ಜುಲೈ 25 ರಂದು ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ

Written by Ramlinganna

Updated on:

Three days job fair ಎಸ್.ಎಸ್.ಎಲ್.ಸಿ., ಪಿಯುಸಿ ಹಾಗೂ ಪದವಿ ಪಾಸಾದ ವಿದ್ಯಾರ್ಥಿಗಳಿಗಾಗಿ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹೌದು, ಚಿತ್ರದುರ್ಗ, ಗದಗ, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿಗಳು  ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗಗಿಟ್ಟಿಸಿಕೊಳ್ಳಬಹುದು.

Three days job fair ಜುಲೈ 25 ರಂದು ಹುಬ್ಬಳ್ಳಿಯಲ್ಲಿ ನೇರ ಸಂದರ್ಶನ

ಹುಬ್ಬಳ್ಳಿ ನವನಗರದ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ವತಿಯಿಂದ ಸಿ.3 ಸಲ್ಯೂಶನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಜುಲೈ 25 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ನಗರದ ಜೆ.ಸಿ. ನಗರದ ಸಿ3 ಸಲ್ಯೂಶನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸಂಸ್ಥೆಯಲ್ಲಿ ಖಾಲಿಯಿರುವ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅಭ್ಯರ್ಥಿಗಳ ನೇರ ಸಂದರ್ಶನ ನಡೆಸಲಿದ್ದಾರೆ.

ಪಿಯುಸಿ ಹಾಗೂ ಯಾವುದೇ ಪದವೀಧರ 18 ರಿಂದ 30 ವಯಸ್ಸಿನವರು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ತಮ್ಮ 1 ಭಾವಚಿತ್ರ, ಆಧಾರ್ ಕಾರ್ಡ್, ಬಯೋಡಾಟಾ (ರೆಸ್ಯೂಮ್) ಗಳ ಹೆಚ್ಚಿನ ಪ್ರತಿಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836 2225288, 9806905751 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 26 ರಂದು ಗದಗ ಜಿಲ್ಲೆಯಲ್ಲಿ ಉದ್ಯೋಗ ಮೇಳ

ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜುಲೈ 26 ರಂದು ಬೆಳಗ್ಗೆ 10 ರಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೂಮ್ ನಂಬರ್ 215, ಜಿಲ್ಲಾ ಆಡಳಿತ ಭವನ ಗದಗ, ಇಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ : ಜುಲೈ 27 ರಂದು ಪಿಎಂ ಕಿಸಾನ್ 14ನೇ ಕಂತಿನ ಹಣ ರೈತರ ಖಾತೆಗೆ ಜಮೆ ಯಾರ್ಯಾರಿಗೆ ಜಮೆಯಾಗಲಿದೆ ಚೆಕ್ ಮಾಡಿ

ನೇರ ಸಂದರ್ಶನದಲ್ಲಿ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಗದಗ, ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಹುಬ್ಬಳ್ಳಿ ಈ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಝಾರಾಕ್ಸ್ ಪ್ರತಿಗಳು, 2 ರೆಸ್ಯೂಮ್ (ಬಯೋಡಾಟಾ) ಪ್ರತಿಗಳು ಮತ್ತು ಆಧಾರ್ ಕಾರ್ಡ್ ಝರಾಕ್ಸ್ ನೊಂದಿಗೆ ಭಾಗವಹಿಸಬಹುದು.

ನೇರ ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿರುತ್ತದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08372 220609,  6363330688 ಕ್ಕೆ ಸಂಪರ್ಕಿಸಬಹುದು ಎಂದು ಪ್ರಭಾರಿ ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನೋಂದಣಿಯನ್ನು ನೇರ ಸಂದರ್ಶನದ ದಿನದಂದೇ ಮಾಡಿಸೇಬೇಕು ಎಂದು ತಿಳಿಸಿದ್ದಾರೆ.

ಜುಲೈ 27 ರಂದು ಉದ್ಯೋಗ ಮೇಳ

ಚಿತ್ರದುರ್ಗ ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಜುಲೈ 27 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿಕಾಂ, ಬಿಎಸ್.ಸಿ, ಬಿಬಿಎಂ ಮತ್ತು ಇತರೆ ಪದವೀಧರರು, 18 ರಿಂದ 30 ವಯೋಮಾನದವರಾಗಿರಬೇಕು. ಬಯೋಡಾಟಾ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋ ತರಬೇಕು. ಮೇಳದಲ್ಲಿ ಭಾಗವಹಿಸುವ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ.ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Leave a Comment