ಇಂದಿನಿಂದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ

Written by Ramlinganna

Published on:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಮೈಚಾಂಗ್ ಚಂಡಮಾರು ರೂಪುಗೊಂಡಿದ್ದ, ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಜಿಟಿಜಿಟಿ ಮಳೆಯಾಗುವ ಸಾಧ್ಯತೆಯಿದೆ.

ಹೌದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೊಡಗು, ಚಾಮರಾಜನಗರ, ಹಾಸನದಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡಿಪಿಯಲ್ಲಿ ಡಿಸೆಂಬರ್ 4 ರಂದು ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 5 ಹಾಗೂ6ರಂದು ಹಗುರವಾದ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಭಾನುವಾರ ಮೋಡ ಕವಿದ ವಾತಾವರಣದ ಜೊತೆಗೆ ತಣ್ಣನೆಯ ಗಾಳಿ ಬೀಸಲಿದೆ.

ಇದನ್ನೂ ಓದಿ ಈ ಅರ್ಹ ರೈತರಿಗೆ ಬರಗಾಲ ಪರಿಹಾರ ಹಣ ಜಮೆ: ನಿಮ್ಮಹೆಸರು ಚೆಕ್ ಮಾಡಿ

ಮಂಗಳವಾರ ಡಿಸೆಂಬರ್ 5 ರಂದು ಬೆಳಗ್ಗೆ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದ ನೆಲ್ಲೂರ, ಮಲಚಿಮಟ್ಟಣಂ ನಡುವೆ ಮಾರುತಗಳು ಹಾದು ಹೋಗಲಿವೆ. 100 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪುದಚೆರಿಯ ಪೂರ್ವ ಆಗ್ನೆಯದಿಂದ 290 ಕಿ.ಮೀ ಚೆನೈಯಿಂದ 290 ಕಿ.ಮೀ ನೆಲ್ಲೂರನಿಂದ 420 ಕಿ. ಮೀ ಹಾಗೂ ಚಾಪಟ್ಲಾದಿಂದ530 ಕಿ.ಮೀ ದೂರದಲ್ಲಿ ಚಂಡಮಾರತವಿದೆ. ಕರಾವಳಿ  ಆಂಧ್ರಪ್ರದೇಶ, ರಾಯಲಸೀಮಾ, ತೆಲಂಗಾಣ, ಒಡಿಸ್ಸಾ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಚೆನೈನಲ್ಲಿ ಭಾರಿ ಮಳೆ-ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತ್ತ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಣಾಮ ರಾಜ್ಯದಲ್ಲಿ ಚೆನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತ್ತವಾಗಿವೆ.

ಇದನ್ನೂ ಓದಿ ಈ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರ ಬಿಡುಗಡೆ- ಸ್ಟೇಟಸ್ ಚೆಕ್ ಮಾಡಿ

ಮಿಚಾಂಗ್ ಚಂಡಮಾರುತ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ 5 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ? ಈ ನಂಬರಿಗೆ ಕರೆ ಮಾಡಿ

ನಿಮ್ಮೂರಿನಲ್ಲಿ ಮಳೆ ಆಗುತ್ತೋ ಇಲ್ಲವೋ ಎಂಬ ಮಾಹಿತಿ ಪಡೆಯಲು ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಬೇಕು. ಆಗ ನಿಮಗೆ ನಿಮ್ಮೂರಿನ ಸುತ್ತಮುತ್ತ ಯಾವಾಗ ಮಳೆ ಆಗುತ್ತದೆ ಎಂಬ ಮಾಹಿತಿ ಸಿಗುತ್ತದೆ. ಈ ಉಚಿತ ಸಹಾಯವಾಣಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು ಮನೆಯಿಂದ ಯಾವಾಗ ಬೇಕಾದರೂ ಕರೆ ಮಾಡಿ ಮಳೆಯ ಮಾಹಿತಿ ಪಡೆಯಬಹುದು.

 

Leave a Comment