ನಾಳೆಯಿಂದ ಇಲ್ಲಿ ನಾಲ್ಕೈದು ದಿನ ಗುಡುಗು ಸಹಿತ ಮಳೆ

Written by Ramlinganna

Published on:

today weather climate ಮಾರ್ಚ್  22 ರಿಂದ ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಲವೆಡೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತ ಪರಿಚಲನೆಯು ದಕ್ಷಿಣ ತಮಿಳುನಾಡು ಮತ್ತು ಅಕ್ಕಪಕ್ಕದ ಪ್ರದೇಶದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿ ಮುಂದುವರೆಯುತ್ತಿದೆ. ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ 0.9 ಕಿ.ಮೀ. ಎತ್ತರದವರೆಗೆ ಗಾಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

today weather climate ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಮುನ್ಸೂಚನೆ ಹೀಗಿದೆ

21.03.2025: ಹವಾಮಾನ ಇಲಾಖೆ ಪ್ರಕಾರ, ರ‍್ನಾ ಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಒಣ ಕಂಡು ಬರುವ ಸಾಧ್ಯತೆಯಿದೆ.

22.03.2025: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಂಭವವಿದೆ. ಜೊತೆಗೆ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಅಲ್ಲಲ್ಲಿ ಅಲ್ಪ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿನ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವೆಡೆ ಒಣ ಹವಾಮಾನವು ಮುಂದುವರೆಯಲಿದ್ದು, ವಿವಿಧೆಡೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ ಭಾಗ್ಯಲಕ್ಷ್ಮೀ ಬಾಂಡ್ ಹಣ ಪಡೆಯಲು ಈ ದಾಖಲೆ ಸಲ್ಲಿಸಿ

23.03.2025: ಮಾರ್ಚ  23 ರಂದು ದಕ್ಷಿಣ ರ‍್ನಾ ಟಕದ ವಿವಿಧೆಡೆ ಗುಡುಗು ಸಹಿತ ಲಘು ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರರ‍್ಗ್, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕಲಬುರಗಿ, ಯಾದಗಿರಿ, ವಿಜಯಪುರ, ಕೊಪ್ಪಳ, ಗದಗ ಮತ್ತು ರಾಯಚೂರು ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ, ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರಲಿದ್ದು, 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

ಮಾರ್ಚ್ 24 ಹಾಗೂ 25: ರ‍್ಚ್  24 ಹಾಗೂ 25ರಂದು ಎರಡೂ ದಿನಗಳ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಬೀಳುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿ  ಐದು ದಿನ ಮೊದಲೇ ಮಳೆಯ ಮಾಹಿತಿ ಪಡೆಯುವುದು ಹೇಗೆ?

ರೈತರು ಮನೆಯಲ್ಲಿಯೇ ಕುಳಿತು ಐದು ದಿನ ಮೊದಲೇ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು. ಹೌದು,  ಈ

https://play.google.com/store/apps/details?id=com.aas.meghdoot&hl=en_IN&gl=US

ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆ ಆಯ್ಕೆ ಮಾಡಿಕೊಳ್ಳಬೇಕು, ನಂತರ ಮುಂದೆ ಮೇಲೆ ಕ್ಲಿಕ್ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತ್ತದೆ.

Leave a Comment