Today heavy rain red alert : ರಾಜ್ಯದ ವಿವಿಧೆಡೆ ಭಾನುವಾರದಿಂದ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳಕ್ಕೆ ಮುಂಗಾರು ಪ್ರವೇಶದಿಂದ ರಾಜ್ಯದಲ್ಲಿ ಮಳೆ ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಹೌದು, ರೈತ ಮಿತ್ರರೇ, ಮೇಲೆ ತಿಳಿಸಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಧಾರವಾಡ, ಮಂಡ್ಯ, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಲಿಗೆ ಭಾನುವಾರಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಕಲಬುರಗಿ, ಬೀದರ್, ಹಾವೇರಿ, ಶಿವಮೊಗ್ಗ, ವಿಜಯಪುರ, ಬೀದರ್, ರಾಮನಗರ ಜಿಲ್ಲೆಗಳಲ್ಲಿಯೂ ಭಾನುವಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ ನಿಮ್ಮ ಸರ್ವೆ ನಂಬರ್ ಮ್ಯಾಪ್ ಹೀಗೆ ಡೌನ್ಲೋಡ್ ಮಾಡಿ
ಈ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳ ಕೆಲವೆಡೆ 30 ರಿಂದ 40 ಕಿ. ಮೀ ವೇಗದಲ್ಲಿ,ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 40 ರಿಂದ50 ಕಿ. ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಕರ್ನಾಟಕ ಕರಾವಳಿ ಮತ್ತು ಪೂರ್ವ ಮಧ್ಯ ಅರಬ್ಬಿ ಸಮುದ್ರದ ಕೆಲವು ಭಾಗಗಳಲ್ಲಿ ಗಂಟೆಗೆ 65 ಕಿ.ಮೀ ವರೆಗೂ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಭಾರಿ ಗಾಳಿಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Today heavy rain red alert ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಪೂರ್ವ ಮುಂಗಾರಿನ ಅಬ್ಬರ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ಒಂದು ವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಹೀಗಾಗಿ ಮೀನುಗಾರರು ವಾಪಸ್ಸಾಗಿದ್ದಾರೆ.
ಇನ್ನೂ ಮೂರು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ?
ಸಾಮಾನ್ಯವಾಗಿ ಜೂನ್ ಮೊದಲ ವಾರ ರಾಜ್ಯದಲ್ಲಿ ಮುಂಗಾರುಮಳೆ ಪ್ರವೇಶಿಸಲಿದೆ. ಈ ಬಾರಿ ಮೇ 27 ಅಥವಾ ಮೇ 28 ರವೇಳೆಗೆ ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆಯಿದೆ. ಪೂರ್ವ ಮುಂಗಾರು ಅಬ್ಬರ ತಗ್ಗುವ ಮೊದಲೇ ಮುಂಗಾರು ಕೂಡ ಪ್ರವೇಶಿಸುತ್ತಿರುವುದರಿಂದ ಈ ಸಲ ಭಾರಿ ಮಳೆಯ ನಿರೀಕ್ಷೆ ಇದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.