Today full rain : ಕರಾವಳಿ ಹಾಗೂ ಮಲೆನಾಡಿನ ಐದು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಉದ್ದಕ್ಕೂ ಬಿರುಗಾಳಿಯ ಅರ್ಭಟ ಹೆಚ್ಚಿರುವ ಸಾಧ್ಯತೆಯಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು.ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸಬೇಕು. ಸಮುದ್ರ ದಡದಲ್ಲಿ ಮನೋರಂಜನಾ ಚಟುವಟಿಕೆಗಳನ್ನು ನಡೆಸುವಾಗ ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.
ಸೋಮವಾರೂ ಕೆಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಇದೇ 17 ರವರೆಗೆ ಕರಾವಳಿಯ ಸೇರಿ ರಾಜ್ಯದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಮತ್ತುನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಒಳನಾಡಿನ ಬೆಳೆಗಾವಿಜಿಲ್ಲೆಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗದಗ, ಕೊಪ್ಪಳ, ಬಳ್ಳಾರಿ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಯಚೂರು, ಬೀದರ್ ಜಿಲ್ಲೆಗಳಿಗೆ ಮತ್ತು ಬಾಗಲಕೋಟೆ, ಧಾರವಾಡ ಮೈಸೂರು ಜಿಲ್ಲೆಗೆ ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಮುಂದಿನ 48 ಗಂಟೆಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Today full rain ಈ ಜಿಲ್ಲೆಗಳಲ್ಲಿಯೂ ಮಳೆ
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆಯೊಂದಿಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಧನ್ನೂ ಓದಿ ಪಿಎಂ ಕಿಸಾನ್ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಧಾರವಾಡ, ಹಾಸನ, ಕೊಡಗು ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯೊಂದಿಗೆ ಹಗುರ ಮಳೆಯಾಗಲಿದೆ.
ಬೆಂಗಳೂರು ನಗರಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬೇಕು ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ಅಲ್ಲಿ ನಿಮಗೆ ಹವಾಮಾನ ವರದಿ ಕಾಣಿಸುತ್ತದೆ.