ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೈಲ್ಮೈ ಸುಳಿಗಾಳಿ ಪರಿಣಾಮವಾಗಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮೇ 5,6 ಮತ್ತು 7 ರಂದು ಗುಡುಗು ಸಿಡಿಲು ಸಹಿತ (three days Heavy rain alert) ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರ, ಶಿವಮೊಗ್ಗ, ಕೊಡಗು ಹಾಗೂ ಹಾಸನದಲ್ಲಿ ಮೇ 5 ರಿಂದ 7ರವರೆಗೆ ಮಳೆಯಾಗಲಿದೆ. ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ.
ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ ಜಿಲ್ಲೆಯಲ್ಲಿ ಮೇ. 3 ರಂದು ಮೋಡ ಕದವಿ ವಾತಾವರಣವಿದೆ. ಸಾಯಂಕಾಲ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.
ಕಳೆದ ಎರಡು ದಿನಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಜೇವರ್ಗಿ ಹಾಗೂ ಅಫಜಲ್ಪುರದಲ್ಲಿ ತಲಾ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಳಗಿ ತಾಲೂಕಿನಲ್ಲಿ ಎರಡು ಎತ್ತುಗಳು ಸಿಡಿಲಿಗೆ ಮೃತಪಟ್ಟಿವೆ.