Tractor subsidy ಕೃಷಿಯಲ್ಲಿ ಯಂತ್ರೋಪಕರಣ, ಆಧುನುಕ ಪದ್ಧತಿ ಹೆಚ್ಚಾಗುತ್ತಿದೆ. ಕೃಷಿಯಲ್ಲಿ ಬದಲಾವಣೆ ತರಲು, ಹಾಗೂ ಕೃಷಿ ಚಟುವಟಿಕೆಗಳನ್ನು ಸುಲಭಗೊಳಿಸಲು ಇತ್ತೀಚೆಗೆ ರೈತರು ಕೃಷಿ ಯಂತ್ರೋಪಕರಣಗಳ ಕಡೆ ವಾಲುತ್ತಿರುವದು ಸಂತಸದ ಸಂಗತಿ. ಸರ್ಕಾರವೂ ಸಹ ರೈತರಿಗೆ ಅನುಕೂಲವಾಗಲೆಂದು ಸಬ್ಸಿಡಿಯಲ್ಲಿ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಹಾಯ ಮಾಡುತ್ತಿದೆ.
Tractor subsidy ಟ್ರ್ಯಾಕ್ಟ್ ಖರೀದಿಗೆ ಸಬ್ಸಿಡಿ
ರೈತರಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ (Tractor purchase subsidy) ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ತೋಟಗಾರಿಕೆ ಇಲಾಖೆಯ ವತಿಯಿಂದ 2021-22ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಪ್ರದೇಶ ವಿಸ್ತರಣೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದ್ದು, ರೈತರಿಗೆ ಕಡಿಮೆ ದರದಲ್ಲಿ ಟ್ರ್ಯಾಕ್ಟರ್ ಹಾಗೂ ಜೇನು, ಹೂವು, ಹಣ್ಣು ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಾಗುತ್ತಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಲ್ಲಿ ಬಾಳೆ, ತರಕಾರಿ, ಹೂವಿನ ಬೆಳೆಗಳ ಪ್ರದೇಶ ವಿಸ್ತರಣೆ, ಹಣ್ಣು ಮಾಗಿಸುವ ಘಟಕ, ಜೇನು ಕೃಷಿ, ಹಸಿರುಮನೆ ಘಟಕ, 20 ಎಚ್.ಪಿ ಅಶ್ವಶಕ್ತಿ ಟ್ರ್ಯಾಕ್ಟರ್ ಖರೀದಿ, ಶೀತಲ ಶೈತ್ಯಗಾರ ನಿರ್ಮಾಣಕ್ಕಾಗಿ ಸಹಾಯಧನ ನೀಡಲಾಗುವುದು.
ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿ ಸಾಮಾನ್ಯ ವರ್ಗಕ್ಕೆ ಶೇ. 40 ರಷ್ಟು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಆಗಸ್ಟ್ 5 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ನಿರ್ದೇಶಕರು ದೂರವಾಣಿ ಸಂಖ್ಯೆ 0821-2430450, ವರುಣ ಮೊ. 97421 59724, ಜಯಪುರ ಹೋಬಳಿ ಮೊಬೈಲ್ ನಂಬರ್ 9686766291, ಇಲವಾಲ ಹೋಬಳಿ ಮೊಬೈಲ್ ನಂಬರ್ 70267 19516, ಕಸಬಾ ಹೋಬಳಿ 99013 87284 ಗೆ ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ 9ನೇ ಕಂತಿನ ಲಿಸ್ಟ್ ಬಿಡುಗಡೆ-ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲಿಚ್ಚಿಸುವ ರೈತರು ಸ್ವಂತ ಜಮೀನು ಹೊಂದಿರಬೇಕು. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಹೊಂದಿರಬೇಕು. ಗಣಕೀಕರಣ ಬೆಳೆ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ನರೇಗಾ ಯೋಜನೆಯಡಿಯಲ್ಲಿ ಸಹಾಯಧನ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2022-23ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಗದಗ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮೀಣ ಾಗದಲ್ಲಿ ಮಾವು, ತೆಂಗು, ಪೇರಲ, ದ್ರಾಕ್ಷಿ, ದಾಳಿಂಬೆ, ಬಾಳೆ, ಪಪ್ಪಾಯ, ನಿಂಬೆ, ಸೀತಾಫಲ, ಅಂಜೂರ, ನೇರಳೆ, ಬಾರೆ, ಡ್ರ್ಯಾಗನ್ ಹಣ್ಣು, ಗೋಡಂಬಿ, ವೀಳ್ಯದೆಲೆ, ಹುಣಸೆ, ಕರಿಬೇವು ಬೆಳೆಗಳ ಪ್ರದೇಶ ವಿಸ್ತರಣೆಗೆ ಹಾಗೂ ಮಣ್ಣು ಸಂರಕ್ಷಣಾ ಕಾಮಗಾರಿಗಳನ್ನು ತಮ್ಮ ತೋಟಗಳಲ್ಲಿ ಕೈಗೊಳ್ಳಲು ಜಿಲ್ಲೆಯ ರೈತ ಬಾಂಧವರಿಗೆ ಉತ್ತಮ ಅವಕಾಶವಿದೆ.
ಗದಗ ಜಿಲ್ಲೆಯ ಎಲ್ಲಾ ತಾಲೂಕುಗಳ ಆಸಕ್ತ ರೈತ ಬಾಂಧವರು ಅರ್ಜಿ ಸಲ್ಲಿಸಲು ಸಮೀಪದ ಗ್ರಾಮ ಪಂಚಾಯತ ಅಥವಾ ತೋಟಗಾರಿಕೆ ಕಚೇರಿಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.