Three days again rain alert : ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಭಾರಿ ಮಳೆಯ ಅಬ್ಬರ-14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೂನ್ 30 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.
ಜೂನ್ 28 ಹಾಗೂ 29 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹೌದು, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ದಾರವಾಡ, ಗದಗ, ಬಾಗಲಕೋಟೆ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ.
ಜೂನ್ 29 ಹಾಗೂ 30 ರಂದು ಸಹಿತಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಜೂನ್ 29 ಹಾಗೂ 30 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
Three days again rain alert ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ನೀವು ನಿಂತಿರುವ ಜಮೀನಿನ ಮಾಲಿಕರು ಯಾರಿದ್ದಾರೆ? ಹೀಗೆ ಚೆಕ್ ಮಾಡಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





