ಕೋಳಿ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಬಹಳಷ್ಟು ರೈತರಿಗೆ ಕೋಳಿ ಸಾಕಾಣಿಕೆ ಮಾಡಿ ಆರ್ಥಿಕವಾಗಿ ಅಬಿವೃದ್ಧಿಯಾಗಬೇಕೆಂಬ ಕನಸಿರುತ್ತದೆ. ಆದರೆ ಅದಕ್ಕೆ ಸರಿಯಾಗಿ ಕೋಳಿ ಸಾಕಾಣಿಕೆಯ ಬಗ್ಗೆ ಮಾಹಿತಿಯ ಕೊರತೆಯಿಂದಾಗಿ ಹಿಂಜರಿಯುತ್ತಾರೆ. ಅಂತಹ ರೈತರಿಗೆ ಮೂರು ದಿನಗಳ ಕಾಲ ಕೋಳಿ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.
ಹೌದು, ಕೋಳಿ ಸಾಕಾಣಿಕೆ ಕೃಷಿಯ ಉಪ ಕಸುಬಾಗಿ ಜನಪ್ರಿಯಗೊಳಿಸುವಲ್ಲಿ ಮತ್ತು ಆಧುನಿಕವಾಗಿ ತಿಳಿಸಿಕೊಡುವ ಉದ್ದೇಶದಿಂದ ಬೀದರ್ ಜಿಲ್ಲೆಯ ಜನವಾಡ ಹತ್ತಿರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಫೆಬ್ರವರಿ 3 ರಿಂದ 5 ರವರೆಗೆ ತರಬೇತಿ ಹಮ್ಮಿಕೊಳ್ಳಲಾಗಿದೆ. ಆಧುನಿಕ ಕೋಳಿ ಸಾಕಾಣಿಕೆ ಎಂಬ ಶೀರ್ಷಿಕೆಯಲ್ಲಿ ಮೂರು ದಿನಗಳ ಕಾಲ ತರಬೇತಿ ಆಯೋಜಿಸಲಾಗಿದೆ.
ಈ ತರಬೇತಿಯಲ್ಲಿ ಕೋಳಿ ಸಾಕಾಣಿಕೆಯನ್ನು ಲಾಭದಾಯಕವಾಗಿ ಮಾಡುವಲ್ಲಿ ವಿಭಿನ್ನ ಪದ್ಧತಿಗಳ ಅನುಸರಿಸಿ ಆಧುನಿಕವಾಗಿ ಕೋಳಿ ಸಾಕಾಣಿಕೆ, ಆರೋಗ್ಯ ನಿರ್ವಹಣೆಯಲ್ಲಿ ಸಮತೋಲನ ಆಹಾರತ ಮಹತ್ವ, ಕೋಳಿಗಳಲ್ಲಿ ಬರುವ ರೋಗಗಳು ಹಾಗೂ ಹತೋಟಿ ಕ್ರಮಗಳು, ವೈಜ್ಞಾನಿಕ ಕೊಟ್ಟಿಗೆ ನಿರ್ಮಾಣ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸೌಲಭ್ಯ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.
ಈ ತರಬೇತಿಯಲ್ಲಿ ಅನುಭವ ರೈತರಿಂದ ತರಬೇತಿ ನೀಡಲಾಗುವುದು. ಆಸಕ್ತಿಯುಳ್ಳ ರೈತರು ಕೃಷಿ ವಿಜ್ಞಾನ ಕೇಂದ್ರ, ಬೀದರ್ ನ ವಿಜ್ಞಾನಿಗಳಾದ ಡಾ. ಅಕ್ಷಯಕುಮಾರ ಮೊಬೈಲ್ ನಂಬರ್ 8147505715 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಕೆವಿಕೆ ಹಿರಿಯ ವಿಜ್ಞಾನಿ ಡಾ. ಸುನೀಲ ಕುಮಾರ ಎನ್.ಎಂ. ಕೋರಿದ್ದಾರೆ.
ಉಚಿತ ಸಹಾಯವಾಣಿ
ರೈತರಿಗೆ ಕೋಳಿ ಸಾಕಾಣಿಕೆ, ಕುರಿ ಮೇಕೆ ಸಾಕಾಣಿಕೆ, ಹೈನುಗಾರಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ರೈತರಿಗೆ ಮಾಹಿತಿ ನೀಡಲು ಉಚಿತ ಸಹಾಯವಾಣಿ ಆರಂಭವಾಗಿದೆ.
ರೈತರು ಮನೆಯಲ್ಲಿಯೇ ಕುಳಿತು ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಇದಕ್ಕಾಗಿ ರೈತರು ಶುಲ್ಕ ಪಾವತಿಸಬೇಕಿಲ್ಲ. ರೈತರು ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ರೈತರು ಯಾವ ಜಿಲ್ಲೆಗೆ ಸಂಬಂಧಿಸಿರುತ್ತಾರೆಯೋ ಆ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು.
ಇದನ್ನೂ ಓದಿ : ಕೃಷಿ ಇಲಾಖೆಯ ಸೌಲಭ್ಯ ಪಡೆಯಲು ರೈತರಿಗೆ ಫ್ರೂಟ್ಸ್ ಐಡಿ (ಸ್ವಾಭಿಮಾನ ರೈತ ಕಾರ್ಡ್) ಏಕೆ ಬೇಕು.? ಮೊಬೈಲ್ ನಲ್ಲಿಯೇ ಪಡೆಯಬಹುದು ಸ್ವಾಭಿಮಾನ ರೈತ ಕಾರ್ಡ್.. ಇಲ್ಲಿದೆ ಮಾಹಿತಿ
ರೈತರು ಉಚಿತ ಸಹಾಯವಾಣಿ 8277100200 ಗೆ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಕರೆ ಮಾಡಿ ಪಶುವೈದ್ಯರು ಮತ್ತು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು.
ಈ ಉಚಿತ ಸಹಾಯವಾಣಿಯಿಂದ ರೈತರು ಮನೆಯಲ್ಲಿಯೇ ಕುಳಿತು ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯುತ್ತಾರೆ. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹೀಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ರೈತರಿಗೆ ಮಾಹಿತಿ ನೀಡುತ್ತಾರೆ. ಸರ್ಕಾರ ಆರಂಭಿಸಿದ ಈ ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದಾರೆ.