Today again rain alert : ಕರಾವಳಿ ಹೊರತುಪಡಿಸಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು,ದಾವಣಗೆರೆ, ಮಂಡ್ಯ, ಶಿವಮೊಗ್ಗ, ವಿಜಯನಗರ ಹಾಗೂ ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಉಷ್ಣ ವಾತಾವರಣ ಇರಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಶನಿವಾರದಿಂದ, ಉತ್ತರ ಕನ್ನಡದಲ್ಲಿ ಸೋಮವಾರದಿಂದ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಇದೇ 17 ರವರೆಗೂ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.
Today again rain alert 10 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ನೆತ್ತಿ ಸುಡುವ ಬಿಸಿಲಿನಲ್ಲೇ ಯುಗಾದಿ ಹಬ್ಬದ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ ಜನತೆಗೆ ಕೊನೆಗೂ ಮಳೆರಾಯ ತಂಪಿನ ಸಿಂಚನ ನೀಡಿದ್ದಾನೆ.
ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೆಲಕಾಲ ಭಾರಿ ಗಾಳಿಸಹಿತ ಮಳೆ ಸುರಿದಿದೆ.ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನ ಕೊಂಚ ನಿರಾಳರಾಗಿದ್ದಾರೆ.
ಇದನ್ನೂ ಓದಿ : see village map: ನಿಮ್ಮ ಜಮೀನಿನ ಮ್ಯಾಪ್ ಇಲ್ಲೇ ಚೆಕ್ ಮಾಡಿ
ಕಲ್ಯಾಣ ಕರ್ನಾಟಕದ ಬಹುತೇಕ ಕಡೆ ತಾಪಮಾನ 40 ಡಿಗ್ರಿ ದಾಟಿ ಜನ ಬಿಸಿಲಿಗೆ ಬೆಂಡಾಗಿದ್ದರು. ಮನೆ ಹೊರಗ ಬರದೆ ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದರು. ವಿಜಯಪುರ, ಕಲಬುರಗಿ, ಧಾರವಾಡ, ಗದಗ, ಯಾದಗಿರಿ, ಬೀದರ್, ರಾಯಚೂರು, ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಇತರ ಕಡೆ ಮಳೆಯು ತಂಪಿನ ಅನುಭವ ನೀಡಿದ್ದಾನೆ.
ವಿಜಯುಪುರದಲ್ಲಿ ಸಿಡಿಲಿಗೆ ಬಲಿ
ವಿಜಯಪುರ ಜಿಲ್ಲೆಯಲ್ಲಿಸಿಡಿಲಬ್ಬರದೊಂದಿಗೆ ಸುರಿದ ಮಳೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಇಂಡಿ ತಾಲೂಕಿನಲ್ಲಿ ಗಿಡದ ಕೆಳಗಡೆ ಆಡುತ್ತಿದ್ದ ಬಾಲಕ ಬೀರಪ್ಪ, ಮಸಳಿ ಬಿ. ಕೆ ಗ್ರಾಮದ ಸೋಮಶೇಖರ ಕಾಶಿನಾಥ ಪಟ್ಟಣಶೆಟ್ಟಿ, ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿ ಸುನಂದಾ ಶ್ರೀಮಂತ ಡೊಳ್ಳಿ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಇದರ ಜೊತೆಗೆ ಎಮ್ಮೆ ಸೇರಿ ಕೆಲ ಜಾನುವಾರುಗಳೂ ಸಿಡಿಲಬ್ಬರಕ್ಕೆ ಬಲಿಯಾಗಿವೆ.
ಮಲೆನಾಡಿನಲ್ಲಿ ಕೆಲ ದಿನಗಳ ಹಿಂದೆ ಮಳೆಯಾಗಿ ಆ ನಂತರ ಬಿಸಿಲ ತಾಪ ಮತ್ತಷ್ಟು ಏರಿಕೆಯಾಗಿತ್ತು.ಇದೀಗ ಈ ಭಾಗದಲ್ಲಿ ಮತ್ತೆ ಮಳೆಯಾಗಿದ್ದು, ಕಾಫಿ ಬೆಳೆಗಾರರಲ್ಲಿ ಸಂತಸ ಮನೆ ಮಾಡಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು, ಕೆರೆಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು ಸಿಡಿಲುಸಹಿತ ಸಾಧಾರಣ ಮಳೆಯಾಗಿದೆ.
ಇಂದು ಯಾವ ಯಾವ ಊರಲ್ಲಿ ಮಳೆಯಾಗುತ್ತದೆ? ಈ ನಂಬರಿಗೆ ಕರೆ ಮಾಡಿ
ಇಂದು ಯಾವ ಯಾವ ಭಾಗದಲ್ಲಿ ಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ಕೇಳಲು ನೀವು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು, ನಿಮ್ಮ ಬಳಿಯಿರುವ ಮೊಬೈಲ್ ನಿಂದಲೇ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಬೇಕು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ನಿಮ್ಮೂರಿನಲ್ಲಿ ಇಂದು ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಗೊತ್ತಾಗುತ್ತದೆ. ಇದರೊಂದಿಗೆ ನಾಳೆ ನಾಡಿದ್ದು ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿಯೂ ಸಿಗುತ್ತದೆ. ಇನ್ನೇಕೆ ತಡ, ಕೂಡಲೇ ನೀವು ನಿಮ್ಮ ಫೋನ್ ನಿಂದ 92433 45433 ಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಿರಿ. ಮಳೆಯೊಂದಿಗೆ ಗಾಳಿಯ ದಿಕ್ಕು. ಗಾಳಿಯ ವೇಗದ ಮಾಹಿತಿ ಸಹ ನೀಡಲಾಗುವುದು.