ಇಂದು ಭಾರಿ ಮಳೆಯಾಗುವ ಸಾಧ್ಯತೆ- ಆರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

Written by Ramlinganna

Published on:

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ.

ಹೌದು, ನೈರುತ್ಯ ಮುಂಗಾರು ಚುರುಕುಗೊಂಡಿದ್ದರಿಂದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾದ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆ ಜಿಲ್ಲೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಆರೇಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು , ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆ ಜುಲೈ 23 ಮತ್ತು 24 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕೆಲವೆಡೆ ಶನಿವಾರ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಬಿರುಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಹಾಗೂ ಕರಾವಳಿಯಲ್ಲಿ 30-40 ಕಿ.ಮೀ ವೇಗವಿತ್ತು.

ಬೆಂಗಳೂರಿನಲ್ಲಿ ಹಗುರ ಮಳೆ

ಬೆಂಗಳೂರು ನಗರದಲ್ಲಿ ಜುಲೈ 23 ರಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜುಲೈ 23 ಹಾಗೂ 24 ರಂದು ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ ಜುಲೈ 27 ರಂದು ಪಿಎಂ ಕಿಸಾನ್ 14ನೇ ಕಂತಿನ ಹಣ ರೈತರ ಖಾತೆಗೆ ಜಮೆ ಯಾರ್ಯಾರಿಗೆ ಜಮೆಯಾಗಲಿದೆ ಚೆಕ್ ಮಾಡಿ

ಜುಲೈ 24 ರಂದು ಸಹ 115.6 ಮಿ.ಮೀ ನಿಂದ 204ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಅಲರ್ಟ್ ನೀಡಲಾಗಿದೆ.

ಕಲಬುರಗಿ ಜಿಲ್ಲಾದ್ಯಂತ ಮುಂದಿನ ಒಂದುವಾರ ಮಳೆ

ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸತತ ಮಳೆಯಾಗುತ್ತಿದೆ. ಮುಂದಿನ ಒಂದು ವಾರ ನಿರಂತರ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜಿಲ್ಲೆ.ಯ ನದಿ, ಹಳ್ಳ, ಕೆರೆ ದಂಡೆಗೆ ಸಾರ್ವಜನಿಕರು ಹೋಗದಂತೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.

ಇನ್ನೂ ನದಿ ದಂಡೆಗೆ ಜಾನುವಾರುಗಳ್ನು ಬಿಡಬಾರದು. ದಡದ ಬಳಿ ಬಟ್ಟೆ ಸ್ವಚ್ಛಗೊಳಿಸುವುದು ಈಜಾಡುವುದನ್ನು ಮಾಡಬಾರದು. ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸಬಾರದು ಎಂದು ತಿಳಿಸಿರುವ ಅವರು ನದಿ ದಂಡೆಯ್ಲಲಿ ಬರುವ ದೇವಸ್ಥಾನ, ಮಸೀದಿ ಪ್ರಾರ್ಥನಾ ಮಂದಿರದಲ್ಲಿ ಪೂಜೆ ಸಲ್ಲಿಸುವವರನ್ನು ನದಿ ದಂಡೆಗೆ ಹೋಗದಂತೆ ಮನವಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರವಾಹ ಕುರಿತು ಡಂಗುರ ಸಾರಿಸಿ ಸಾರ್ವಜನಿಕರಲ್ಲಿ ಪ್ರಚೂರಪಡಿಸುವಂತೆ ಅವರು ತಿಳಿಸಿದ್ದಾರೆ.

ಭಾರಿ ಮಳೆಯಿಂದ ಉಂಟಾಗುವ ನೆರೆ ಪರಿಸ್ಥಿತಿಯನ್ನು ನಿಯಂತ್ರಣ ಮತ್ತು ಯಾವುದೇ ಅಹಿತಕರ ಭಟನೆಯಾಗದಂತೆ ಮುನ್ನೆಚ್ಚರಿಕೆ ಯನ್ನು ವಹಿಸಬೇಕಾಗಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಮತ್ತು ಪ್ರತಿ ದಿನ ದಿನದ ನೆರೆಹಾನಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹ, ನೆರೆ ಹಾವಳಿ ಸಂದರ್ಭದವಲ್ಲಿ ವಿಪತ್ತು ಕಾರ್ಯ ತುರ್ತಾಗಿ ಕೈಗೊಳ್ಳಬೇಕು. ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದಿರುವ ಜಿಲ್ಲಾ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯಾಗಿರುವ ಡಿ.ಸಿ. ಬಿ. ಫೌಜಿಯಾ ತರನ್ನುಮ್ ಅವರು, ನಿರ್ಲಕ್ಷ ವಹಿಸುವಂತಹ ಅಧಿಕಾರಿ ಸಿಬ್ಬಂದಿಗಳ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ2005 ರಂತೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.ಮಳೆ ನಿರಂತರ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ತಾಣಗಳಲ್ಲಿ ಸೆಲ್ಫಿ, ಫೋಟೋಶೂಟ್ ಮಾಡಬಾರೆದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment