ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ಈ ಯೋಜನೆಯ ಕುರಿತು ಈಗ ಅಧಿಕೃತ ಆದೇಶ ಹೊರಬಿದ್ದಿದೆ. ಈ ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆಯೂ ಬಿಡುಗಡೆಯಾಗಿದೆ.

ತಮಗೆಲ್ಲಾ ಗೊತ್ತಿದ್ದ ಹಾಗೆ, ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಈಗ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿಯಲ್ಲಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ಲಾಭ ಪಡೆದುಕೊಳ್ಳಲು ಸರ್ಕಾರವು ಹಲವಾರು ಷರತ್ತುಗಳನ್ನು ವಿಧಿಸಿದೆ. ಅರ್ಜಿ ನಮೂನೆಯೊಂದಿಗೆ ಈಗ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯ ಲಾಭವನ್ನು ಯಾವ ಯಾವ ಮಹಿಳೆಯರು ಪಡೆಯಲಿದ್ದಾರೆ ಹಾಗೂ ಈ ಯೋಜನೆಯ ಲಾಭ ಪಡೆಯಲು ಇರುವ ಷರತ್ತುಗಳೇನಿವೆ ಎಂಬುದನ್ನು ಇಲ್ಲಿ ಸಂಕ್ಷೀಪ್ತವಾಗಿ ಮಾಹಿತಿ ನೀಡಲಾಗಿದೆ.

ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವಿದ. ಡಿಸಿಎಂ ಡಿ.ಕೆ. ಶಿವಕುಮಾರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವರ ಭಾವಚಿತ್ರವೂ ಇದೆ.

ಅರ್ಜಿ ನಮೂನೆಯಲ್ಲಿ ಯಾವ ಯಾವ ಮಾಹಿತಿ ಕೇಳಲಾಗಿದೆ?

ಗೃಹ ಲಕ್ಷ್ಮೀ ಯೋಜನೆಯ ಅರ್ಜಿ  ನಮೂನೆಯಲ್ಲಿ ಮನೆ ಯಜಮಾನಿಯ ಪತಿ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ದಾಖಲೆಯನ್ನು ಅರ್ಜಿ ಸಲ್ಲಿಕೆ ವೇಳೆ ಸಲ್ಲಿಸಬೇಕಾಗುತ್ತದೆ.

ಗೃಹ ಲಕ್ಷ್ಮೀ ಯೋಜನೆಯನ್ನು ಎಲ್ಲಿ ಸಲ್ಲಿಸಬೇಕು?

ಗೃಹ ಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಹೌದು, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಆಗಸ್ಟ್ 15 ರಂದು ಫಲಾನುಭವಿಗಳ ಖಾತೆಗೆ 2 ಸಾವಿರ ರೂಪಾಯಿಯನ್ನು ವರ್ಗಾವಣೆ ಮಾಡಲಾಗುವುದು.

ಗೃಹಲಕ್ಷ್ಮೀ ಯೋಜನೆಯ ಷರತ್ತುಗಳೇನು?

ಗೃಹ ಲಕ್ಷ್ಮೀ ಯೋಜನೆಯ ಲಾಭ ಪಡೆಯುವ ಮಹಿಳೆಯರ ಬಳಿ ಪಡಿತರ ಚೀಟಿ ಇರಬೇಕು. ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಬ್ಬ ಮಹಿಳೆ ಮಾತ್ರ ಇದರ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚಿನ ಮಹಿಳೆಯರಿದ್ದರೂ ಒಬ್ಬರಿಗೆ ಮಾತ್ರ  ಲಾಭ ಸಿಗಲಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.

ಇದನ್ನೂ ಓದಿ ಪಿಎಂ ಕಿಸಾನ್ 14ನೇ ಕಂತು ಈ ದಿನ ಬಿಡುಗಡೆ : ಲಿಸ್ಚ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ

ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಜಯಮಾನಿಯ ಪತಿಯು ಜಿಎಸ್.ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಅರ್ಜಿಯಲ್ಲಿ ಏನೇನು ಮಾಹಿತಿ ಭರ್ತಿ ಮಾಡಬೇಕು?

ಗೃಹಲಕ್ಷ್ಮೀ ಯೋಜನೆಯ ಅರ್ಜಿಯಲ್ಲಿ ಮನೆಯ ಜಮಾನಿಯ ಹೆಸರು ಮತ್ತು ವಿಳಾಸ ಆಧಾರ್ ಸಂಖ್ಯೆ, ವೋಟರ್ ಐಡಿ, ಪಡಿತರ ಜೀಟಿ ಸಂಖ್ಯೆ ಭರ್ತಿ ಮಾಡಬೇಕು. ಪತಿಯ ಹೆಸರು ಭರ್ತಿ ಮಾಡಬೇಕು.  ಪತಿಯ ಆಧಾರ್ ಸಂಖ್ಯೆ, ವೋಟರ್ ಐಡಿ, ಜಾತಿ ನಮೂದಿಸಬೇಕು. ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಹಾಕಬೇಕು. ಬ್ಯಾಂಕ್ ಖಾತೆ ನಂಬರ್, ಐಎಫ್ಎಸ್ಸಿ ಕೋಡ್ ಭರ್ತಿ ಮಾಡಿ ದಾಖಲೆಲಗತ್ತಿಸಬೇಕಾಗುತ್ತದೆ.

Leave a Reply

Your email address will not be published. Required fields are marked *