do Ekyc for PM Kisan Scheme ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಧನಸಹಾಯ ಪಡೆಯಲು ರೈತರು ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ರೈತರಿಗೆ ಕಳೆದ ಒಂದು ವರ್ಷದಿಂದ ಹಲವಾರು ಬಾರಿ ತಿಳಿಸಿದ್ದರೂ ಸಹ ಹಲವಾರು ರೈತರು ಇ ಕೆವೈಸಿ ಮಾಡಿಸದೆ ಇರುವುದು ಕಂಡು ಬಂದಿರುತ್ತದೆ. ಇಕೆವೈಸಿ ಮಾಡಿಸದಿದ್ದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡಲಾಗುವ ಆರ್ಥಿಕ ಧನಸಹಾಯವನ್ನು ಸ್ಥಗಿತಗೊಳಿಸಲಾಗುತ್ತದೆ. ಸದರಿ ಯೋಜನೆಯಡಿ ನೈಜ ಫಲಾನುಭವಿಗಳಿಗೆ ಮಾತ್ರ ಆಯ್ಕೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಹೊಸ ಆದೇಶ ಹೊರಡಿಸಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹತ್ತು ಸಾವಿಹರ ರೂಪಾಯಿಗಳ ಆರ್ಥಿಕ ಸೌಲಭ್ಯ ಪಡೆಯುವ ರೈತ ಫಲಾನುಭವಿಗಳು ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇ ಕೆವೈಸಿ ಮಾಡಿಸಿಕೊಳ್ಳದೆ ಇರುವ ಫಲಾನುಭವಿಗಳಿಗೆ (ಕೇಂದ್ರ ಸರ್ಕಾರದಿಂದ ಆರು ಸಾವಿರ ರೂಪಾಯಿ ಹಾಗೂ ರಾಜ್ಯ ಸರ್ಕಾರದಿಂದ ನಾಲ್ಕು ಸಾವಿರ ರೂಪಾಯಿಗಳ) ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ. ಈವರೆಗೆ ಇ ಕೆವೈಸಿ ಮಾಡಿಸದೆ ಇರುವ ರೈತ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಯೊಂದಿಗೆ ಈ ಕೆಳಕಂಡ ವಿಧಾನಗಳಲ್ಲಿ ಮಾಡಿಸಬಹುದಾಗಿದೆ.
ಅರ್ಹ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ, ಸಾಮಾನ್ಯ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಓಟಿಪಿ ಮೂಲಕ ಇ ಕೆವೈಸಿ ಮಾಡಿಸಬಹುದಾಗಿದೆ. ಫಲಾನುಭವಿಗಳು ಸ್ವತಃ ತಾವೇ ಪಿಎಂ ಕಿಸಾನ್ ಪೋರ್ಟಲ್ ಮೂಲಕ ಮೊಬೈಲಿಗೆ ಓಟಿಪಿ ಪಡೆದು ಇಕೆವೈಸಿ ಮಾಡಿಸಬಹುದು. ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ಮಾಡಿ ಹೊಸ ಪೋಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕ ಪಿಎಂ ಕಿಸಾನ್ ಇ ಕೆವೈಸಿ ತ್ವರಿತವಾಗಿ ಮಾಡಿಕೊಳ್ಳಬಹುದು.
ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕದವರಿಗೆ ಎಷ್ಟು ಎಕರೆ ಜಮೀನಿದೆ? ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಿಎಂ ಕಿಸಾನ್ ಮೊಬೈಲ್ ಆ್ಯಪನ್ನು ಪ್ಲೇ ಸ್ಟೋರ್ ದಿಂದ ಡೌನ್ಲೋಡ್ ಮಾಡಿಕೊಂಡು ಆ್ಯಪ್ ಮೂಲಕ ಸ್ವತಃ ಫಲಾನುಭವಿಗಳೇ ಮುಖ ಚಹರೆ (Facial Authentication) ತೋರಿಸುವ ಮೂಲಕ ಇಕೆವೈಸಿ ಮಾಡಿಸಿಕೊಳ್ಳಬಹುದು.
ಈಗಾಗಲೇ ರೈತರು ಇ-ಕೆವೈಸಿ ಮಾಡಿಸಿದ್ದಲ್ಲಿ ಕೇಂದ್ರ ಸರ್ಕಾರದಿಂದ ಹಂತ ಹಂತವಾಗಿ ರೈತರ ಖಾತೆಗೆ ಹಣ ಜಮೆಯಾಗಲಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಕೋರಲಾಗಿದೆ.
do Ekyc for PM Kisan Scheme ಪಿಎಂ ಕಿಸಾನ್ ಹಣ ಪಡೆಯಲು ನೀವು ಅರ್ಹರಾಗಿದ್ದೀರೋ ಇಲ್ಲವೋ? ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ಅರ್ಹರಾಗಿದ್ದಾರೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/BeneficiaryStatus_New.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳಿುತ್ತದೆ. ಅಲ್ಲಿ ಎಂಟರ್ ರೆಜಿಸ್ಟ್ರೇಶನ್ ನಂಬರ್ ಕೆಳಗಡೆ ನಿಮ್ಮ ಪಿಎಂ ಕಿಸಾನ್ ಯೋಜನೆಯ ರೆಜಿಸ್ಟ್ರೇಶನ್ ನಂಬರ್ ಹಾಕಿದ ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಪರ್ಸನಲ್ ಇನಫಾರ್ಮೇಶನ್ ಕೆಳಗಡೆ ನಿಮ್ಮ ಹೆಸರು, ತಂದೆಯ ಹೆಸರು, ವಿಳಾಸ ಇರುತ್ತದೆ.
ಅದರ ಕೆಳಗಡೆ ಎಲಿಜಿಬಿಲಿಟಿ ಸ್ಟೇಟಸ್ ಕೆಳಗಡೆ ಲ್ಯಾಂಡ್ ಸೀಡಿಂಗ್ ಯಸ್ ಇರಬೇಕು. ಇಕೆವೈಸಿ ಸ್ಟೇಟಸ್ ನಲ್ಲಿಯೂ ಯಸ್ ಇರಬೇಕು. ಇದರ ಜೊತೆಗೆ ಆಧಾರ್ ಬ್ಯಾಂಕ್ ಅಕೌಂಟ್ ಸೀಡಿಂಗ್ ಸ್ಟೇಟಸ್ ನಲ್ಲಿಯೂ ಯಸ್ ಇದ್ದರೆ ಸಾಕು, ನೀವು ಪಿುಎಂ ಕಿಸಾನ್ ಯೋಜನೆಗೆ ಅರ್ಹರಾಗಿದ್ದೀರೆಂದರ್ಥ.