ಇಂದಿನಿಂದ ಮೂರು ದಿನಗಳ ಕಾಲ ಉದ್ಯೋಗ ಮೇಳ

Written by Ramlinganna

Updated on:

job fair various district ಕಲಬುರಗಿ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಹೌದು, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಆಗಸ್ಟ್ 10 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ2 ಗಂಟೆಯವರೆಗೆ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿವೆ

ಬಿಲಗುಂದಿ ಮೋಟಾರ್ಸ್ ಪ್ರೈವೆಟ್ ಲಿಮಿಟೆಡ್ ಸೇಲ್ಸ್  ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವ ಪಾಸಾಗಿರಬೇಕು. ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರುವ ಜೊತೆಗೆ ಅಟೋಮೊಬೈಲ್ ಇಂಡಸ್ಟ್ರೀಸ್ ದಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ಎಚ್.ಆರ್.ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರುವ ಜೊತೆಗೆ ಎಚ್.ಆರ್. ಫೀಲ್ಡ್ ನಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.

ಕನೆಕ್ಟ್ ಬಿಜಿನೆಸ್ ಸಲ್ಯೂಷನ್ಸ್ ದಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಹುದ್ದೆಗೆ ಪಿಯುಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಉತ್ತಮ ಸಂವಹನ ಕೌಶಲ್ಯ 6 ತಿಂಗಳ ಅನುಭವ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಭಾರತ ಫೈನಾನ್ಸಿಯಲ್ ಇನಕ್ಲೂಸರ್ ಲಿಮಿಟೆಡ್ ದಲ್ಲಿ ಫೀಲ್ಡ್ ಅಸಿಸ್ಟೆಂಟ್, ಲೋನ್ ಆಫೀಸರ್ ಹುದ್ದೆಗೆ ಎಸ್ಎಸ್ಎಲ್ಸಿ, ಪಿಯುಸಿ, ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು. 0 ರಿಂದ 2 ವರ್ಷದ ಅನುಭವ ಹೊಂದಿರಬೇಕು.

ಇದನ್ನೂ ಓದಿ :   ಈ ಲಿಸ್ಟ್ ನಲ್ಲಿರುವವರಿಗೆ ಜುಲೈ 24 ರಂದು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಜಮೆ

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡಾಟಾ) ಭಾವಚಿತ್ರಗಳ ಹಾಗೂ ಆಧಾರ್ ಕಾರ್ಡ್ ದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 274846, ಮೊಬೈಲ್ ಸಂಖ್ಯೆ 9620095270 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

job fair various district ದಾವಣಗೆರೆಯಲ್ಲಿ ಆಗಸ್ಟ್ 8 ರಂದು ನೇರ ಸಂದರ್ಶನ

ದಾವಣಗೆರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದಿಂದ ಆಗಸ್ಟ್ 8 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ ಸಂಖ್ಯೆ- 51) ದಲ್ಲಿ ಆಯೋಜಿಸಲಾಗಿದೆ.

ಈ ಆಯ್ಕೆಯಲ್ಲಿ ಹಲವು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಆಸಕ್ತ ಅಭ್ಯರ್ಥಿಗಳು ನಿಗಧಿತ ಸ್ಥಳ ಮತ್ತು ಸಮಯಕ್ಕೆ ಕನಿಷ್ಠ 6 ಸೆಟ್ ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 6361550016,  08192 259446 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ಡಿ. ರವೀಂದ್ರ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ 9 ರಂದು ನೇರ ಸಂದರ್ಶನ

ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಚಾಮುಂಡಿ ಡೈ ಕಾಸ್ಟ್ (ಪಿ) ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗ ಉದ್ಯೋಗ ನೀಡುವ ಸಂಬಂಧ ಆಗಸ್ಟ್ 9 ರಂದು ಬೆಳಗ್ಗೆ 10.30 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.

ಐಟಿಐ, ಡಿಪ್ಲೋಮಾ, ಪಿಯುಸಿ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಆಗಸ್ಟ್ 9 ರಂದು ಬೆಳಗ್ಗ 10.30 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿಸಿಸಿ ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡಾಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816 2278488 ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment