ಬೆಳೆ ವಿಮೆಗೆ ಕೊನೆಯ ದಿನಾಂಕ ಯಾವುದು?

Written by Ramlinganna

Updated on:

last date for crop insure fund 2022-23ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಲು ಕೆಲವು ಬೆಳೆಗಳಿಗೆ ಡಿಸೆಂಬರ್ 31 ಕೊನೆಯ ದಿನವಾಗಿದೆ.

ಹೌದು, ಹಿಂಗಾರು ಬೆಳೆಗಳಾದ ಗೋಧಿ (ಮಳೆಯಾಶ್ರಿತ) ಬೆಳೆಗೆ ವಿಮೆ ಮಾಡಿಸಲು ಡಿಸೆಂಬರ್ 16 ಕೊನೆ ದಿನವಾಗಿದೆ. ಅದೇ ರೀತಿ ಕಡಲೆ ಮಳೆಯಾಶ್ರಿತ ಬೆಳೆಗೆ ವಿಮೆ ಮಾಿಸಲು ಡಿಸೆಂಬರ್ 31 ಕೊನೆಯ ದಿನವಾರಿಗೆ.  ಕಡಲೆ (ನೀರಾವರಿ), ಜೋಳ (ನೀರಾವರಿ), ಗೋಧಿ (ನೀರಾವರಿ) ಬೆಳೆಗಳಿಗೆ ವಿಮೆ ಮಾಡಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಇದೇ ಬೆಳೆಗಳಿಗೆ ಕೆಲವು ಜಿಲ್ಲೆಗಳಲ್ಲಿ ವಿಮೆ ಮಾಡಿಸುವ ಅವಧಿ ಮುಗಿದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಇತರ ಬೆಳೆಗಳಿಗೆ ವಿಮೆ ಮಾಡಿಸಲು ಡಿಸೆಂಬರ್ 16 ಹಾಗೂ 31 ಕೊನೆಯ ದಿನವಾಗಿದೆ.

ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ, ಪಾಸ್ ಬುಕ್, ಕಂದಾಯ ರಸೀದಿ, ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಮೊಬೈಲ್ ನಂಬರ್ ನೀಡಬೇಕಾಗುತ್ತದೆ.

ಇದನ್ನೂ ಓದಿ : ನಿಮ್ಮ ಜಮೀನಿನೊಂದಿಗೆ ನಿಮ್ಮ ಅಕ್ಕಪಕ್ಕದ ಜಮೀನು ಯಾರ ಹೆಸರಿಗೆ ಎಷ್ಟು ಎಕರೆ ಜಂಟಿಯಾಗಿದೆ? 

ಹೆಚ್ಚಿನ ವಿವರಗಳಿಗಾಗಿ ಸ್ಥಳೀಯ ವಾಣಿಜ್ಯ, ಗ್ರಾಮೀಣ, ಸಹಕಾರಿ ಬ್ಯಾಂಕುಗಳನ್ನು, ಕಾಮನ್ ಸರ್ವಿಸ್ ಸೆಂಟರ್, ಗ್ರಾಮ ಒನ್ ಅಥವಾ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಬಹುದು.

last date for crop insure fund ಯಾವ ಬೆಳೆಗೆ ಎಷ್ಟು ವಿಮೆ ಹಣ ಬರುತ್ತದೆ?

ಗೋಧಿ ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರಿಗೆ 29 ಸಾವಿರ ರೂಪಾಯಿ ಬರುತ್ತದೆ. ಇದಕ್ಕೆ ರೈತರು 435 ರೂಪಾಯಿ ವಿಮೆ ಹಣ ಪಾವತಿಸಬೇಕಾಗುತ್ತದೆ. ಅದೇ ರೀತಿ ಗೋಧಿ (ನೀರಾವರಿ) ಬೆಳೆಗೆ ಪ್ರತಿ ಹೆಕ್ಟೇರಿಗೆ 40 ಸಾವಿರ ರೂಪಾಯಿ ಜಮೆಯಾಗುತ್ತದೆ. ಇದಕ್ಕೆ ರೈತರು ಕೇವಲ 600 ರೂಪಾಯಿ ಪಾವತಿಸಬೇಕಾಗುತ್ತದೆ. ಇದರೊಂದಿಗೆ ಭತ್ತ (ನೀರಾವರಿ) ಬೆಳೆಗೆ ಪ್ರತಿ ಹೆಕ್ಟೇರಿಗೆ 86 ಸಾವಿರ ರೂಪಾಯಿ ಜಮೆಯಾಗುತ್ತದೆ.ಇದಕ್ಕೆ ರೈತರು 1290 ರೂಪಾಯಿ ವಿಮಾ ಮೊತ್ತ ಪಾವತಿಸಬೇಕಾಗುತ್ತದೆ.

ನಿಮ್ಮ ಜಿಲ್ಲೆಯಲ್ಲಿ ಯಾವ ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಬೇಕು? ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ರೈತರು ತಮ್ಮ ಜಿಲ್ಲೆಗಳಲ್ಲಿ ಯಾವ ಯಾವ ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಬಹುದೆಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಜಿಲ್ಲೆ ಆಯ್ಕೆ ಮಾಡಿಕೊಂಡ ನಂತರ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬೇಕು ಹಾಗೂ  ಕೊನೆಯ ದಿನ ಯಾವುದು ಎಂಬ ಪಟ್ಟಿ ಕಾಣುತ್ತದೆ.

ವಿಮೆ ಮಾಡಿಸಿದ ನಂತರ ರೇತರೇನೂ ಮಾಡಬೇಕು?

ಬೆಳೆ ವಿಮೆ ಮಾಡಿಸಿದ ನಂತರ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೋ ಆ ಕಂಪನಿಯ ತಾಲೂಕಿನ ಸಿಬ್ಬಂದಿ ನಂಬರ್ ಪಡೆದುಕೊಳ್ಳಬೇಕು. ಒಂದು ವೇಳೆ ನಿಮಗೆ ತಾಲೂಕಿನ ವಿಮಾ ಸಿಬ್ಬಂದಿ ನಂಬರ್ ಸಿಗದಿದ್ದರೆ ವಿಮಾ ಕಂಪನಿಯ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಬೇಕು. ಹೌದು, ರೈತರು 1800 180 1551 ಗೆ ಕರೆ ಮಾಡಿ ನಿಮ್ಮ ಜಿಲ್ಲೆ, ತಾಲೂಕು ವಿಮಾ ಕಂಪನಿ ಸಿಬ್ಬಂದಿಯ ಮೊಬೈಲ್ ನಂಬರ್ ಪಡೆದುಕೊಳ್ಳಬಹುದು. ಏಕೆಂದರೆ ನಿಮ್ಮ ಬೆಳೆ ಪ್ರಕೃತಿ ವಿಕೋಪದಿಂದಾಗಿ ಹಾಳಾದಾಗ ಈ ವಿಮಾ ಕಂಪನಿಗೆ 72 ಗಂಟೆಯೊಳಗೆ ದೂರು ನೀಡಬೇಕಾಗುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದ ರೈತರ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡಿ ವಿಮೆ ಪರಿಹಾರಕ್ಕೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತಾರೆ.

Leave a Comment