Swavalambi sarathi subsidy get : ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ದ್ವಿಚಕ್ರ ವಾಹನ ಖರೀದಿಗೆ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪ್ರತಿವರ್ಷದಂತೆ ಈ ವರ್ಷವೂ ಸಹ ಫಲಾನುಭವಿಗಳಿಗೆ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಚಿರುವವರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.98,000/- ಗಳ ಹಾಗೂ ನಗರ ಪ್ರದೇಶದವರಿಗೆ ರೂ.1.20,000/- ಗಳ ಮಿತಿಯಲ್ಲಿರಬೇಕು ಹಾಗೂ ಅರ್ಜಿದಾರರ ವಯಸ್ಸು 21-45 ವರ್ಷದೊಳಗಿರುವ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು ಗರಿಷ್ಟ 3.00 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು.
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27ನೇ ಸಾಲಿನ ವಿವಿಧ ಸಾಲ ಹಾಗೂ ಸಹಾಯಧನ ಸೌಲಭ್ಯ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳ್ನು ಆಹ್ವಾನಿಸಲಾಗಿದೆ.
Swavalambi sarathi subsidy get ಯಾರು ಯಾರು ಅರ್ಜಿ ಸಲ್ಲಿಸಬಹುದು
ಹಿಂದುಳಿದ ವರ್ಗಗಳ ಪ್ರವರ್ಗ 3 ಎ ಅಡಿಯಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ ಉತ್ತಮ ಕೊಳಗ ಮುಂತಾದ ಒಳಪಂಗಡಗಳ ಸಮುದಾಯದ ಜನರು ಈ ಯೋಜನೆಗಳ ಲಾಭ ಪಡೆಯಬಹುದು.
2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಗಳಲ್ಲಿ ಕಾರಣಾಂತರಗಳಿಂದ ಆಯ್ಕೆಯಾಗದೆ ಇರುವ ಅರ್ಹ ಅರ್ಜಿದಾರರು 2026-27ನೇ ಸಾಲಿನ ಪ್ರಕಟಣೆಗೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಕಳೆದ ಸಾಲುಗಳಲ್ಲಿ ಸಲ್ಲಿಸಿದ ಅರ್ಜಿಯನ್ನೇ ಆಯ್ಕೆ ಸಮಿತಿಗಳ ಮುಂದೆ ಆಯ್ಕೆಗೆ ಮತ್ತೊಮ್ಮೆ ಮಂಡಿಸಲಾಗುವುದು.
ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ನ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಆನ್ಲೈನ್ ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಾಲತಾಣ
https://kvcdc.karnataka.gov.in/
ಅಥವಾ ನಿಗಮದ ದೂರವಾಣಿ ಸಂಖ್ಯೆ 080 29904350, 080 29904268 ಅನ್ನು ಸಂಪರ್ಕಿಸಬಹುದು. ಅಥವಾ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದವರ ಕಚೇರಿಯವರನ್ನು ಸಂಪರ್ಕಿಸಲು ಕೋರಲಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ):
ಸ್ವಯಂ ಉದ್ಯೋಗ ಮಾಡಲು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.98,000/- ಗಳ ಹಾಗೂ ನಗರ ಪ್ರದೇಶದವರಿಗೆ ರೂ. 1,20,000/- ಗಳ ಮಿತಿಯಲ್ಲಿರಬೇಕು ಹಾಗೂ ಅರ್ಜಿದಾರರ ವಯಸ್ಸು 18-55 ವರ್ಷದೊಳಗಿದ್ದು, ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳಿಗೆ ಬ್ಯಾಂಕ್ಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20 ರಷ್ಟು ಗರಿಷ್ಠ ರೂ. 1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.
ಇದನ್ನೂ ಓದಿ ಈ ರೈತರ ಖಾತೆಗೆ ಮಧ್ಯಂತರ ಪರಿಹಾರ 18 ಕೋಟಿ ರೂಪಾಯಿ ಶೀಘ್ರ ಮಂಜೂರು
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಹಾಸನ, ಕೊಡಗು ಹಾಗೂ ಕಲಬುರಗಿ ಜಿಲ್ಲೆಗಳ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಸಾಲ ಯೋಜನೆ:
* ಶೈಕ್ಷಣಿಕ ಸಾಲ ಯೋಜನೆ (Fresh Students): ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ಸಿಇಟಿ / ನೀಟ್ ಮೂಲಕ ಪ್ರವೇಶ ಪಡೆದು ವೃತ್ತಿಪರ ಕೋರ್ಸುಗಳಾದ ಇಂಜಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸುಗಳಲ್ಲಿನ ವ್ಯಾಸಂಗಕ್ಕಾಗಿ ವಾರ್ಷಿಕ ರೂ. 1.00 ಲಕ್ಷಗಳಂತೆ ಕೋರ್ಸ್ನ ಅವಧಿಗೆ ಗರಿಷ್ಠ ರೂ. 4.00 ಲಕ್ಷಗಳಿಂದ ರೂ. 5.00 ಲಕ್ಷಗಳಿಗೆ ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು.





