ಇಂದಿನಿಂದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ

Written by Ramlinganna

Updated on:

Two day with thunder rain  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆಯಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ರಾಜ್ಯದ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಉಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು  ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಸೇರಿದಂತೆ ಏಪ್ರೀಲ್ 21 ರಿಂದ ಮೂರು ದಿನ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.  ಏಪ್ರೀಲ್ 21 ರಿಂದ ಮುಂದಿನ ಮೂರು ದಿನಗಳ ಕಾಲ ಹಳೆ ಮೈಸೂರು ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ.  ಮಲೆನಾಡು ಭಾಗದಲ್ಲಿ ಆಲಿಕಲ್ಲು ಮಳೆಯಾಗುವ ಸಾದ್ಯತೆಯಿದೆ.

ಸಮುದ್ರ ಮಟ್ಟದಲ್ಲಿನ ಹವಾಮಾನ ಕುಸಿತವಾಗಿರುವುದರಿಂದ ಸುಳಿಗಾಳಿಯ ಪರಿಣಾಮದಿಂದಾಗಿ ಏಪ್ರೀಲ್ 21 ರಿಂದ 23 ರವರೆಗೆ ಮಳೆಯ ವಾತಾವರಣ ನಿರ್ಮಾಣವಾಗಲಿದೆ.  ಏಪ್ರೀಲ್ 21 ರಂದು ಸಾಧಾರಣ ಮಳೆಯಾಗಲಿದೆ. ಏಪ್ರೀಲ್ 22 ಮತ್ತು 23 ರಂದು ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇನ್ನೂ ಮುಂದೆ ಮೊಬೈಲ್ ನಲ್ಲಿ ಪಡೆಯಿರಿ: ಇಲ್ಲಿದೆ ಮಾಹಿತಿ

ಕರಾವಳಿಯ ಕೆಲವು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ  36 ಡಿಗ್ರಿ ಸೆಲ್ಸಿಯಸ್, ಕನಿಷ್ಠ  ಉಷ್ಣಾಂಶ  23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ರಾಜ್ಯದ ವಿವಿಧೆಡೆ ಬುಧವಾರವೂ ತಾಪಮಾನ ಹೆಚ್ಚಳವಾಗಿದ್ದು, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (41.5) ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿ ಷ್ಠ ತಾಪಮಾನ 36.5 ಡಿಗ್ರಿ ಸೆಲ್ಸಿಯಸ್ ಗೆ ತಲುಪಿತ್ತು ಎಂದು ಇಲಾಖೆ ತಿಳಿಸಿದೆ.

ಐದು ದಿನ ಮುಂಚೆ ಮಳೆಯ ಮಾಹಿತಿ ನೀಡುತ್ತದೆ ಮೇಘದೂತ್ ಆ್ಯಪ್- ಅದು ಹೇಗೆ?

ಮಳೆ ಬರುವುದಕ್ಕಿಂತ ಮಂಚೆ ಅಂದರೆ ಐದು ದಿನ ಮೊದಲೇ ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿಯನ್ನು ಮೇಘದೂತ್ ಆ್ಯಪ್ ನೀಡುತ್ತದೆ. ಹೌದು, ಈ ಆ್ಯಪ್ ನ್ನು ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮಳೆಯ ಮಾಹಿತಿಯನ್ನು ಐದು ದಿನದ ಮೊದಲೇ ಪಡೆಯಬಹುದು.

ಮೇಘದೂತ್ ಆ್ಯಪ್ ಇನಸ್ಲಾಟ್ ಮಾಡಿಕೊಳ್ಳಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಿ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ಇದು ರೈತರಿಗೆ ಮಳೆಯ ಮಾಹಿತಿಯೊಂದಿಗೆ ಆ ಭಾಗದಲ್ಲಿ ಯಾವ ಬೆಳೆ ಸೂಕ್ತ ಎಂಬ ಮಾಹಿತಿಯನ್ನೂ ನೀಡುತ್ತದೆ.

Two day with thunder rain  ನಿಮ್ಮೂರಿನಲ್ಲಿ ಮಳೆಯ ಮಾಹಿತಿ ಮೊಬೈಲ್ ನಲ್ಲೇ ಪಡೆಯಿರಿ

ಸಾರ್ವಜನಿಕರು ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬದನ್ನು ಈಗ ಮೊಬೈಲ್ ನಲ್ಲೇ ಮಾಹಿತಿ ಪಡೆಯಬಹುದು. ಹೌದು,  ರಾಜ್ಯ ಸರ್ಕಾರದ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ಮಾಹಿತಿ ಪಡೆಯಬಹುದು. ಈ ವರುಣಮಿತ್ರಿ ಉಚಿತ ಸಹಾಯವಾಣಿ 9243345433 ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತದೆ. ಈ ನಂಬರಿಗೆ ಕರೆ ಮಾಡಿ ತಮ್ಮೂರಿನ ಸುತ್ತಮುತ್ತಲಿನ ಹವಾಮಾನ, ಗಾಳಿಯ ವೇಗ, ಗಾಳಿಯ ದಿಕ್ಕು ಸೇರಿದಂತೆ ಹವಾಮಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದು.

Leave a Comment