ಸರ್ಕಾರಿ, ಐಟಿಬಿಜಿ ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಇರುವಂತೆ ರೈತರಿಗೂ ಗುರುತಿನ ಚೀಟಿ ಇರಲಿದೆ. ಇದನ್ನು ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರ ಕಳೆದ ವರ್ಷ ಚಾಲನೆ ನೀಡಿದೆ. ಹೌದು, ಕೃಷಿ ಇಲಾಖೆಯ ಮಹತ್ವಾಕಾಂಕ್ಷಿಯ ರೈತರಿಗೆ ಗುರುತಿನ ಚೀಟಿ ನೀಡುವ ಸ್ವಾಭಿಮಾನಿ ರೈತ ಕಾರ್ಡ್ (Swabhibani raita card) ವಿತರಣೆಗೆ ಈಗಾಗಲೇ ಚಾಲನೆ ನೀಡಲಾಗಿದೆ.
ಸ್ವಾಭಿಮಾನಿ ರೈತರ ಗುರುತಿನ ಚೀಟಿ ರೈತರಿಗೆ ನೀಡುವ ಡಿಜಿಟಲ್ ಐಡಿ ಕಾರ್ಡ್ ಆಗಿದ್ದು, ಕೃಷಿ ಸಾಲ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ. ಕೃಷಿ, ತೋಟಗಾರಿಕೆ , ರೇಷ್ಮೆ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗಳಲ್ಲಿ ರೈತರನ್ನು FRUITS ತಂತ್ರಾಂಶದಲ್ಲಿ ನೋಂದಾಯಿಸಲಾಗುತ್ತಿದೆ. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಲ್ಪಟ್ಟಿರುವ ರೈತರಿಗೆ ಸ್ವಾಭಿಮಾನಿ ರೈತರ ಗುರುತಿನ ಚೀಟಿ ನೀಡಲಾಗುವುದು. ಸರ್ಕಾರದ ಸೌಲಭ್ಯ ಪಡೆಯಲು ರೈತರು ಫ್ರೂಟ್ಸ್ (ಫಾರ್ಮರ್ ರಿಜಿಸ್ಟ್ರೇಷನ್ ಆಯಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮೇಷನ್ ಸಿಸ್ಟಂ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಲೇಬೇಕು. ರೈತರು ಸ್ಮಾರ್ಟ್‌ಫೋನ್‌ಗಳಲ್ಲಿ ಸ್ವಯಂ ನೋಂದಣಿಗೆ ಅವಕಾಶವಿದೆ..
ಸ್ವಾಭಿಮಾನಿ ರೈತ ಕಾರ್ಡ್ ಅಥವಾ ಯೂನಿಕ್ ನಂಬರ್ ಕಾರ್ಡ್ (Unic number card):
ತಂತ್ರಾಂಶದಲ್ಲಿ ಹೆಸರು ನೋಂದಣಿಯಾದ ನಂತರ ರೈತರಿಗೆ, ಯೂನಿಕ್ ನಂಬರ್ ಇರುವ ಕಾರ್ಡ್ ನೀಡಲಾಗುತ್ತದೆ. ರೈತರ ಎಲ್ಲಾ ಮಾಹಿತಿ ಆನ್ ಲೈನ್ ನಲ್ಲಿ ನೋಂದಣಿಯಾಗಿರುತ್ತದೆ. ಯೂನಿಕ್ ನಂಬರ್ ಇದ್ದಲ್ಲಿ ಎಲ್ಲಾ ವಿವರ ಅಲ್ಲಿಯೇ ಸಿಗುತ್ತದೆ. ಇಲಾಖೆಯಿಂದ ನೀಡಿರುವ ಎಲ್ಲಾ ಸೌಲಭ್ಯಗಳ ಮಾಹಿತಿ ಇಲ್ಲಿ ಲಭ್ಯವಿದೆ.
ರೈತರಿಗೆ ಸೌಲಭ್ಯಗಳು (facility) :
ಫ್ರೂಟ್ಸ್ ತಂತ್ರಾಂಶದ ಮೂಲಕ ನೀಡಲಾದ ರೈತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಎಲ್ಲಾ ಆರ್ಥಿಕ ಸಂಸ್ಥೆಗಳಲ್ಲಿ ಸಾಲ ವಿತರಣೆ ವೇಳೆ ಬಳಸಬಹುದು. ಬ್ಯಾಂಕುಗಳು ಈ ವ್ಯವಸ್ಥೆಯನ್ನು ಬಳಸಿ ವಿಶಿಷ್ಟ ಗುರುತಿನ ಮೂಲಕ ರೈತರ ವಿವರಗಳನ್ನು ಪಡೆಯಬಹುದು. ಆರ್ಥಿಕ ಸಂಸ್ಥೆಗಳು ಸಾಲ ವಿತರಣೆ ಸಂಬಂಧಿತ ವಿವರಗಳನ್ನು ಫ್ರೂಟ್ಸ್ ದತ್ತಾಂಶಕ್ಕೆ ನೀಲಾಗುತ್ತದೆ.
ಹೆಸರು ನೋಂದಾಯಿಸಿಕೊಳ್ಳಿ (How to register) :
ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಲು ಈ ಮುಂದಿನ ಲಿಂಕ್ ಕ್ಲಿಕ್ ಮಾಡಿ. https://fruits.karnataka.gov.in/OnlineUserRegistration.aspx ಆಧಾರ್ ನಂಬರ್ ಹಾಗೂ ಆಧಾರ್ ನಂಬರ್ ನಲ್ಲಿರುವಂತೆ ಹೆಸರು ಭರ್ತಿ ಮಾಡಿ, ಆಧಾರ್ ವಿವರ ದಾಖಲಿಸಿ ನಂತರ ಓಟಿಪಿ ಬರುತ್ತದೆ, ಮುಂದುವರಿದು ಇತರೆ ವಿವರ ದಾಖಲಿಸಬಹುದು.
ತಮಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಸಮಸ್ಯೆಯಾಗುತ್ತಿದ್ದರೆ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝಿರಾಕ್ಸ್, ಪ್ರತಿ ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಝಿರಾಕ್ಸ್ ಪ್ರತಿ ಸೇರಿದಂತೆ ಸೂಕ್ತ ದಾಖಲಾತಿ ನೀಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು.
ಪಿಎಂ ಕಿಸಾನ್ ಸೌಲಭ್ಯ ಪಡೆಯಲ ಸಹ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯಗೊಳಿಸಿದೆ. ಅಷ್ಟೇ ಅಲ್ಲ, ಸರ್ಕಾರದ ಎಲ್ಲಾ ಸೌಲಭ್ಯಗಳಿಗೆ ಪ್ರೂಟ್ಸ್ ತಂತ್ರಾಂಶ ಮೂಲವಾಗಿದೆ.