Today rain : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 28 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಮಳೆ ಹಾಗೂ ಕೃಷಿ ಮಾಹಿತಿ ಪಡೆಯಿರಿ
Today rain ಎಲ್ಲೆಲ್ಲಿ ಮಳೆಯಾಗಲಿದೆ?
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಕನ್ನಡ ದಕ್ಷಿಣ, ತುಮಕೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಧಾರವಾಡ, ವಿಜಯನಗರ, ರಾಮನಗರ, ಗದಗ, ಹಾವೇರಿ ಸೇರಿದತೆ 19 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ಆಂಧ್ರಪ್ರದೇಶದ ಜೊತೆಗೆ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆಯಿದೆ
ಬೆಂಗಳೂರಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇದಲ್ಲದೇ ಮುಂದಿನ 5 ದಿನಗಳ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂಓದಿ : ನಿಮ್ಮ ಜಮೀನಿನ ಮೇಲೆ ಸಾಲ ಇದೆಯೇ? ಇಲ್ಲೇ ಚೆಕ್ ಮಾಡಿ
ರಾಜ್ಯದಲ್ಲಿ ಚಳಿಯ ಪ್ರಮಾಣ ಕೊಂಚ ತಗ್ಗಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ಇದರಿಂದಾಗಿ ಡಿಸೆಂಬರ್ 28 ರಿಂದ 29 ರವರೆಗೆ ಒಳನಾಡಿನ ಕೆಲವು ಸ್ಥಳಗಳಲ್ಲಿ ಮೋಡಕವಿದ ವಾತಾವರಣವಿರಲಿದೆ ಎಂದು ಇಲಾಖೆ ಹೇಳಿದೆ.
ವಾತಾವರಣದಲ್ಲಿ ಆಗುವ ಏರುಪೇರಿನಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ ಎಂದು ವೈದ್ಯರು ಎಚ್ಚರಿಸಿದ್ದಾರೆ, ವಾತಾವರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಜ್ವರ ಶೀತ ಕೆಮ್ಮು ಹೆಚ್ಚಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ವೈದ್ಯರು ತಿಳಿಸಿದ್ದಾರೆ.
ನಿಮ್ಮೂರಲ್ಲಿಮಳೆಯಾಗುತ್ತೋ ಇಲ್ಲವೋ ಎಂಬುದನ್ನು ಒಂದು ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, 9243345433 ಗೆ ಕರೆ ಮಾಡಿದರೆ ಸಾಕು ನಿಮ್ಮೂರಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಪಡೆದುಕೊಳ್ಳಬಹುದು.
ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಮಳೆಯ ಮಾಹಿತಿ ನೀಡಲು ಬಂದಿವೆ ಮೊಬೈಲ್ ಆ್ಯಪ್
ನೀವು ಮನೆಯಲ್ಲಿಯೇ ಮಳೆಯ ಮಾಹಿತಿ ಚೆಕ್ ಮಾಡಲು ಮೇಘದೂತ, ಮೌಸಮ್ ಆ್ಯಪ್ ಗಳು ಇವೆ. ಈ ಆ್ಯಪ್ ಗಳನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡರೆ ಸಾಕು, ನಿಮಗೆ ಮುಂದಿನ ಐದು ದಿನಗಳ ಮಳೆಯ ಮಾಹಿತಿಯನ್ನು ಚೆಕ್ ಮಾಡಬಹುದು.