ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಎರಡು ದಿನ ಉದ್ಯೋಗ ಮೇಳ

Written by Ramlinganna

Updated on:

Two days job fair ಐಟಿಐ, ಫಿಟ್ಟರ್, ಎಸ್.ಎಸ್.ಎಲ್.ಸಿ ಪಿಯುಸಿ ಹಾಗೂ ಪದವಿ ಪಾಸಾಗಿರುವವರಿಗಿಲ್ಲಿದೆ ಗುಡ್ ನ್ಯೂಸ್. ಹೌದು, ಕಲಬುರಗಿ ಹಾಗೂ ತುಮಕೂರು ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

Two days job fair 22 ರಂದು ಐಟಿಐ ಪಾಸಾಗಿರುವವರಿಗೆ ಸಂದರ್ಶನ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ -1  ರಲ್ಲಿ ತಾಂತ್ರಿಕ ವೃತ್ತಿಯ ಒಟ್ಟು 85 ಸ್ಥಾನಗಳಿಗೆ ಶಿಶಿಕ್ಷು ತರಬೇತಿದಾರರನ್ನು ನೇಮಕಾತಿ ಮಾಡಿಕೊಳ್ಳಲು  ಜನವರಿ 22 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಿಗಮದ ಕಲಬುರಗಿ ವಿಭಾಗ – 1 ರ ಕಚೇರಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನವನ್ನು ನಡೆಸಲಾಗುತ್ತಿದೆ ಎಂದು ಕಲಬುರಗಿ ವಿಭಾಗ 1 ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಫಿಟ್ಟರ್, ಅಟೋ ಎಲೆಕ್ಟ್ರಿಶಿಯನ್, ಡೀಸೆಲ್ ಮೆಕ್ಯಾನಿಕ್ ಹಾಗೂ ಮೆಕ್ಯಾನಿಕ್ ವೃತ್ತಿಯಲ್ಲಿ ಪಾಸಾಗಿರುವ ಅಭ್ಯರ್ಥಿಗಳಿಗೆ ಮಾತ್ರ ಮೌಖಿಕ ಸಂದರ್ಶ ನಡೆಸಲಾಗುತ್ತದೆ.

ಇದನ್ನೂ ಓದಿ Ration card ನಂಬರ್ ಹಾಕಿ ನಿಮಗೆಷ್ಟು ಹಣ ಜಮೆ Mobileನಲ್ಲೇ ಚೆಕ್ ಮಾಡಿ

ಮೌಖಿಕ ಸಂದರ್ಶಕ್ಕೆ ಹಾಜರಾಗುವ ಎಲ್ಲಾ ಅರ್ಹ ಅಭ್ಯರ್ಥಿಗಳು ಕಡ್ಡಾಯವಾಗಿ ಅವರ ಹೆಸರಿನಲ್ಲಿರುವ ಇ ಮೇಲೆ ಐಡಿ ಹೊಂದಿರಬೇಕು. ಅಗತ್ಯ ದಾಖಲೆಗಳೊಂದಿಗೆ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರಗಳು, ಅಭ್ಯರ್ಥಿಯ ಹೆಸರಿನಲ್ಲಿರುವ ಇ ಮೇಲ್ ವಿಳಾಸ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಯ ವಿವರಗಳೊಂದಿಗೆ

https://www.apprenticeshipindia.gov.in

ಪೋರ್ಟಲ್ನಲ್ಲಿ Candidate Registration  ನಲ್ಲಿ ನೋಂದಣಿ ಮಾಡಬೇಕು. ನಂತರ ಕಡ್ಡಾಯವಾಗಿ ನೋಂದಣಿ ಮಾಡಿಸಿದ ಪ್ರತಿ ಮೂಲ ದಾಖಲಾತಿ ಮತ್ತು ಸ್ವಯಂ ದೃಢೀಕೃತ ಒಂದು ಸೆಟ್ ಝರಾಕ್ಸ್ ಪ್ರತಿಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮೌಖಿಕ ಸಂದರ್ಶಕ್ಕೆ ಹಾಜರಾಗಬೇಕು.ಹೆಚ್ಚಿನ ಮಾಹಿತಿಗೆ ಕಕರಸಾ ನಿಗಮ ವಿಭಾಗ – 1 ರ ಕಚೇರಯನ್ನು ಅಥವಾ ದೂರವಾಣಿ ಸಂಖ್ಯೆ 08472 221598 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಲಾಗಿದೆ.

Two days job fair ತುಮಕೂರು ಜಿಲ್ಲೆಯಲ್ಲಿ ಜನವರಿ 28 ರಂದು ಉದ್ಯೋಗ ಮೇಳ

ತುಮಕೂರು ಜಿಲ್ಲೆಯ ಸಿದ್ದಗಂಗಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇದೇ ತಿಂಗಳು 28 ರಂದು ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 5 ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಮತ್ತು ಅನಿವಾಸಿ ಭಾರತೀಯ ಒಕ್ಕಲಿಗ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ನಂಜೇಗೌಡ ತಿಳಿಸಿದ್ದಾರೆ.

ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮಿಜಿ ಮತ್ತು ಸಿದ್ದಗಂಗಾ ಮಠಡ ಸಿದ್ದಲಿಂಗ ಸ್ವಾಮಿಜಿ ಅವರ ಆಶೀರ್ವಾದದೊಂದಿಗೆ ಈ ಉದ್ಯೋಗ ಮೇಳ ನಡೆಯಲಿದೆ. 50ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದೆ.

ಮೇಳದಲ್ಲಿ 5000 ಕ್ಕೂ ಹೆಚ್ಚು ಮಂದಿಗೆ ಅವಕಾಶಗಳು ಲಭ್ಯವಾಗಲಿದೆ. ಒಕ್ಕಲಿಗ ಯುವ ಬ್ರಿಗೇಡ್ ಮತ್ತು ಎನ್.ಆರ್.ಐ ಒಕ್ಕಲಿಗ ಬ್ರಿಗೇಡ್ ಗಳು ಸಾಮಾಜಿಕ ಕಳಕಳಿಯುಳ್ಳ ಸಂಸ್ಥೆಗಳು, ಸಾವಿರಾರು ಜನರಿಗೆ ಮಾರ್ಗದರ್ಶನ ನೀಡಿ ಬೆಂಬಲಿಸುತ್ತಿವೆ ಎಂದು ನಂಜೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ ಗೃಹಲಕ್ಷ್ಮೀ ಹಣ ಯಾರಿಗೆ ಜಮೆ? ಯಾರಿಗೆ ಜಮೆಯಾಗಲ್ಲ? ಇಲ್ಲಿದೆ ಮಾಹಿತಿ 

ಬ್ರಿಗೇಡ್ ಸಲಹೆಗಾರರ ಮಾರ್ಗದರ್ಶನದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿರುವ ವಿದ್ಯಾರ್ಥಿಗಳು ಮತ್ತು ಯುವಕರು, ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಗ್ರಾಮೀಣ ಪ್ರದೇಶದ 2500 ಯುವಕರಿಗೆ ಉದ್ಯೋಗವಕಾಶ ಹಾಗೂ 250 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಒದಗಿಸಲಾಗುವುದು. ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಆಸಕ್ತರು ಮೋಹನ್ 9686564192 ಮತ್ತು ಚಿರಾಗ್ 9632501500 ಮೊಬೈಲ್ ಸಂಪರ್ಕಿಸಲು ಕೋರಲಾಗಿದೆ.

Leave a Comment