಸಲ್ಲಿಸಬಹುದು. ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ  ಸಂಘಗಳು ಇಲ್ಲದೆ ಇರುವ ತಾಲೂಕುಗಳಲ್ಲಿಯೂ ಸಹ ಕುರಿ ಸಾಕಾಣಿಕೆದಾರರು ಅರ್ಜಿ ಸಲ್ಲಿಸಬಹುದು.

ಕಲಬುರಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಕಲಬುರಗಿ ಜಿಲ್ಲೆಯ ರೈತರಿಂದ ಕುರಿ ಮೇಕೆ ಘಟಕಗಳ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಕಲಬುರಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :  ನಿಮ್ಮ ಜಮೀನಿನ ಸರ್ವೆ ನಂಬರ್ ನಲ್ಲಿ ಯಾರ ಯಾರ ಹೆಸರಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜುಲೈ 27 ರೊಳಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲೆಯ ರೈತರು ದೂರವಾಣಿ ಸಂಖ್ಯೆ 08472 237772 ಗೆ ಸಂಪರ್ಕಿಸಲು ಕೋರಲಾಗಿದೆ.

ದಾವಣಗೆರೆ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

ಕಲಬುರಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಪಶುಪಾಲನಾ ಇಲಾಖೆಯ ಆಯಾ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು ಪಶು ಆಸ್ಪತ್ರೆ ಇವರಿಂದ ಪಡೆದು ಆಗಸ್ಟ್ 5 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೀದರ್ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

2022-23ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿಯಲ್ಲಿ ಬೀದರ್ ಜಿಲ್ಲೆಯ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ರೈತರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಜನವಾಡ ರಸ್ತೆ ಬೀದರ್ ನಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಜುಲೈ 30 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಬೀದರ್ ಜಿಲ್ಲೆಯ ರೈತರು ದೂರವಾಣಿ ಸಂಖ್ಯೆ 08482 223533 ಗೆ ಸಂಪರ್ಕಿಸಲು ಕೋರಲಾಗಿದೆ.

ಮೈಸೂರು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

ಮೈಸೂರು ಜಿಲ್ಲೆಯ ರೈತರು ಸಹಾಯಕ ನಿರ್ದೇಶಕ , ಕರ್ನಾಟಕ ಉಣ್ಣೆ, ಅಭಿವೃದ್ಧಿ ನಿಗಮ ನಿಯಮಿತ ಮೈಸೂರು ಕಚೇರಿ ದೂರವಾಣಿ ನಂ. 0821 2488830 ಗೆ ಸಂಪರ್ಕಿಸಲು ಕೋರಲಾಗಿದೆ. ಮೈಸೂರು ಜಿಲ್ಲೆಯ ರೈತರು ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿದೆ.

ಯಾದಗಿರಿ ಜಿಲ್ಲೆಯ ರೈತರಿಗೆ ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನಾಂಕವಾಗಿದೆ.

Leave a Reply

Your email address will not be published. Required fields are marked *