ತುಂತುರು ನೀರಾವರಿ ಘಟಕ್ಕೆ 28 ಸಾವಿರ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

Tunturu neeravari subsidy : ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ.

2024-25ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು ನೀರಾವರಿ ಘಟಕಗಳ ವಿತರಣೆಗೆ ತಾಲೂಕಿನ ಪರಿಶಿಷ್ಟ ಜಾತಿ ರೈತರಿಗೆ 651 ಹೆಕ್ಟೇರ್ ಗುರಿ ನಿಗದಿಪಡಿಸಲಾಗಿದೆ. ಈ ವರೆಗ 192 ಹೆಕ್ಟೇರ್ ಘಟಕಗಳನ್ನು ವಿತರಿಸಲಾಗಿದೆ. ರೈತರು 2 ಹೆಕ್ಟೇರ್ ವರೆಗೆ ತುಂತುರು ನೀರಾವರಿ ಘಟಕ ಪಡೆಯಲು ಅವಕಾಶವಿದೆ. ಈ ರೈತರು 75 ಎಂಎಂಗೆ 1 ಹೆಕ್ಟೇರ್ ಗೆ ರೈತ ವಂತಿಕೆ 4667 ಹಾಗೂ ಸಹಾಯಧನ 21775 ರೂಪಾಯಿ ನೀಡಲಾಗುವುದು. 2 ಹೆಕ್ಟೇರ್ ಗೆ ರೈತ ವಂತಿಕೆ 4139 ರೂಪಾಯಿ ಭರಿಸಬೇಕು. ಈ ರೈತರಿಗೆ19429 ರೂಪಾಯಿ ಸಹಾಯಧನ ನೀಡಲಾಗುವುದು. 2 ಹೆಕ್ಟೇರ್ ಗೆ ರೈತರ ವಂತಿಕೆ 5772 ಮತ್ತು ಸಹಾಯಧನ 28050 ರೂಪಾಯಿ ನೀಡಲಾಗುವುದು.

Tunturu neeravari subsidy ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಸಲ್ಲಿಸಬೇಕು?

ರೈತರು ಅಗತ್ಯ ದಾಖಲೆಗಳಾದ ಪಹಣಿ, ಫೋಟೋ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಛಾಪಾ ಕಾಗದ, ಎನ್.ಓ.ಸಿ ಬೆಳೆ ದೃಢೀಕರಣ, ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರ, ರೈತರು ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣ ಪತ್ರಗಳೊಂದಿಗೆ ಹತ್ತಿರದ ಹೋಬಳಿ ರೈತ ಸಂಪರ್ಕ ಕೇಂದ್ರಗಳ ಕಚೇರಿಯಲ್ಲಿ ಸಂಪರ್ಕಿಸಬಹುದು.

Tunturu neeravari subsidy ಸರ್ಕಾರಿ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯ

ರೈತರು ಯಾವುದೇ ಯೋಜನೆಗಳಡಿಯಲ್ಲಿ ಸರ್ಕಾರಿ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯವಾಗಿದೆ. ರೈತರು ಅರ್ಜಿ ಸಲ್ಲಿಸುವ ಮೊದಲು ಪ್ರೂಟ್ಸ್ ಐಡಿ ಮಾಡಿಕೊಳ್ಳಬೇಕು. ಜಮೀನಿನ ದಾಖಲೆಗಳು, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೊಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಿ ಫ್ರೂಟ್ಸ್ ಐಡಿ ಮಾಡಿಕೊಳ್ಳಬಹುದು.

Tunturu neeravari subsidy ಫಲಾನುಭವಿಯ ಅರ್ಹತೆಗಳು

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೌಲಭ್ಯ ಪಡೆಯುವ ರೈತರ ಹೆಸರಿಗೆ ಜಮೀನು ಇರಬೇಕು. ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು. ಮಹಿಳೆಯರ ಹೆಸರಿನಲ್ಲಿ ಖಾತೆ ಹೊಂದಿದ್ದಲ್ಲಿ ಮಹಿಳಾ ಖಾತೆದಾರರೇ ಅರ್ಜಿ ಸಲ್ಲಿಸಬೇಕು. ಫಲಾಭವಿಯು ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಾಗಿರಬೇಕು ಅಥವಾ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತಿ ಹೊಂದಿರಬೇಕು.

ಇದನ್ನೂ ಓದಿ ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಇಲ್ಲೇ ಚೆಕ್ ಮಾಡಿ

. ರೈತರು ಈ ಹಿಂದೆ ಸಹಾಯಧನ ಪಡೆದಿದ್ದಲ್ಲಿ ಅದನ್ನು ಸೇರಿದಂತೆ ಗರಿಷ್ಠ 5 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

ಈ ತಿಂಗಳಲ್ಲಿ ಪೆಂಡಿಂಗ್ ಗೃಹಲಕ್ಷ್ಮೀ ಹಣ ಈ ಮಹಿಳೆಯರಿಗೆ ಜಮೆ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿದ ಫಲಾನಭವಿಗಳ ಖಾತೆಗೆ ಉಳಿದ ಎರಡು ತಿಂಗಳ ಬಾಕಿ ಹಣ ಈ ತಿಂಗಳಲ್ಲೇ ಜಮೆ ಮಾಡಲಾಗುವುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಕಳೆದ ವಾರದಲ್ಲಿ ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಹಣ ಫಲಾನಭವಿಗಳ ಖಾತೆಗೆ ಜಮೆಯಾಗಿತ್ತು. ಈಗ ಜನವರಿ ಹಾಗೂ ಫೆಬ್ರವರಿ ತಿಂಗಳ ಹಣ ಇದೇ ತಿಂಗಳಲ್ಲಿ ಒಟ್ಟು 4 ಸಾವಿರ ರೂಪಾಯಿ ಜಮೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.

ಡಿಬಿಟಿ ಆ್ಯಪ್ ನಲ್ಲಿ ಸಿಗಲಿದೆ ಗೃಹಲಕ್ಷ್ಮೀ ಹಣ ಜಮೆ

ಸರ್ಕಾರದ ವಿವಿಧ ಯೋಜನೆಗಳಿಂದ ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ

DBT Karnataka  ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು.  ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

Leave a Comment