ಈ ಜಿಲ್ಲೆಗಳ ರೈತರಿಗೆ 118 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಜಮೆ: ಮೊಬೈಲ್ ನಂಬರ್ ಹಾಕಿ ಹಣ ಜಮೆ ಸ್ಟೇಟಸ್ ಚೆಕ್ ಮಾಡಿ

ಅತೀವಷ್ಟಿಯಿಂದಾಗಿ ಬೆಳೆ ಹಾನಿಯಾದ ರೈತರಿಗೆ ಈಗ ಮೂರನೇ ಕಂತಿನ ಬೆಳೆ ಹಾನಿ ಪರಿಹಾರ ಹಣ ಬಿಡುಗಡೆ ಹಾಗೂ  ಜಮೆಗೆ ಅನುಮೋದನೆ ನೀಡಲಾಗಿದೆ. ಹೌದು, ಪ್ರಸಕ್ತ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತೀವೃಷ್ಟಿಯಿಂದ  ಹಾಳಾ ಬೆಳೆಗಳಿಗೆ ಪರಿಹಾರ ನೀಡಲು ಅನಮೋದನೆ ದೊರೆತಿದೆ. ಭೂಮಿ ತಂತ್ರಾಂಶದಲ್ಲಿ ದಾಖಲಾಗಿರುವವರ ಪೈಕಿ ಜಿಲ್ಲೆಯ 1,05,967 ರೈತರಿಗೆ 90.99 ಕೋಟಿ ರೂಪಾಯಿ ಬೆಳೆ ಪರಿಹಾರ ಬಿಡುಗಡೆಗೆ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಗುರವಾರ ಅನುಮೋದನೆ ನೀಡಿದ್ದಾರೆ. […]

ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಜಮೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲಿದೆ.  ಯಾವ ಯಾವ ರೈತರಿಗೆ ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಜಮೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ. ರಾಜ್ಯದ ಎಲ್ಲಾ ರೈತರಿಗೆ ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಹಣ ಜಮೆಯಾಗುವುದಿಲ್ಲ.  ಕೆಲವು ರೈತರಿಗೆ ಮಾತ್ರ ಬೆಳೆ ವಿಮೆ ಹಣ ಜಮೆಯಾಗುತ್ತದೆ. ಇನ್ನೂ ಕೆಲವು ರೈತರಿಗೆ  ಬೆಳೆ ಹಾನಿ ಪರಿಹಾರ ಹಣ ಜಮೆಯಾಗುತ್ತದೆ. ಹಾಗಾದರೆ […]

ಬೆಳೆಗಳಿಗೆ ಈಗ ಆ್ಯಪ್ ಮೂಲಕ ಪರಿಹಾರ, ಪ್ರತಿ ಹೆಕ್ಟೇರಿಗೆ ಪರಿಹಾರ ಎಷ್ಟು ನೀಡಲಾಗುತ್ತಿದೆ ನಿಮಗೆ ಗೊತ್ತೇ? ಇಲ್ಲಿದೆ ಮಾಹಿತಿ

ಮಳೆಯಿಂದಾಗಿ ಬೆಳೆ ಹಾನಿಯಾದ ಮಾಲಿಕರಿಗೆ, ಮನೆಗಳು ಹಾನಿಯಾದವರಿಗೆ ಒಂದು ಹೊಸ ಆ್ಯಪ್ ಮೂಲಕ ಶೀಘ್ರದಲ್ಲಿಯೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಕಳೆದ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ಅಪಾರ ಬೆಳೆ, ಮನೆಗಳು, ಸೇತುವೆಗಳು, ವಿದ್ಯುತ್ ಕಂಬಗಳು ಹಾಳಾಗಿವೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗಳಲ್ಲೂ ನೆರೆ ಪರಿಹಾರಕ್ಕಾಗಿ 800 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈಗಾಗಲೇ ನೆರೆ ಪರಿಹಾರಕ್ಕಾಗಿ ಸರ್ಕಾರ 300 ಕೋಟಿ  ರೂಪಾಯಿ ಬಿಡುಗಡೆ ಮಾಡಿದೆ. ಇನ್ನೆರಡು ದಿನಗಳಲ್ಲಿ 500 ಕೋಟಿ […]

ಬೆಳೆಹಾನಿಯಾದ ರೈತರ ಖಾತೆಗೆ ಅತೀ ಶೀಘ್ರ ಪರಿಹಾರ ಹಣ ಜಮೆ- ಆರ್. ಅಶೋಕ

ಅತೀವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿರುವ ರೈತರಿಗೆ ಈ ಬಾರಿ ಶೀಘ್ರ ಪರಿಹಾರ ಹಣ ರೈತರ ಖಾತೆಗೆ ಜಮೆಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಇನ್ನೂ ಮಳೆಯ ಪ್ರಮಾಣ ಕಡಿಮೆಯಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗುತ್ತಿದೆ.  ರಾಜ್ಯದಲ್ಲಿ ಸಂಪೂರ್ಣವಾಗಿ ಮಳೆ ನಂತರ ಮೇಲೆ  ಸಮೀಕ್ಷೆ ಪೂರ್ಣಗೊಳಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಆದರೆ ರಾಜ್ಯ ಸರ್ಕಾರದ ವತಿಯಿಂದ ರೈತರ ಖಾತೆಗೆ ಅತೀ ಶೀಘ್ರದಲ್ಲಿ ಪರಿಹಾರ […]

ಬೆಳೆಹಾನಿ ಪರಿಹಾರಕ್ಕೆ 1200 ಕೋಟಿ ಹೆಚ್ಚುವರಿ ಹಣ

ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರದ ಜೊತೆಗೆ ಹೆಚ್ಚುವರಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯದಲ್ಲಿ 2021ನೇ ಜುಲೈನಿಂದ ನವೆಂಬರ್ ವರೆಗೆ ನೆರೆ ಹಾವಳಿಯಿಂದ 12.52 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಬೆಳೆ ಹಾನಿಯ ಜಂಟಿ ಸಮೀಕ್ಷೆಯ ವಿವರಗಳನ್ನು ಪರಿಹಾರ ತಂತ್ರಾಂಶದಲ್ಲಿ ನಮೂದಿಸಿದ ಒಂದು ವಾರದೊಳಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಬೆಳೆ ಹಾನಿ ಪರಿಹಾರ ಜಮೆ ಮಾಡಲು ಕ್ರಮಕೈಗೊಂಡಿದೆ. ಈವರೆಗೆ ಸುಮಾರು 14.4 ಲಕ್ಷ ರೈತರ […]

ಬೆಳೆಹಾನಿಯಾದ ರೈತರಿಗೆ ಹೆಚ್ಚುವರಿ ಪರಿಹಾರ ಘೋಷಣೆ ಮಾಡಿದ ಸಿಎಂ: ರೈತರ ಖಾತೆಗೆ ಶೀಘ್ರ ಬಾಕಿ ಹಣ ಜಮೆ

ಅತೀವೃಷ್ಟಿಯಿಂದ ಬೆಳೆಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು  ಹೆಚ್ಚುವರಿಯಾಗಿ ಬೆಳೆ ಪರಿಹಾರ  ಘೋಷಣೆ ಮಾಡಿದೆ. ಹೌದು, ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ಅತೀವೃಷ್ಟಿ ಪರಿಹಾರ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯದಲ್ಲಿ ಅತೀವೃಷ್ಟಿಯಿಂದಾದ ರೈತರ ಬೆಳೆ ಹಾನಿಗೆ ಹೆಚ್ಚುವರಿಯಾಗಿ ಪರಿಹಾರ ನೀಡಲಾಗುವುದು. ಈಗಾಗಲೇ ಪರಿಹಾರ ಪಡೆದಿರುವ ರೈತರ ಖಾತೆಗೆ ಶೀಘ್ರವಾಗಿ ಬಾಕಿ ಹಣವನ್ನು ಜಮೆ ಮಾಡಲಾಗುವುದು. ಎಂದು ತಿಳಿಸಿದ್ದಾರೆ. ಪ್ರಸಕ್ತ ವರ್ಷ ರಾಜ್ಯವ್ಯಾಪಿ ಹೆಚ್ಚು ಮಳೆಯಾಗಿದೆ. ಬರಪೀಡಿತ ಜಿಲ್ಲೆಗಳಲ್ಲಿ ಕೆರೆ ಕಟ್ಟೆತುಂಬಿ […]

ಮಳೆಯಿಂದ ಹಾನಿಯಾದ ಅಡಿಕೆ, ಬಾಳೆ, ಭತ್ತ ಹಾಗೂ ತೆಂಗಿನ ಮರಕ್ಕೆ ಪರಿಹಾರವೆಷ್ಟು ಗೊತ್ತೇ… ಇಲ್ಲಿದೆ ಸಂಪೂರ್ಣ ಮಾಹಿತಿ

ನವೆಂಬರ್ ತಿಂಗಳಲ್ಲಿ ಸುರಿದ ಅತೀ ಮಳೆಯಿಂದಾಗಿ ರೈತರ ಸಾಕಷ್ಟು ಬೆಳೆ ಹಾನಿಯಾಗಿತ್ತು. ಇದರಿಂದಾಗಿ ರೈತರಿಗೆ ಸರ್ಕಾರವು ಬೆಳೆಹಾನಿ ಪರಿಹಾರ ಸಹ ಘೋಷಣೆ ಮಾಡಿತ್ತು. ಆದರೆ ಸರ್ಕಾರ ಘೋಷಣೆ ಮಾಡಿದ ಪರಿಹಾರ ಎಷ್ಟು ಗೊತ್ತೇ…. ಇಲ್ಲಿದೆ ಮಾಹಿತಿ ಬಾಳೆ ಗಿಡಕ್ಕೆ 20 ಪೈಸೆ, ಅಡಿಕೆ ಮರಕ್ಕೆ 3 ರೂಪಾಯಿ, ತೆಂಗಿನ ಮರಕ್ಕೆ 90 ರೂಪಾಯಿ ಹಾ9ಗೂ ಭತ್ತ ಒಂದು ಗುಂಟೆಗೆ 60 ರೂಪಾಯಿ ಘೋ,ಣೆ ಮಾಡಿದೆ. ಆದರೆ ಈ ಪರಿಹಾರ ಹಣ […]

ಬೆಳೆ ಹಾನಿ ಪರಿಹಾರಕ್ಕಿರುವ ಷರತ್ತುಗಳೇನು? ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಎಷ್ಟು ಪರಿಹಾರದ ಮೊತ್ತ ನಿಗದಿ? ಇಲ್ಲಿದೆ ಸಂಪೂರ್ಣ ಮಾಹಿತಿ

ಕೃಷಿ ಮತ್ತು ತೋಟಗಾರಿಕೆಯ ಬೆಳೆಗಳ ಉತ್ಪಾದನೆಯ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಸಹ ರೈತರಿಗೆ ಪರಿಹಾರದ ಮೊತ್ತ ಅಷ್ಟೇ ನೀಡಲಾಗುತ್ತಿದೆ. ಅತೀವೃಷ್ಟಿ, ಪ್ರವಾಹ, ಬರದಿಂದಾಗಿ ಬೆಳೆ ಹಾನಿಯಾದಾಗ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್.ಡಿ.ಆರ್.ಎಫ್) ಅಡಿ ನೀಡುತ್ತಿರುವ ಮೊತ್ತ ಅತೀ ಕಡಿಮೆಯಾಗಿದೆ ಎಂದು ರೈತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದರೂ ಪರಿಹಾರ ಮೊತ್ತ ಹೆಚ್ಚಾಗಿಲ್ಲ. ರೈತರು ಬೆಳೆ ಉತ್ಪಾದನೆ ಮಾಡಲು ಕೂಲಿ ವೆಚ್ಚ, ಬೀಜ, ಗೊಬ್ಪರ ಸೇರಿದಂತೆ ಇನ್ನಿತರ […]

ಬೆಳೆಹಾನಿ ಪರಿಹಾರಕ್ಕೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಅರ್ಜಿ ಎಲ್ಲಿ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಳೆ ನಷ್ಟವಾದ ರೈತರ ಮಾಹಿತಿ ಪರಿಹಾರ ತಂತ್ರಾಂಶದಲ್ಲಿ ಅಪ್ಲೋಡ್ ಆದ 24 ಗಂಟೆಯಲ್ಲಿಯೇ ರೈತರಿಗೆ ಬೆಳೆ ನಷ್ಟ ಪರಿಹಾರ ಹಣ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ರೈತರಿಂದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಮಳೆಯಿಂದ ಬೆಳೆ ಹಾನಿಯಾದ ರೈತರೂ ಕೂಡಲೇ ತಮ್ಮ ಹತ್ತಿರ ಗ್ರಾಮ ಪಂಚಾಯತಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಕಳೆದ ವರ್ಷದಂತೆ […]