Ganga Kalyan Scheme: 3.50 ಲಕ್ಷ subsidyಗೆ ಅರ್ಜಿ ಆಹ್ವಾನ

Written by Ramlinganna

Updated on:

These famers will get up to 3.5 lakh subsidy  2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿಯಲ್ಲಿ 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ರೈತರು ಅರ್ಜಿ ಸಲ್ಲಿಸಬಹುದು. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲಾಗುವುದು.

ಅಕ್ಟೋಬರ್ 20 ರವರೆಗೆ ಸೇವಾಸಿಂಧು ಪೋರ್ಟಲ್  ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

These famers will get up to 3.5 lakh subsidy  ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು

ಡಿ. ದೇವರಾಜ ಅರಸು ಹಿಂದುಳಿ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಸಮುದಾಯದವರು ಅರ್ಜಿ ಸಲ್ಲಿಸಬೇಕು. ರೈತರು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ಹಾಲಿ ಜಮೀನುಗಳು ಖುಸ್ಕಿಯಾಗಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರರು 10 ರಿಂದ 60 ವಯೋಮಾನದೊಳಗಿರಬೇಕು. ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ 1 ಲಕ್ಷ 20 ಸಾವಿರ ರೂಪಾಯಿಯೊಳಗಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು.

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ1 ಎಕರೆ ಜಮೀನು ಹೊಂದಿರಬೇಕು.  ವೈಯಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ 2.50 ಲಕ್ಷ ರೂಪಾಯಿಗಳಲ್ಲಿ 2 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿಯನ್ನು ನಿಗಮದಿಂದ ಶೇ. 4 ರ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.

ಇದನ್ನೂ ಓದಿ : ಈ ದಿನಾಂಕದಂದು ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ-ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ?  ಚೆಕ್ ಮಾಡಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಹಾಗೂ ತುಮಕುರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ 4 ಲಕ್ಷ ರೂಪಾಯಿಗಳಲ್ಲಿ 3.50 ಲಕ್ಷ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿ ನಿಗಮದಿಂದ ಶೇ. 4 ರ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಆಧಾರ್ ಕಾರ್ಡ್ ನಲ್ಲಿರುವಂತೆ ರೈತರ ಹೆಸರು, ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇರಬೇಕು. ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು ಹೊಂದಿರಬೇಕು. ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ರೈತರು ಡಿ. ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ಪ್ರಕಟಣೆಯ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಂಪೂರ್ಣ ಮಾಹಿತಿ ಪಡೆಯಬಹುದು.

https://dbcdc.karnataka.gov.in/storage/pdf-files/G%20K%20(2).pdf

ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ ನಲ್ಲಿ ಸಂಪರ್ಕಿಸಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080 22374832 ಹಾಗೂ 9606066389 ಅಥವಾ 8824300400 ಗೆ ಸಂಪರ್ಕಿಸಲು ಕೋರಲಾಗಿದೆ.

ಆಯಾ ಜಿಲ್ಲೆಯ ರೈತರು ತಮ್ಮ ಜಿಲ್ಲೆಯಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿಗೆ ಸಂಪರ್ಕಿಸಬೇಕು. ಕಲಬುರಗಿ ಜಿಲ್ಲೆಯ ರೈತರು 08472 278635ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment