Today heavy rain alerts ಕರ್ನಾಟಕದ ವಿವಿಧ ರಾಜ್ಯಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಸೋಮವಾರ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಹೌದು, ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ ವರೆಗೆ ಮಳೆಯಾಗುವ ಲಕ್ಷಣ ಇದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನು ಇಲಾಖೆ ಮುನ್ಸೂಚನೆ ನೀಡಿದೆ.
Today heavy rain alerts ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ?
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಪ್ರೀಲ್ 22 ರಂದು ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಮಗಳೂರು, ಯಾದಗಿರಿ, ಚಿತ್ರದುರ್ಗ, ಮಂಡ್ಯ, ಶಿವಮೊಗ್ಗ, ತುಮಕೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಗುಡುಗು ಸಿಡಿಲು, ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯಲ್ಲಿ ಗಾಳಿಯು 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿದೆ. ಉತ್ತರ ಒಳನಾಡಿನಲ್ಲಿ ಗಾಳಿಯು 50 ರಿಂದ 60 ಕಿ.ಮೀ ವೇಗದಲ್ಲಿ ಬೀಸಲಿದೆ.
ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ?
ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು, ನಿಮಗೆ ಹವಾಮಾನ ವರದಿ ಸಿಗುತ್ತದೆ. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ರೈತರು, ಸಾರ್ವಜನಿಕರು ಮನೆಯಿಂದಲೇ ಮಳೆಯ ಮಾಹಿತಿಯನ್ನು ಪಡೆದುಕೊಳ್ಳಬಹುದು. ಈ ಕರೆ ಸಂಪೂರ್ಣ ಉಚಿತವಾಗಿರುತ್ತದೆ. ಇದಕ್ಕಾಗಿ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.
ಮಳೆಯ ಮಾಹಿತಿ ನೀಡಲು ಆ್ಯಪ್ ಗಳಿವೆ
ಹೌದು, ಮೂರ್ನಾಲ್ಕು ದಿನ ಮೊದಲೇ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ರಾಜ್ಯ ಕೇಂದ್ರ ಸರ್ಕಾರಗಳು ಆ್ಯಪ್ ನ್ನು ಅಭಿವೃದ್ಧಿಪಡಿಸಿದೆ.
ಇದನ್ನೂ ಓದಿ : ಪಹಣಿಗೆ ಆಧಾರ್ ಲಿಂಕ್ ಒಂದೇ ನಿಮಿಷದಲ್ಲಿ ಹೀಗೆ ಮಾಡಿ
ಈ ಆ್ಯಪ್ ಸಹಾಯದಿಂದ ಸಾರ್ವಜನಿಕರು ಮಳೆಯ ಮಾಹಿತಿಯನ್ನು ಪಡೆದುಕೊಳ್ಳಬಹುದು.
ರೈತರು ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳುವುದು ಹೇಗೆ?
ಮೇಘದೂತ್ ಆ್ಯಪ್ ಮೊಬೈಲ್ ನಲ್ಲೇ ಇನಸ್ಟಾಲ್ ಮಾಡಲು ತಮ್ಮ ಫೋನ್ ನಲ್ಲಿರು ಗೂಗುಲ್ ಪ್ಲೇ ಸ್ಟೋರ್ ನಲ್ಲಿ Meghdoot ಎಂದು ಟೈಪ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ನಿಮಗೆ ಕಾಣಿಸುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ಈ ಆ್ಯಪ್ ಕನ್ನಡದಲ್ಲಿಯೂ ಲಭ್ಯವಿರುವುದರಿಂದ ನೀವು ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.