Today pmkisan release : ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಕರ್ನಾಟಕ ರಾಜ್ಯದ 41.54 ಲಕ್ಷ ರೈತರ ಖಾತೆಗೆ ಇಂದು ಪಿಎಂ ಕಿಸಾನ್ ಹಣ ಜಮೆಯಾಗಲಿದೆ.
ಹೌದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯ 23ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ದಿನಾಂಕ ನಿಗದಿಯಾಗಿದೆ.
ಪ್ರಧಾನಮಂತ್ರಿಗಳು ಜೂನ್ 20 ರಂದು ಪಶ್ಛಿಮ ಬಂಗಾಳ ರಾಜ್ಯದ ತಾರಕೇಶ್ವರ, ಹುಗ್ಲಿಯಲ್ಲಿ ಸಾಯಂಕಾಲ 4 ಗಂಟೆಗೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ಅಧಿಕೃತವಾಗಿ ಪಿಎಂ ಕಿಸಾನ್ ಹಣ ವರ್ಗಾವಣೆ ಮಾಡಲಿದ್ದಾರೆ.
ಈ ವಿಶೇಷ ದಿನವನ್ನು ಪಿಎಂ ಕಿಸಾನ್ ಉತ್ಸವ ಎಂದು ಆಚರಿಸಲಾಗುತ್ತಿದೆ.
ಪಿಎಂ ಕಿಸಾನ್ ಯೋಜನೆಯಡಿ ಕರ್ನಾಟಕ ರಾಜ್ಯದ ಒಟ್ಟು 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟಾರೆ 830.832 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಜಮೆಯಾಗಲಿದೆ.
ಏನಿದು ಪಿಎಂ ಕಿಸಾನ್ ಯೋಜನೆ
ಪಿಎಂ ಕಿಸಾನ್ ಯೋಜನೆಯನ್ನು ರೈತರಿಗೆ ಆರ್ಥಿಕ ನೆರವು ನೀಡಲು ಯೋಜನೆ ಆರಂಭಿಸಲಾಗಿದೆ. ಈ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ಉತ್ತಮ ಇಳುವರಿ ಪಡೆಯಲು ನೆರವಾಗುವಂತೆ ವಾರ್ಷಿಕವಾಗಿ ಒಟ್ಟು 6000 ರೂಪಾಯಿಗಳ ಆರ್ಥಿಕ ಸಹಾಯ ನೀಡಲಾಗುತ್ತದೆ.
Today pmkisan release ಕಂತುಗಳ ವಿವರ
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಪ್ರತಿ ತಿಂಗಳು 2000 ರೂಪಾಯಿಗಳಂತೆ ಜಮೆ ಮಾಡಲಾಗುವುದು. ವಾರ್ಷಿಕವಾಗಿ 6 ಸಾವಿರ ರೂಪಾಯಿಯಂತೆ ಸಹಾಯ ನೀಡಲಾಗುತ್ತದೆ.
ಕಂತುಗಳ ವಿವರ ಈ ಮೊತ್ತವನ್ನು ತಲಾ 2 ಸಾವಿರ ರೂಪಾಯಿಗಳಂತೆ ಮೂರು ಸಮಾನ ಕಂತುಗಳಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.
ಇದನ್ನೂ ಓದಿ ಹನಿ ನೀರಾವರಿ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನ
ಕರ್ನಾಟಕದಲ್ಲಿ ಫೆಬ್ರವರಿ 2019 ರಿಂದ ಈ ಯೋಜನೆ ಜಾರಿಯಲ್ಲಿದ್ದು, 1-02-2019 ರ ಅನ್ವಯ ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಗಳು (ಗಂಡ, ಹೆಂಡತಿ ಹಾಗೂ ಅಪ್ರಾಪ್ತ ಮಕ್ಕಳು) ಇದರ ಪ್ರಯೋಜನ ಪಡೆಯುತ್ತಿದ್ದಾರೆ.
ಪ್ರದಾನ ಮಂತ್ರಿಗಳ ಈ ನೇರ ನಗದು ವರ್ಗಾವಣೆ ಪ್ರಕ್ರಿಯೆಯಿಂದಾಗಿ ರಾಜ್ಯದ ಲಕ್ಷಾಂತರ ರೈತ ಕುಟುಂಬಗಳ ಕೃಷಿ ವೆಚ್ಚಕ್ಕೆ ಸಕಾಲದಲ್ಲಿ ಆರ್ಥಿಕ ಆಸರೆ ಸಿಕ್ಕಂತಾಗಲಿದೆ.
Pm kisan release amount ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸೆಲೆಕ್ಟ್ ಸ್ಟೇಟ್ ನಲ್ಲಿ ನಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಊರಿನಲ್ಲಿ ಯಾರು ಯಾರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿದ್ದಾರೆ ಅವರ ಹೆಸರು ಕಾಣಿಸುತ್ತದೆ.
ಪಿಎಂ ಕಿಸಾನ್ ಯೋಜನೆಯ ಹಣ ಯಾರು ಯಾರಿಗೆ ಜಮೆಯಾಗಲಿದೆ
ಪಿಎಂ ಕಿಸಾನ್ ಯೋಜನೆಯ ಹಣ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ಹಣ ಜಮೆಯಾಗುವುದಿಲ್ಲ. ಪಿಎಂ ಕಿಸಾನ್ ಫಲಾನುಭವಿಗಳು ಇಕೆವೈಸಿ ಮಾಡಿಸಿರಬೇಕು. ನಂತರ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿರಬೇಕು. ಫ್ರೂಟ್ಸ್ ಐಡಿ ಇಲ್ಲದಿದ್ದರೆ ಮುಂದಿನ ಕಂತು ಜಮೆಯಾಗುವುದಿಲ್ಲ. ಇನ್ನೂ ಸಮಯವಾಕಾಶವಿದೆ. ಯಾರು ಯಾರು ಫ್ರೂಟ್ಸ್ ಐಡಿಗೆ ನೋಂದಣಿ ಮಾಡಿಸಿಲ್ಲವೋ ಅವರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಇದಕ್ಕೆ ಆಧಾರ್ ಕಾರ್ಡ್. ಬ್ಯಾಂಕ್ ಪಾಸ್ ಬುಕ್ ಹಾಗೂ ಜಮೀನಿನ ಸರ್ವೆ ನಂಬರ್ ಪಹಣಿ ಬೇಕಾಗುತ್ತದೆ. ಪಹಣಿ ಝರಾಕ್ಸ್ ಪ್ರತಿ ನೀಡಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬಹುದು





