today also here rain alert ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಮೇ 6 ಮತ್ತು 7 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಎರಡು ದಿನಗಳ ಕಾಲ ಗುಡುಗು ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕಳೆ ಒಂದು ವಾರದಿಂದ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುತ್ತಿದೆ. ರಣ ಬಿಸಿಲಿನಿಂದ ಹೈರಾಣಾಗುತ್ತಿರುವ ಜನತೆಗೆ ಕೊಂಚ ನೆಮ್ಮದಿ ದೊರೆತಂತಾಗುತ್ತಿದೆ. ಸಂಜೆ ಮತ್ತು ರಾತ್ರಿ ಹೊತ್ತಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ, ಕೊಡಗು, ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾರು, ತುಮಕೂರು, ರಾಮನಗರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
today also here rain alert ಮೇ 6 ರಂದು ಉತ್ತರ ಕರ್ನಾಟಕ್ಕೆ ಮಳೆ
ಉತ್ತರ ಕರ್ನಾಟಕದಲ್ಲಿಯೂ ಮೇ 6 ರಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಡುಗು ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ.
ಬೀದರ್,ಯಾದಗಿರಿ, ಕಲಬುರಗಿ, ಬಳ್ಳಾರಿ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮೇ 7 ರಂದು ಸಹಿತ ರಾಜ್ಯದ ವಿವಿಧ ಕಡೆ ಮಳೆಯಾಗಲಿದೆ.ಕರಾವಳಿಯ ಉಡುಪಿ ಜಿಲ್ಲೆಗೂ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇಲ್ಲಿ ಗುಡುಗು ಸಹಿಡಿಲು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 8 ರಂದು ಸಹಿತ ರಾಜ್ಯದ ಕೆಲವು ಕಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಇಕೆವೈಸಿ ಪೆಂಡಿಂಗ್ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





