ಬೆಳೆ ವಿಮೆ ಬಿಡುಗಡೆ: ಯಾವ ಯಾವ ರೈತರಿಗೆ ಜಮೆ? ಇಲ್ಲಿದೆ ಮಾಹಿತಿ

Written by Ramlinganna

Updated on:

These farmers get insurance money? ಯಾವ ಯಾವ ರೈತರಿಗೆ ಬೆಳೆ ವಿಮೆ ಜಮೆಯಾಗುತ್ತದೆ? ಬೆಳೆ ವಿಮೆ ಜಮೆಯಾಗಲು ರೈತರೇನು ಮಾಡಬೇಕು? ಬೆಳೆ ವಿಮೆ ಹೇಗೆ ನಿರ್ಧರಿಸುತ್ತಾರೆ ಎಂಬುದರ ಮಾಹಿತಿ ಇಲ್ಲಿದೆ.

ಕೇಂದ್ರ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯು ರೈತರಿಗೆ ಅತ್ಯಂತ ಉಪಯುಕ್ತವಾಗಿದೆ.  ಈ ಯೋಜನೆಯಡಿ ರೈತರಿಗೆ ಬೆಳೆ ವಿಮೆ ಮಾಡಲು ಅವಕಾಶವಿರುತ್ತದೆ. ಕೊಯ್ಲು ಮಾಡುವವರೆಗೂ ವಿಮೆಗೆ ಬೆಳೆ ಒಳಪಟ್ಟಿರುತ್ತದೆ. ರೈತರು ವಿಮಾ ಮೊತ್ತದ ಶೇ. 2 ರಷ್ಟು ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ತಲಾ ಶೇ. 5 ರಷ್ಟು ಪಾವತಿಸುತ್ತದೆ.

These farmers get insurance money ಬೆಳೆ ವಿಮೆ  ಹೇಗೆ ನಿರ್ಧರಿಸತ್ತಾರೆ

ಬೆಳೆ ವಿಮೆ ನೋಂದಣಿ ಮಾಡಿಸಿಕೊಂಡ ರೈತರ ಜಮೀನು ಸ್ಥಳ, ನಿರ್ಧಿಷ್ಠ, ಪ್ರಕೃತಿ ವಿಕೋಪ, ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ ಹಾಗೂ ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಳೆ ಅವಘಡ ಸಂದರ್ಭದಲ್ಲಿ ಬೆಳೆ ನಷ್ಟವಾದರೆ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.

ಮುಂಗಾರು ಹಂಗಾಮಿಗೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು?

ಮುಂಗಾರು ಹಂಗಾಮಿನ ಬೆಳೆಗಳಾದ ಹೆಸರು, ಉದ್ದು, ತೊಗರಿ, ಮುಸುಕಿನ ಜೋಳ, ಸಜ್ಜೆ, ಸೋಯಾ ಅವರೆ, ಎಳ್ಳು, ನೆಲಗಡಲೆ (ಶೇಂಗಾ), ಹತ್ತಿ, ಅರಿಶಿಣ, ಭತ್ತ, ಸೂರ್ಯಕಾಂತಿ, ಟೋಮ್ಯಾಟೋ, ಈರುಳ್ಳಿು, ಕೆಂಪು ಮೆಣಸಿನ ಕಾಯಿ, ಪಪ್ಪಾಯ ಸೇರಿದಂತೆ ಇನ್ನಿತರ ಬೆಳೆಗಳ ವಿಮೆ ಮಾಡಿಸಬಹುದು. ಆದರೆ ಈ ಬೆಳೆಗಳು ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸವಾಗಿರುತ್ತದೆ.

ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು?

ನಿಮ್ಮ ಊರಿನಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದೆಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಅಲ್ಲಿ ನೀವು ಮುಂಗಾರು ಬೆಳೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು.ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು.ಆಗ ತೆರೆದುಕೊಳ್ಳುವ ಪೇಜ್ ನಲ್ಲಿ Crop you can insure ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಆಯ್ಕೆ ಮಾಡಿಕೊಂಡು Display ಮೇಲೆ ಕ್ಲಿಕ್ ಮಾಡಿದರೆ ಸಾಕು, ನೀವು ಯಾವ ಯಾವ ಬೆಳೆಗಳ್ಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಬಹುದು.

These farmers get insurance money ಬೆಳೆ ವಿಮೆ ಪರಿಹಾರ ಯಾವಾಗ ಯಾವ ರೈತರಿಗೆ ಎಷ್ಟು ನೀಡಲಾಗುವುದು?

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ಇಂತಹ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಬೆಳೆ ವಿಮೆ ಘಟಕದಲ್ಲಿ ಶೇ. 75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ. 25 ರಷ್ಟು ಪರಿಹಾರವನ್ನು ವಿತರಿಸಲು ಯೋಜನೆಯಲ್ಲಿ ಅವಕಾಶ ಇರುತ್ತದೆ. ಈ ರೀತಿಯ ಪರಿಹಾರವು ಗ್ರಾಮ ಪಂಚಾಯತಿ ಮಟ್ಟದ ಅಧಿಸೂಚಿತ ಬೆಳೆಗಳಿಗೆ ನೋಂದಣಿ ಮಾಡಿಸಿದ ರೈತರಿಗೆ ಮಾತ್ರ ಅನ್ವಯವಾಗುತ್ತದೆ.

ಇದನ್ನೂ ಓದಿ : ನಿಮ್ಮ ಜಮೀನಿನ ಸರ್ವೆ ನಂಬರ್ ಮ್ಯಾಪ್ ಹೀಗೆ ಡೌನ್ಲೋಡ್ ಮಾಡಿ

ಈಗಾಗಲೇ ಬಿತ್ತನೆ ಮಾಡಿರುವ ರೈತರು ಬೆಳೆವಿಮೆ ನೋಂದಣಿ ಮಾಡಿಸದೆ ಇದ್ದಲ್ಲಿ ತಮ್ಮ ಗ್ರಾಮ ಪಂಚಾಯತ್ ಮಟ್ಟದ ಅಧಿಸೂಚಿತ ಬೆಳೆಗಳಿಗೆ ಕೊನೆಯ ದಿನಾಂಕದೊಳಗಾಗಿ ಬೆಳೆ ವಿಮೆ ನೋಂದಣಿ ಮಾಡಿಸಲು ಕೋರಲಾಗಿದೆ.

ಬೆಳೆ ಹಾನಿಯಾದಾಗ ರೈತರೇನು ಮಾಡಬೇಕು?

ಅತೀವೃಷ್ಟಿ, ಅನಾವಷ್ಟಿ, ಪ್ರವಾರ, ಗುಡುಗು, ಮಿಂಚಿನಿಂದಾಗು ಬೆಂಕಿ ಅವಘಡ, ಭೂ ಕುಸಿತದಿಂದಾಗಿ ಬೆಳ ಹಾನಿಯಾದರೆ ರೈತರೂ 72 ಗಂಟೆಯೊಳಗೆ ವಿಮಾ ಕಂಪನಿಗೆ ದೂರು ನೀಡದ ನಂತರವೇ ಬೆಳೆ ವಿಮೆ ಜಮೆಯಾಗುವುದು.

Leave a Comment