ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳಿಗೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 2 ಹೆಕ್ಟೇರ್ ಪ್ರದೇಶದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಉಳಿದ 3 ಹೆಕ್ಟೇರ್ ಪ್ರದೇಶಕ್ಕೆ ಶೇ. 45 ರಷ್ಟು ಸಹಾಯಧನ ನೀಡಲಾಗುವುದು. ಇತರೆ ವರ್ಗದ ರೈತರಿಗೆ ಮೊದಲ 2 ಹೆಕ್ಟೇರ್ ಪ್ರದೇಶದವರೆಗೆ ಶೇ. 75 ರಷ್ಟು ಸಹಾಯಧನ ನೀಡಲಾಗುವುದು. ಉಳಿದ 3 ಹೆಕ್ಟೇರ್ ಗೆ ಶೇ. 45 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಮತ್ತು ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ನೀಡಲಾಗುವುದು. ವಿಕಲಚೇತನರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಹಾಯಧನ ನೀಡಲಾಗುವುದು.
ನೀರಾವರಿ ಯೋಜನೆಯ ಲಾಭ ಪಡೆಯಲು ರೈತರ ಅರ್ಹತೆಗಳೇನು?
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಗುರುತಿನ ಚೀಟಿಗಾಗಿ ಯಾವುದೇ ಪ್ರಮಾಣ ಪತ್ರ ಹೊಂದಿರಬೇಕು. ಜಮೀನಿನ ಪಹಣಿ ಇರಬೇಕು. ಜಮೀನಿನ ಜಮಾಬಂದಿ ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಇರಬೇಕು. ಫ್ರೂಟ್ಸ್ ಐಡಿಯಲ್ಲಿ ಹೆಸರು ನೋಂದಾಯಿಸಿರಬೇಕು.
ಹಿರೇಕೇರೂರು ತಾಲೂಕಿನ ರೈತರಿಂದ ಅರ್ಜಿ ಆಹ್ವಾನ
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾಗಿ ಹಿರೇಕೇರೂರ ತಾಲೂಕಿನ ರೈತರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ12 ಕಂತಿನ ಹೊಸ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನುಮೊಬೈಲ್ ನಲ್ಲೇ ಚೆಕ್ ಮಾಡಿ
ಆಗಸ್ಟ್ 1 ರಿಂದ ಅರ್ಜಿಗಳನ್ನು ಹಿರೆಕೇರೂರ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಪಂ ಹಿರೇಕೇರೂರ ಅವರ ಕಚೇರಿಯಿಂದ ಅರ್ಜಿಗಳನ್ನು ಪಡೆದು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಿರೆಕೇರೂರ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆಯಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಲಕ್ಷ್ಮೀಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲೆಯ ಹನಿ ನೀರಾವರಿ ಸೌಲಭ್ಯ ಪಡೆಯಲು ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರಿಗೆ ಸಹಾಯಧನ ಹೇಗೆ ನೀಡಲಾಗುವುದು?
ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಬೇಕು.ಅರ್ಹ ರೈತರು ತಮ್ಮ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಸಹಾಯಧನ ಕೋರಿ ಅರ್ಜಿ ಸಲ್ಲಿಸಿದ ನಂತರ ಹಿರಿತನದ ಆಧಾರದ ಮೇಲೆ ಅನುದಾನದ ಲಭ್ಯತೆಗೆ ಹೊಂದಿಸಿಕೊಂಡು ಸಹಾಯಧನ ನೀಡಲಾಗುವುದು. ವಿಕಲಚೇತನರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು, ಮಹಿಳಾ ರೈತರಿಗೆ ಆದ್ಯತೆ ಮೇರೆಗೆ ಸಹಾಯಧನ ನೀಡಲಾಗುವುದು.
ರೈತರು ಸಹಾಯಧನ ಪಡೆಯಲು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸೂಚಿಸಿದಂತೆ ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡ ಕಂಪನಿಗೆ ರೈತರ ವಂತಿಕೆಯನ್ನು ಪಾವತಿಸಬೇಕು. ಉಳಿದ ಸಹಾಯಧನ ಹಣವನ್ನು ಸರ್ಕಾರವು ಕಂಪನಿಗೆ ಪಾವತಿಸುತ್ತದೆ.
ಆಸಕ್ತ ರೈತ ಫಲಾನುಭವಿಗಳು ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು. ಅಥವಾ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಬಹುದು.