ಇಂದು ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ಯೆಲ್ಲೋ ಅಲರ್ಟ್ ಘೋಷಣೆ

Written by Ramlinganna

Published on:

Today night rain alert : ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ಹಾಗೂ 2 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಹೌದು, ರಾಜ್ಯದ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, 17 ಜಿಲ್ಲಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Today night rain alert  ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?

ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಮೇ 24 ರಂದು ಗುಡುಗು ಮಿಂಚು, ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಿದ್ದು, ಗುಡುಗು ಮಿಂಚಿನ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಮೇ 25 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿಯಲ್ಲಿ ಸಾಧಾರಣದಿಂದ ಕೂಡಿ ಮಧ್ಯಮ ಮಳೆ ಬೀಳುವ ಸಾಧ್ಯತೆ ಇದೆ.

ಆರೇಂಜ್ ಅಲರ್ಟ್ ನಲ್ಲಿ ಬಿರುಗಾಳಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.

ಮಳೆ ಬಂದಾಗ ಮರಗಳು, ಶಿಥಿಲಗೊಂಡ ಮನೆ, ಕಟ್ಟಡ, ಮರಗಳ ಕೆಳಗೆ ನಿಲ್ಲದೆ, ಸುಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕೆಂದು ಹವಾಮಾನ ಇಲಾಖೆ ತಜ್ಞೆ ಡಾ. ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ :  ಭಾಗ್ಯಲಕ್ಷ್ಮೀ ಯೋಜನೆ 18 ವರ್ಷ ಪೂರ್ಣಗೊಂಡ ಮಕ್ಕಳ ಖಾತೆಗೆ ಹಣ ಜಮಾ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment