ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಅನುಷ್ಠಾನವಾಗಬೇಕಾಗಿರುವ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕುರಿ, ಮೇಕೆ, ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರಬೇಕು. 19 ರಿಂದ 60 ವರ್ಷ ವಯೋಮಿತಿ ಹೊಂದಿದ್ದು, ಮಹಿಳಾ ಸದಸ್ಯರಿಗೆ ಮೊದಲ ಆದ್ಯತೆ ಕೊಡಲಾಗುವುದು. ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಮಾರ್ಚ್ 4 ರೊಳಗಾಗಿ ಬೀದರ್ ಜಿಲ್ಲೆಯ ರೈತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಲಿಚ್ಚಿರುವ ರೈತರು ಭರ್ತಿ ಮಾಡಿದ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಜನವಾಡ ರಸ್ತೆ ಬೀದರ್ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿಸಿಕೊಂಡಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗಾಗಿ 2022-23ನೇ ಸಾಲಿನಲ್ಲಿ 10+1 ಕುರಿ, ಮೇಕೆ ಸಾಕಾಣಿಕೆಗೆ ಸಹಾಯಧನ ನೀಡಲಾಗುವುದು.
ಇದನ್ನೂ ಓದಿ : ಈ ರೈತರ ಖಾತೆಗೆ ಜಮೆಯಾಯಿತು 1250 ರೂಪಾಯಿಯವರೆಗೆ ರೈತ ಶಕ್ತಿ ಯೋಜನೆಯ ಹಣ: ಚೆಕ್ ಮಾಡಿ ಇಲ್ಲೇ ನಿಮ್ಮ ಹೆಸರು
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಮಹಿಳಾ ಮತ್ತು ಪುರುಷ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಹಿಳಾ ಫಲಾನುಭವಿಗಳು ಲಭ್ಯವಿಲ್ಲದಿದ್ದಲ್ಲಿ ಪುರುಷ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಚಿತ್ರದುರ್ಗ ಜಿಲ್ಲೆಯ ರೈತರು ಅರ್ಜಿಗಳನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಪಶು ಆಸ್ಪತ್ರೆ, ಆವರಣ, ಚಿತ್ರದುರ್ಗ ಇಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಝಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ರೈತರಿಂದ ಕುರಿ ಮೇಕೆ ಘಟಕ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನ
2022-23 ನೇ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಹಾಗೂ ಹಿಂದಿನ 3 ವರ್ಷಗಳಲ್ಲಿ ಪಶುಪಾಲನಾ ಇಲಾಖೆ. ಅಥವಾ ನಿಗಮದಿಂದ ಇದೇ ಉದ್ದೇಶಕ್ಕಾಗಿ ಸಹಾಯಧನ ಪಡೆದಿರಬಾರದು. ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 24 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಇದನ್ನೂ ಓದಿ : ರೇಷನ್ ಕಾರ್ಡ್ ಪಟ್ಟಿಯಲ್ಲಿ ಯಾರ ಹೆಸರಿದೆ? ಯಾರ ಹೆಸರಿಲ್ಲ: ಮೊಬೈಲ್ ನಲ್ಲೇ ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಮೈಸೂರು ಸಹಾಯಕ ನಿರ್ದೇಶಕ ಕಚೇರಿಯ ಮೊಬೈಲ್ ನಂಬರ್ 9945623137 ಅಥವಾ ದೂರವಾಣಿ ಸಂಖ್ಯೆ 0821 2488830 ಗೆ ಸಂಪರ್ಕಿಸಲು ಕೋರಲಾಗಿದೆ.
ಬೆಂಗಳೂರು ಕೊಪ್ಪಳ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ
ಇದೇ ರೀತಿ ಕೊಪ್ಪಳ ಹಾಗೂ ಬೆಂಗಳೂರು ಜಿಲ್ಲೆಯ ರೈತರಿಂಲೂ ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ಫೆಬ್ರವರಿ 24 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಬೆಂಗಳೂರು ಜಿಲ್ಲೆಯ ರೈತರು ಹೆಚ್ಚಿನ ಮಾಹಿತಿಗಾಗಿ 08008023414295ಗೆ ಸಂಪರ್ಕಿಸಲು ಕೋರಲಾಗಿದೆ.
ಅರ್ಹ ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಬೇಗನೆ ಅರ್ಜಿ ಸಲ್ಲಿಸಬೇಕು. ಹಿರಿತನದ ಆಧ್ಯತೆ ಮೇರೆಗೆ ಮೊದಲು ಅರ್ಜಿ ಸಲ್ಲಿಸಿದ ರೈತರಿಗೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲಾಗುವುದು.