ಈ ರೈತರಿಗೇಕೆ ಪಿಎಂ ಕಿಸಾನ್ ಯೋಜನೆಯ 10 ಸಾವಿರ ಜಮೆ

Written by By: janajagran

Updated on:

These farmers will get Rs 10000 ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಪ್ರತಿ ವರ್ಷ 10 ಸಾವಿರ ರೂಪಾಯಿ ಜಮೆಯಾಗುವ ಸಂಗತಿ ಬಹುತೇಕ ರೈತರಿಗೆ ಗೊತ್ತಿರಲಿಕ್ಕಿಲ್ಲ. ಹೌದು, ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರವು ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಜಮೆ ಮಾಡುವಂತೆ ರಾಜ್ಯ ಸರ್ಕಾರವು ಸಹ ಎರಡು ಕಂತಿನಲ್ಲಿ 4 ಸಾವಿರ ರೂಪಾಯಿ ಜಮೆ ಮಾಡುತ್ತದೆ.

ಹೌದು, ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯೊಂದಿಗೆ ರಾಜ್ಯ ಸರ್ಕಾರವು ಸಹ ಇದೇ ಯೋಜನೆಯಡಿ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿಯನ್ನು ಎರಡು ಕಂತುಗಳಲ್ಲಿ ಜಮೆ ಮಾಡಲಾಗುವುದು. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿರುವ ಫಲಾನುಭವಿಗಳು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಂಡಿದ್ದರೆ ಅಂತಹ ರೈತರಿಗೆ  ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿ ಹಣ ಜಮೆಯಾಗುವುದು.

ಫ್ರೂಟ್ಸ್ ತಂತ್ರಾಂಶದಲ್ಲಿ  ಕೃಷಿ ಇಲಾಖೆಯು ಆರಂಭದಲ್ಲಿ ಕೆಲವು ರೈತರ ಹೆಸರುಗಳನ್ನು ನೋಂದಾಯಿಸಿಕೊಂಡಿದೆ. ಆದರೆ ಈಗ ರೈತರು ಸ್ವತಃ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕಾಗುತ್ತದೆ.  ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಂಡವರೆಲ್ಲರಿಗೂ ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿ ನಾಲ್ಕು ಸಾವಿರ ರೂಪಾಯಿ ಜಮೆಯಾಗುತ್ತದೆ.

These farmers will get Rs 10000 ಯಾರಿಗೆ 10 ಸಾವಿರ ಪಿಎಂ ಕಿಸಾನ್ ಹಣ ಜಮೆ

ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಚೆಕ್ ಮಾಡಲು ಈ

https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ರೈತರು ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಅದೇ ರೀತಿ ಹೋಬಳಿ ಮತ್ತು ಗ್ರಾಮ ಆಯ್ಕೆ ಮಾಡಿಕೊಂಡು ವೀಕ್ಷಿಸು ಮೇಲೆ ಕ್ಲಿಕ್ ಮಾಡಬೇಕು. ಆಗ ಗ್ರಾಮದ ರೈತರ ಹೆಸರು ಓಪನ್ ಆಗುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಪಿಎಂ ಕಿಸಾನ್ ರಾಜ್ಯ ಸರ್ಕಾರದ ಹಣ 4 ಸಾವಿರ ರೂಪಾಯಿ ಜಮೆಯಾಗುತ್ತದೆ ಎಂದರ್ಥ.

ಅದೇ ರೀತಿ ಪಿಎಂ ಕಿಸಾನ್ ಯೋಜನೆಯಡಿಯಲ್ಲಿರುವ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಚೆಕ್ ಮಾಡಬಹುದು. ಅದಕ್ಕಾಗಿ ರೈತರು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕೇಂದ್ರ ಸರ್ಕಾರದ  ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ರೈತರ ಹೆಸರು ಚೆಕ್ ಮಾಡಬಹುದು. ಆರಂಭದಲ್ಲಿ ರೈತರು ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಬ್ಲಾಕ್ ಹಾಗೂ ಗ್ರಾಮ ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಯ್ಕೆ ಮಾಡಡಿಕೊಂಡ ಗ್ರಾಮದಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಚೆಕ್ ಮಾಡಬಹುದು. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿ ಮುಂದಿನ ಪುಟದಮೇಲೆ ಕ್ಲಿಕ್ ಮಾಡಿ ಹೆಸರು ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ ರೈತರಿಗೆ ಭರ್ಜರಿ ಗುಡ್ ನ್ಯೂಸ್: ರೈತರ ಖಾತೆಗೆ ಬರ ಪರಿಹಾರ ಜಮೆ

ಈಗಲೂ ಬಹುತೇಕ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ 6 ಸಾವಿರ ರೂಪಾಯಿ ಜಮೆಯಾಗುತ್ತದೆ ಎಂದು ತಿಳಿದುಕೊಂಡಿದ್ದಾರೆ. ಆದರೆ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು 4 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡುತ್ತದೆ. ಇದನ್ನು ಈಗಾಗಲೇ ರೈತರ ಖಾತೆಗೆ ಎರಡು ಕಂತಿನ ಹಣ ಜಮೆ ಮಾಡಲಾಗಿದೆ. ಹೌದು, ಈಗಾಗಲೇ ನಾಲ್ಕು ಕಂತುಗಳು ಜಮೆ ಮಾಡಲಾಗಿದೆ.

Leave a Comment