These farmers will not get PM Kisan money anymore ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿಕೊಂಡ ಕೆಲವು ರೈತರಿಗೆ ಇನ್ನೂಮುಂದೆ ಹಣ ಜಮೆಯಾಗುವುದಿಲ್ಲ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಫಲಾನುಭವಿಯಾಗಲು ರಾಜ್ಯದಲ್ಲಿ ಲಕ್ಷಾಂತರ ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ನೋಂದಣಿ ಮಾಡಿಸಿದ ರೈತರಲ್ಲಿ ಕೆಲವು ರೈತರ ಹೆಸರುಗಳನ್ನು ಪಿಎಂ ಕಿಸಾನ್ ಯೋಜನೆಯಿಂದ ಕೈಬಿಡಲಾಗಿದೆ.
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಪ್ರತಿವರ್ಷ ರೈತರಿಗೆ ಆರು ಸಾವಿರ ರೂಪಾಯಿಯನ್ನು ಮೂರು ಕಂತುಗಳಲ್ಲಿ ಜಮೆ ಮಾಡಲಾಗುತ್ತಿತ್ತು. ಈ ಯೋಜನೆ ರೈತರಿಗೆ ತುಂಬಾ ನೆರವಾಗಿತ್ತು. ಆದರೆ ಈಗ ಕೆಲವು ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣವನ್ನು ಜಮೆ ಮಾಡಲು ನಿಲ್ಲಿಸಲಾಗಿದೆ.
ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಮಾಡವುದನ್ನು ಕಾರಣ ತಿಳಿಸದೆ ತಡೆಹಿಡಿಯಲಾಗಿತ್ತು. ಈಗ ಒಂದೇ ಕುಟುಂಬದದಲ್ಲಿ ಒಬ್ಬರಿಗಿಂತ ಹೆಚ್ಚಿನ ರೈತರು ಅಂದರೆ ಪತಿ ಪತ್ನಿ ಅಥವಾ ಮಕ್ಕಳು ನೋಂದಣಿ ಮಾಡಿಸಿಕೊಂಡಿದ್ದರೆ ಈ ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಪಿಎಂ ಕಿಸಾನ್ ಹಣ ಬರಲಿದೆ. ಕೃಷಿ ಮಾಡುವ ಅಥವಾ ಜಮೀನು ಹೊಂದಿರುವ ಪ್ರತಿಯೊಬ್ಬ ರೈತರಿಗೆ ಹಣ ಜಮೆಯಾಗುತ್ತದೆ ಎಂದು ಹೇಳಲಾಗದು.
ಇನ್ನೂ ಮುಂದೆ ಈ ರೈತರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ
ಒಂದು ಕುಟುಂಬದಲ್ಲಿ ಪತಿ ಪತ್ನಿ ಹಾಗೂ 18 ವರ್ಷ ಮೇಲ್ಪಟ್ಟ ಮಕ್ಕಳ ಹೆಸರಿಗೆ ಜಮೀನು ಇರುತ್ತದೆ. ನೋಂದಣಿ ಮಾಡಿಸಿದ ಒಂದೇ ಕುಟುಂಬದ ಪತಿ ಪತ್ನಿ ಹಾಗೂ ಮಕ್ಕಳಿಗೂ ಹಣ ಜಮೆಯಾಗಿದೆ. ಹೀಗಾಗಿ ಒಂದೇ ಕುಟುಂಬದಲ್ಲಿ ಪತಿ ಪತ್ನಿ ಪಿಎಂ ಕಿಸಾನ್ ಯೋಜನೆಯ ಹಣ ಪಡೆದಿದ್ದರೆ ಅಂತಹವರಿಗೆ ಈಗ ತಡೆಹಿಡಿಯಲಾಗಿದೆ. ಇನ್ನೂ ಮುಂದೆ ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.
ಕೆಲವು ರೈತರಿಗೆ ಜಮೀನು ಇದ್ದರೂ ಕುಟುಂಬದ ಒಬ್ಬರೇ ಸದಸ್ಯರಾಗಿದ್ದರೂ ಅವರು ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅಂತಹವರಿಗೆ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರಿಗೂ ಪಿಎಂ ಕಿಸಾನ ಹಣ ದೊರೆಯುವುದಿಲ್ಲ.
ಇದನ್ನೂ ಓದಿ : ಸಾಲಮನ್ನಾ ಮಾಡಲು ಮತ್ತೊಮ್ಮೆ ಅವಕಾಶ- ಸಾಲಮನ್ನಾ ಪಟ್ಟಿಯಲ್ಲಿ ನಿಮ್ಮೆ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆ ಕಂತಿನ ಬಗ್ಗೆ ಇನ್ನೂ ಅನೇಕ ರೈತರಿಗೆ ಸಂಶವಿದೆ. ರೈತರು ಪಿಎಂ ಕಿಸಾನ್ ಯೋಜನೆ ಜಾರಿಗೆ ಬಂದಾಗ ನೋಂದಣಿ ಮಾಡಿಸಿದ್ದರೆ ಈಗ ಅವರಿಗೆ 20ನೇ ಕಂತಿನ ಹಣ ಜಮೆಯಾಗಲಿದೆ. ರೈತರು ತಡವಾಗಿ ನೋಂದಣಿ ಮಾಡಿಸಿದ್ದರೆ 19 ಅಥವಾ 20ನೇ ಕಂತು ಜಮೆಯಾಗಲಿದೆ.
ಪಿಎಂ ಕಿಸಾನ್ ಹಣ ಜಮೆಯಾಗಿಲ್ಲವೇ. ಹಾಗಾದರೆ ಈ ಸಂಖ್ಯೆಗೆ ಕರೆ ಮಾಡಿ
ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಹಣ ಜಮೆ ಕುರಿತು ಅಥವಾ ಹಣ ಜಮೆ ತಡೆಹಿಡಿಯಲಾಗಿರುವ ಕುರಿತು ತಿಳಿಯಲು 155261 ಅಥವಾ 011 24200606 ಗೆ ಕರೆ ಮಾಡಬಹುದು. ಕರೆ ಮಾಡಿದ ನಂತರ ಅಗತ್ಯ ಮಾಹಿತಿಗಳನ್ನು ರೈತರು ಮನೆಯಲ್ಲಿಯೇ ಕುಳಿತು ಪಡೆಯಬಹುದು.
Pm kisan status ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.
ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.