Today Pmkisan fund released : ಇಂದು ಪಿಎಂ ಕಿಸಾನ್ ಯೋಜನೆಯ16ನೇ ಕಂತು ಮಧ್ಯಾಹ್ನ 4 ಗಂಟೆಗೆ ರೈತರ ಖಾತೆಗೆ ಜಮೆಯಾಗಲಿದೆ. ಹೌದು, ಇಂದು ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಗಲಿದೆ. ಇಂದು ಪಿಎಂ ಕಿಸಾನ್ ಯೋಜನೆಯ16ನೇ ಕಂತು ಮಧ್ಯಾಹ್ನ 4 ಗಂಟೆಗೆ ರೈತರ ಖಾತೆಗೆ ಜಮೆಯಾಗಲಿದೆ. ಹೌದು, ಇಂದು ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಗಲಿದೆ. ಮಹಾರಾಷ್ಟ್ರದ ಯವತಮಾಲ್ ಜಿಲ್ಲೆಯಿಂದ ದೇಶದ ರೈತರಿಗೆ 16ನೇ ಕಂತನ್ನು ದೇಶದ ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆ ಪಿಎಂ ಕಿಸಾನ್ ಯೋಜನೆಯ ಹಣ ಪಡೆದ ರೈತರಿಗೆ ಇದೊಂದು ಸಂತಸದ ಸುದ್ದಿಯಾಗಿದೆ. ಇನ್ನೂ ಯಾವ ದಿನಾಂಕ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ ಎಂಬುದನ್ನು ಕಾಯುವ ಅಗತ್ಯವಿಲ್ಲ. ಅತೀ ಶೀಘ್ರದಲ್ಲಿ ಅಂದರೆ ಇಂದೇ ಮಧ್ಯಾಹ್ನ 4ಗಂಟೆಗೆ ಹಣ ರೈತರ ಖಾತೆಗೆ ಸೇರಲಿದೆ. ಯಾವ ಯಾವ ರೈತರ ಖಾತೆಗೆ ಹಣ ಸೇರಲಿದೆ? ಪಿಎಂ ಕಿಸಾನ್ ಹಣ ಜಮೆಯಾಗದಿದ್ದರೆ ಯಾರಿಗೆ ಸಂಪರ್ಕಿಸಬೇಕು? ಏಕೆ 16 ನೇ ಕಂತು ಜಮೆಯಾಗಲಿಲ್ಲ ಎಂಬುದನ್ನು ರೈತರು ಮೊಬೈಲ್ ನಲ್ಲೇ ತಿಳಿದುಕೊಳ್ಳಬಹುದು.
Today Pmkisan fund released ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಿಲಿದೆ?
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಹಾಗೂ ಅರ್ಹತೆ ಪಡೆದ ರೈತರೆಲ್ಲರಿಗೂ ಪಿಎಂ ಕಿಸಾನ್ ಹಣ ಜಮೆಯಾಗಲಿದೆ. ಇದರೊಂದಿಗೆ ಇಕೆವೈಸಿ ಯಾರು ಯಾರು ಮಾಡಿಸಿದ್ದಾರೋ ಆ ರೈತರಿಗೆಲ್ಲರಿಗೂ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.
ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.
ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ. ಎ ದಿಂದ ಹೆಸರು ಆರಂಭವಾಗುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದರ ಪ್ರಕಾರ ಕೆಳಗೆ ನೀಡಲಾದ ಮುಂದಿನ ಪೇಜ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರನ್ನು ಸುಲಭವಾಗಿ ಚೆಕ್ ಮಾಡಬಹುದು.
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೇ? ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಗೆ ನಿಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಓಟಿಪಿ ಬೇಸ್ಡ್ ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ನಂಬರ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ. ಇಕೆವೈಸಿ ಆಗಿದ್ದರೆ EKYC done successfully ಎಂಬ ಮೆಸೆಜ್ ಕಾಣಿಸುತ್ತದೆ.
ಪಿಎಂ ಕಿಸಾನ್ ಯೋಜನೆಯ 15ನೇ ಕಂತು ಜಮೆಯಾಗಿಲ್ಲವೇ
ಪಿಎಂ ಕಿಸಾನ್ ಯೋಜನೆಯ 15ನೇ ಕಂತು ಜಮೆಯಾಗಿಲ್ಲವೇ? ಯೋಜನೆಯ ಸಹಾಯವಾಣಿ ನಂಬರ್ ಗೆ ಕರೆ ಮಾಡಬಹುದು. ಹೌದು, 155261 ಅಥವಾ 01124300606 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು.