Ganga Kalyana ಯೋಜನೆಯಡಿ 3 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ

Written by By: janajagran

Updated on:

Ganga Kalyana yojane ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ವಿವಿಧ ನಿಗಮಗಳಿಂದ ಸಣ್ಣ, ಅತೀ ಸಣ್ಣ ರೈತರ ಜಮೀನಿನಲ್ಲಿ 3.5 ಲಕ್ಷ ರೂಪಾಯಿಯಲ್ಲಿ ಕೊಳವೆ ಬಾವಿ ಕೊರೆಯಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಸಮುದಾಯ ಅಭಿವೃದ್ಧಿ ಕೋಶದಿಂದ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ,  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆದು ಪಂಪ್ ಸೆಟ್ ಹಾಗೂ ಇತರ ಪೂರಕ ಸಾಮಗ್ರಿಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಘಟಕದ ವೆಚ್ಚ 3.5 ಲಕ್ಷ ರೂಪಾಯಿ ಆಗಿದ್ದು, 3 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿಯವರೆಗೆ ಸಾಲಸೌಲಭ್ಯವೂ ಇರತ್ತದೆ. 3 ಲಕ್ಷ ರೂಪಾಯಿಯ ಸಹಾಯಧನದಲ್ಲಿ 50 ಸಾವಿರ ರೂಪಾಯಿ ವಿದ್ಯುದ್ದೀಕಾರಣ ಬಾಬ್ತು ಒಳಗೊಂಡಿರುತ್ತದೆ. ನಿಗಮವು ನೀಡುವ ಸಾಲಕ್ಕೆ ವಾರ್ಷಿಕ ಶೇ. 6 ರಷ್ಟು ಬಡ್ಡಿ ಇದೆ. ಇದನ್ನು 6 ವರ್ಷಗಳಲ್ಲಿ ಅರ್ಧ ವಾರ್ಷಿಕ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗುತ್ತದೆ.

ಅಂತರ್ಜಾಲಮಟ್ಟ ಕುಸಿದಿರುವ ಜಿಲ್ಲೆಗಳಾದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಿಗೆ ಘಟಕ ವೆಚ್ಚವನ್ನು 4.5 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. 50 ಸಾವಿರ ರೂಪಾಯಿ ಸಾಲ ಒಳಗೊಂಡಿರುತ್ತದೆ. ಮೇಲೆ ತಿಳಿಸಿದ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಿಗೆ 3.5 ಲಕ್ಷ ರೂಪಾಯಿ ಘಟಕದ ವೆಚ್ಚ ನಿಗದಿಪಡಿಸಲಾಗಿದೆ. ರೈತರು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಕೋರಲಾಗಿದೆ. ಈಗಾಗಲೇ ಗಂಗಾ ಕಲ್ಯಾಣ ಯೋಜನೆಡಯಲ್ಲಿ ಸೌಲಭ್ಯ ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

Ganga Kalyana yojane ಕೊಳವೆಬಾವಿ ಕೊರೆಸಲು ಮಿತಿ? 

ಬಯಲು ಸೀಮೆ ಭಾಗದ ಜಿಲ್ಲೆಗಳಿಗೆ 500 ರಿಂದ 1 ಸಾವಿರ ಅಡಿಯವರೆಗೆ, ಕರಾವಳಿ ಭಾಗದ ಜಿಲ್ಲೆಗಳಿಗೆ 300 ರಿಂದ 500 ಅಡಿಯವರೆಗೆ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ 100 ಅಡಿಯವರೆಗೆ ಉಚಿತವಾಗಿ ಬೋರ್ ವೆಲ್ ಕೊರೆಸಲು ಅನುಮತಿ ನೀಡಲಾಗಿದೆ.

ಫಲಾನುಭವಿಗಳ ಆಯ್ಕೆ ಹೇಗೆ ನಡೆಯುತ್ತದೆ ? (How to select beneficiary)

ಫಲಾನುಭವಿಗಳನ್ನು ಎರಡು ರೀತಿಯಲ್ಲಿ ಆಯ್ಕೆ ಮಾಡಲಾಗುತ್ತದೆ. ಒಟ್ಟು ಗುರಿಯ ಶೇ. 80 ಫಲಾನುಭವಿಗಳನ್ನು ಆಯಾ ಜಿಲ್ಲೆಗಳ ಹಾಗೂ ಮತಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯ ಆಯ್ಕೆ ಸಮಿತಿಗಳು ಆಯ್ಕೆ ಮಾಡುತ್ತವೆ. ಉಳಿದ ಶೇ. 20 ಫಲಾನುಭವಿಗಳನ್ನು ಸಮಾಜಕಲ್ಯಾಣ ಸಚಿವರು (ಶೇ. 15) ಹಾಗೂ ನಿಗಮಗಳ ಅಧ್ಯಕ್ಷರು (ಶೇ.5) ಆಯ್ಕೆ ಮಾಡುತ್ತಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಸಲ್ಲಿಸಬಯಸುವವರು https://kmvstdcl.karnataka.gov.in/ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಸೇವೆಗಳು ಮತ್ತು ಯೋಜನೆಗಳು ಕೆಳಗಡೆ ಸಮಗ್ರ ಗಂಗಾ ಕಲ್ಯಾಣ ಯೋಜನೆ ಮೇಲೆ ಕ್ಲಿಕ್ ಮಾಡಬೇಕು. ಆಗ ಗಂಗಾ ಕಲ್ಯಾಣ ಯೋಜನೆ ಪೇಜ್ ತೆರೆಯಲ್ಪಡುತ್ತದೆ. ಅಲ್ಲಿ ಎಲ್ಲಾ ಮಾಹಿತಿ ನೀಡಲಾಗಿರುತ್ತದೆ. ಆನ್ಲೈನ್ ನಲ್ಲಿ ಅನ್ವಯಿಸಿ ಮೇಲೆ ಕ್ಲಿಕ್ ಮಾಡಬೇಕು.  ಆಗ ಅರ್ಜಿ ಓಪನ್ ಆಗುತ್ತದೆ.

ಅಲ್ಲಿ ವರ್ಷ, ಜಿಲ್ಲೆ, ತಾಲೂಕು, ಹೆಸರು, ವಿಳಾಸ, ಗ್ರಾಮ, ಹೋಬಳಿ, ಆಧಾರ್ ಕಾರ್ಡ್, ಭೂಮಿ ವಿಸ್ತೀರ್ಣ ಸೇರಿದಂತೆ ಇನ್ನಿತರ ಮಾಹಿತಿಯನ್ನು ಭರ್ತಿ ಮಾಡಿ ಸಬ್ಮಿಟ್ ಮಾಡಬೇಕು.

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ:

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಸಲ್ಲಿಸುವ ಬಂಜಾರ ಸಮುದಾಯದವರು ಸೆಪ್ಟೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು  http://ktdcl.in/web4/online/onlineapp.php ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತಾಂಡಾ ಅಭಿವೃದ್ಧಿ ನಿಗಮದ ಪೇಜ್ ಓಪನ್ ಆಗುತ್ತದೆ ಅಲ್ಲಿ ಗಂಗಾ ಕಲ್ಯಾಣ ಯೋಜನೆ ಮೇಲೆ ಕ್ಲಿಕ್ ಮಾಡಬೇಕು. ಆಗ ಗಂಗಾ ಕಲ್ಯಾಣ ಯೋಜನೆ ಪೇಜ್ ತೆರೆಯಲ್ಪಡುತ್ತದೆ. ಅಲ್ಲಿ ಎಲ್ಲಾ ಮಾಹಿತಿ ಓದಿ  ಹೆಸರು, ತಂದೆಯ ಹೆಸರು, ಮೊಬೈಲ್ ನಂಬರ್, ವಿದ್ಯಾರ್ಹತೆ, ಪೂರ್ಣ ವಿಳಾಸ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ,  ಸೇರಿದಂತೆ ಇನ್ನಿತರ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸು ಮೇಲೆ ಕ್ಲಿಕ್ ಮಾಡಬೇಕು.

ಆದಿಯ ಜಾಂಬವ ಅಭಿವೃದ್ಧಿ ನಿಗಮ:

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಡಿಯಲ್ಲಿ ಬರುವ ರೈತರು  https://adijambava.online/index.php ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಸಮಗ್ರ ಗಂಗಾ ಕಲ್ಯಾಣ  ಯೋಜನೆ ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಅರ್ಜಿ ನಮೂನೆ ಆನ್ಲೈನ್ ಮತ್ತು ಆಫ್ ಲೈನ್ ಎರಡರಲ್ಲಿ ಯಾವುದಾದರೊಂದನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 9 ರೊಳಗೆ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ ಮೊಬೈಲ್ ನಲ್ಲೇ ಜಮೀನಿನ ಸ್ಕೆಚ್ ನಕ್ಷೆ ಹೀಗೆ ಪಡೆಯಿರಿ

ಹೆಚ್ಚಿನ ಮಾಹಿತಿಗಾಗಿ . ಅಥವಾ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ ನಂ, 17/5, ಓಬ್ಲಾಂಗ್ ಬ್ಲಾಕ್, 2ನೇ ಮಹಡಿ, ಯುನಿಟಿ ಕಟ್ಟಡ, ಜಯಚಾಮರಾಜೇಂದ್ರ ರಸ್ತೆ, ಬೆಂಗಳೊರು 560 002 ದೂರವಾಣಿ 080-22215222 ಗೆ ಕರೆ ಮಾಡಬಹುದು.

ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮ:

ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿಯಲ್ಲಿ ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ 2021ರ ಸೆಪ್ಟೆಂಬರ್ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅವಶ್ಯಕ ದಾಖಲೆಗಳನ್ನು ನಿಗಮದ https://adcl.karnataka.gov.in  ಲಿಂಕ್ ಮೇಲೆ ಕ್ಲಿಕ್ ಮಾಡಬೇಕು ಗಂಗಾ ಕಲ್ಯಾಣ ಯೋಜನೆ ಮೇಲೆ ಕ್ಲಿಕ್ ಮಾಡಬೇಕು. ಆಗ ಗಂಗಾ ಕಲ್ಯಾಣ ಯೋಜನೆ ಪೇಜ್ ತೆರೆಯಲ್ಪಡುತ್ತದೆ. ಅಲ್ಲಿ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಆಯಾ ಜಿಲ್ಲೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಗುಳ ಕಛೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ:

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಡಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು

https://ksskdc.kar.nic.in/schemes/ ಲಿಂಕ್ ಮೇಲೆ ಕ್ಲಿಕ್ ಮಾಡಿ  ಸೆಪ್ಟೆಂಬರ್ 20 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಮೇಲಿನ ಲಿಂಕ್ ಕ್ಲಿಕ್ ಮಾಡಿದಾಗ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಪೇಜ್ ತೆರೆಯಲ್ಪಡುತ್ತದೆ. ಅಲ್ಲಿ ಅಪ್ಲೈ ಮೇಲೆ ಕ್ಲಿಕ್ ಮಾಡಿ ಕೇಳಿದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 080-22340956 ಗೆ ಸಂಪರ್ಕಿಸಲು ಕೋರಲಾಗಿದೆ.

ಡಿ. ದೇವರಾಜ ಅಱಸು ಹಿಂದುಳಿದ ವರ್ಗಗಳ ಅಭಿವೃದ್ಧಿ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಬೋವಿ ಅಭಿವೃದ್ಧಿ ನಿಗಮ, ನಿಗಮಗಳಿಂದ ಅತೀ ಶೀಘ್ರದಲ್ಲಿ ಅರ್ಜಿ ಆಹ್ವಾನಿಸಲಾಗುವುದು.

Leave a Comment