ತೌಕ್ತೇ ಚಂಡಮಾರುತದ (tauktae cyclone) ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಮಳೆ ಯಾಗುವ ಸಾಧ್ಯತೆಯಿರುವುದರಿಂದ ರಾಜ್ಯದ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (yellow alert ) ಘೋಷಿಸಲಾಗಿದೆ  ಎಂದು ಹವಾಮಾನ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಚಂಡಮಾರುತದ ಅಬ್ಬರ ತುಸು ಕಡಿಮೆಯಾಗಿದೆ. ಆದರೂ, ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬುಧವಾರದವರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದ ಜಿಲ್ಲೆಗಳಲ್ಲಿ ಮಳೆ ತಗ್ಗಿದ್ದು, ಗುಡುಗು ಮತ್ತು ಸಿಡಿಲು ಹೆಚ್ಚಾಗಿ ಇರಲಿದೆ. ಕೆಲವು ಜಿಲ್ಲೆಗಳಲ್ಲೇ ಮೇ 22 ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತೌಕ್ತೆ ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನ ವಿವಿಧೆಡೆ ಧಾರಾಕಾರ ಮಳೆಯಾಗಿದೆ.  ಸೋಮವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆ ಧಾರಾಕಾರ ಮಳೆಯಾಯಿತು. ಮೇ 21ರವರೆಗೆ ಬೆಂಗಳೂರನಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ:

ಚಂಡಮಾರುತ ಪರಿಣಾಮ ಕರಾವಳಿಯಲ್ಲಿ ಗರಿಷ್ಠ 5.0 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿದೆ, ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಮೇ 19ರವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *