ತೌಕ್ತೇ ಚಂಡಮಾರುತ: ಭಾರಿ ಮಳೆ ಸಾಧ್ಯತೆ- ಆರೇಂಜ್ ಅಲರ್ಟ್

Written by By: janajagran

Updated on:

tauktae cyclone orange alert ಕೊರೋನಾ ದೇಶವನ್ನು ಕಾಡುತ್ತಿರುವ ಈ ಸಂದರ್ಭದಲ್ಲಿ ಚಂಡಮಾರುತದ ಆತಂಕ ಶುರವಾಗಿದೆ. ಪ್ರಸಕ್ತ ವರ್ಷದ ಮೊದಲ ಚಂಡಮಾರುತ ಇದಾಗಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಮೇ 16 ರ ಹೊತ್ತಿಗೆ (tauktae cyclone fear) ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ.

ಈ ಚಂಡಮಾರುತಕ್ಕೆ “ತೌಕ್ತೇ’ ಎಂದು ಹೆಸರಿಡಲಾಗಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

tauktae cyclone orange alert ಕರ್ನಾಟಕದ 7 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆ ಸುರಿಯುವುದರಿಂದ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಮೇ.16ರ ಸುಮಾರಿಗೆ ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯಾಗಿ ತೀವೃವಾಗಲಿದೆ. ಈ ಎಚ್ಚರಿಕೆ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರಿಕೆ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ ಕೋಸ್ಟ್ ಗಾರ್ಡ್ ಕರ್ನಾಟಕ ಸೂಚನೆ ನೀಡಿದೆ.

ಇದನ್ನೂ ಓದಿ ನಿಮ್ಮ ಹೆಸರಿಗೆ ಯಂತ್ರೋಪಕರಣ ಪಡೆಯಲಾಗಿದೆಯೇ? ಚೆಕ್ ಮಾಡಿ

ಗಸ್ತು ತಿರುಗುತ್ತಿದ್ದ ಐಸಿಜಿ ಹಡಗುಗಳು ಮತ್ತು ಸಿಜಿ ಡಾರ್ನಿಯರ್ ವಿಮಾನಗಳು ವಿಎಚ್‌ಎಫ್ ಚಾನೆಲ್‌ನಲ್ಲಿ ಸಮುದ್ರದಲ್ಲಿರುವ ಮೀನುಗಾರರಿಗೆ ಹವಾಮಾನ ಎಚ್ಚರಿಕೆ ನೀಡಿ ಹತ್ತಿರದ ತೀರಕ್ಕೆ ಮರಳುತ್ತಿವೆ.

ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೇ 20ರಂದು ಗುಜರಾತ್‌ನ ಕಛ್ ಅಥವಾ ಆ ರಾಜ್ಯದ ಉತ್ತರ ಭಾಗ ವನ್ನು ಹಾದು ಒಮಾನ್‌ನತ್ತ ಸಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪಾಕ್‌ನ ದಕ್ಷಿಣ ಭಾಗದಲ್ಲೂ ಚಂಡಮಾರುತದ ಪ್ರಕೋಪ ಕಾಣಿಸುವ ಸಾಧ್ಯತೆ ಇದೆ.

ಚಂಡಮಾರುತದ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ತೀವ್ರ ಗಾಳಇ ಬೀಸುವ ನಿರೀಕ್ಷೆಯಿದೆ.

ದೇವಪ್ರಯಾಗದಲ್ಲಿ ಮೋಡ ಸ್ಪೋಟ-ಧರೆಗುರುಳಿದ ಕಟ್ಟಡಗಳು

ರಾಜ್ಯದ ದೇವ್‌ಪ್ರಯಾಗ್‌ನಲ್ಲಿ ಮೋಡ ಸ್ಫೋಟಗೊಂಡ ಕಾರಣ ಬಂದ ನೀರಿನ ರಭಸಕ್ಕೆ ಅನೇಕ ಕಟ್ಟಡಗಳು ನೆಲಸಮಗೊಂಡಿವೆ.. ನೀರಿನೊಂದಿಗೆ ಬಂದ ಅವಶೇಷಗಳ ಅಡಿ 8 ಅಂಗಡಿಗಳು ಸಂಪೂರ್ಣ ನೆಲಸಮವಾಗಿವೆ. ನೀರಿನೊಂದಿಗೆ ಹರಿದು ಬಂದ ಅವಶೇಷಗಳ ಕಾರಣ ಭಾಗಿರಥಿ ನದಿಯ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಭೂ ಮಾಲಿಕರ ವಿವರ ಮೊಬೈಲ್ ನಲ್ಲೇ ಚೆಕ್ ಮಾಡಿ

ಮಳೆ ಮಾಹಿತಿಗೆ ವರುಣಮಿತ್ರ

ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಕೇಳಲು ರೈತರು ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿ ವಿಚಾರಿಸಬಹುದು. ಹೌದು ಈ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ.

Leave a Comment