ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆ

Written by Ramlinganna

Updated on:

Three days rain alert  ರಾಜ್ಯದಲ್ಲಿ ಇಂದಿನಿಂದ ಡಿಸೆಂಬರ್ 1 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬಾಗಲಕೋಟೆ, ರಾಯಚೂರು, ಕಲಬುರಗಿ, ಗದಗ, ಯಾದಗಿರಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಮಂಡ್ಯ, ದಾವಣಗೆರೆ, ಶಿವಮೊಗ್ಗ, ವಿಜಯನಗರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೌದು, ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಬೆನ್ನಲ್ಲೆರಾಜ್ಯದಲ್ಲಿಯೂ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ.

Three days rain alert  ಆಂಧ್ರಪ್ರದೇಶದಲ್ಲಿಯೂ ಮಳೆ

ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ರಾಯಲ್ ಸಿಮಾ  ಪ್ರಾಂತ್ಯ ಹಾಗೂ ಆಂಧ್ರದ ಕರಾವಳಿ ಪ್ರದೇಶದ ಸುತ್ತಮುತ್ತ ಬುಧವಾರ ಗುಡುಗು, ಸಿಡಿಲು ಸಹಿತ ಭಾರಿಮಳೆಯಾಗುವ ಸಾಧ್ಯತೆಯಿದೆ. ಇದೇ ಪರಿಸ್ಥಿತಿ ಗುರುವಾರವೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಂಡಮಾನ್ ನ ದಕ್ಷಿಣ ಭಾಗದ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಮಳೆ ಸಾಧ್ಯತೆ ದಟ್ಟವಾಗಿದೆ. ಬಂಗಾಳ ಕೊಲ್ಲಿಯ ಆಗ್ನೆಯ ಭಾಗದಲ್ಲಿ ಉಂಟಾದ ಒತ್ತಡದ ಪರಿಣಾಮ ಪಶ್ಚಿಮ ಹಾಗೂ ವಾಯುವ್ಯ ದಿಕ್ಕಿನೆಡೆಗೆ ಮೋಡಗಳು ಸಾಗುತ್ತಿವೆ. ಇದೇ ಪರಿಸ್ಥಿತಿ ನವೆಂಬರ್ 30 ರವರೆಗೆ ಇರಲಿದೆ.

ಇದನ್ನೂ ಓದಿ ಆಧಾರ್ ಕಾರ್ಡಿಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ? ಇಲ್ಲೇ ಚೆಕ್ ಮಾಡಿ

ಅದೇ ರೀತಿ ಆಂಧ್ರದ ಕರಾವಳಿ ಹಾಗೂ ರಾಯಲಸೀಮಾ ಪ್ರದೇಶದಲ್ಲಿ ಡಿಸೆಂಬರ್ 4 ರಿಂದ 6 ರವರೆಗೆ ಭಾರಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ಚಂಡಮಾರುತ ಗಂಭೀರ ಸ್ವರೂಪ ಪಡೆದುಕೊಳ್ಳಲಿದೆ ಎಂದು  ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡಿನ ರೈತರಲ್ಲಿ ಆತಂಕ

ಮಲೆನಾಡಿನಲ್ಲಿಅಕಾಲಿಕ ಮಳೆಯಿಂದಾಗಿ ಕಾಫಿ ಹಾಗೂ ಭತ್ತ ಬೆಳೆವ ರೈತರು ತೀವ್ರ ಆತಂಕ ಪಡುವಂತಾಗಿದೆ. ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದೆ ಕ್ಷಾಮ ಎದುರಾಗುವ ಸಾಧ್ಯತೆಯಿದೆ. ಈಗ ಕಾಫಿ, ಭತ್ತ, ಅಡಕೆ ಕೊಯ್ಲಿನ ಸಂದರ್ಭದಲ್ಲಿ ಆಗಾಗ ಅಕಾಲಿಕ ಮಳೆ, ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿರುವುದರಿಂದ ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಈ ವಾರ 3 ರಿಂದ ನಾಲ್ಕು ದಿನ ಮಲೆಯನಾಡಿನಲ್ಲಿ ಮಳಯಾಗುವ ಸಾಧ್ಯತೆಯಿದೆ ಹಾಗಾಗಿ ಬಹುತೇಕ ಕಾಫಿ ತೋಟಗಗಳಲ್ಲಿ ಅರೇಬಿಕಾ ಕಾಫಿ ಗಿಡಗಳಲ್ಲಿ ಹಣ್ಣಾಗಿವೆ. ಹಾಗಾಗಿ ರೈತರು ಆತಂಕದಲ್ಲಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ 29 ರಂದು ಸೈಕ್ಲೋನ್?

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 29 ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತವು ಪಶ್ಚಿಮ ವಾಯುವ್ಯಕ್ಕೆ ಚಲಿಸುವ ನಿರೀಕ್ಷೆಯಿದೆ. ನವೆಂಬರ್ 29 ರ ಬಳಿಕ ಆಗ್ನೆಯ ಬಂಗಾಳಕೊಲ್ಲಿ ಕ್ಷೀಣಿಸಿ, ಅದು ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ.

ಈ ನಂಬರಿಗೆ ಕರೆ ಮಾಡಿ ನಿಮ್ಮೂರಿನ ಮಳೆಯ ಮಾಹಿತಿ ಪಡೆಯಿರಿ

ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ನೀವು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, ವರುಣಮಿುತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ ಎಂಬುದರ ಬಗ್ಗೆ ತಿಳಿದುಕೊಳ್ಳಬಹುದು. ಈ ಉಚಿತ ಸಹಾಯವಾಣಿ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತದೆ.

Leave a Comment