ಈ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನ ಭಾರಿ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್ ಘೋಷಣೆ

Written by Ramlinganna

Updated on:

ರಾಜ್ಯದಲ್ಲಿ ಇದೇ ತಿಂಗಳ ಅಕ್ಟೋಬರ್ 16 ಹಾಗೂ 17 ರಂದು ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 16 ಮತ್ತು 17 ರಂದು ಎರಡು ದಿನಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಈ ನಂಬರಿಗೆ ಕರೆ ಮಾಡಿ

ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಇಂದು ಮತ್ತು ನಾಳೆಯ ಹವಾಮಾನ ವರದಿ ಹೇಗಿರುತ್ತದೆ ಎಂಬ ಮಾಹಿತಿ ಪಡೆಯಬೇಕೇ?

ಇದನ್ನೂ ಓದಿ ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮೆಯಾಗುತ್ತಿಲ್ಲವೇ? ಇಲ್ಲಿ ಸಂಪರ್ಕಿಸಿ

ಹಾಗಾದರೆ  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿ. ಕೇವಲ ಒಂದೇ ನಿಮಿಷದಲ್ಲಿ ನಿಮ್ಮೂರಿನಲ್ಲಿ ಮಳೆ ಆಗುತ್ತೋ ಇಲ್ಲವೋ ಎಂಬ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಬೇಕೆ?

ಐದು ದಿನ ಮೊದಲೇ ಮಳೆಯ ಮಾಹಿತಿ ಪಡೆಯಬೇಕಾದರೆ ನೀವು ಮೇಘದೂತ್ ಆ್ಯಪ್ ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡರೆ ಸಾಕು, ನಿಮಗೆ ಐದು ದಿನ ಮೊದಲೇ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ತಿಳಿಯಲಿದೆ. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಮಾಹಿತಿ.

ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಲು ಈ

https://play.google.com/store/apps/details?id=com.aas.meghdoot&hl=en_IN&gl=US

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ತೆರೆದುಕೊಳ್ಳುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಬೇಕು.ಆಗ ಅಲೋ ಮೇಘದೂತ್ ದಿ ಆಕ್ಸೆಸ್ ಮೆಸೆಜ್ ಕಾಣಿಸಿದಾಗ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಜಿಲ್ಲೆ, ತಾಪಮಾನ, ಮಳೆ, ಗಾಳಿಯ ದಿಕ್ಕು, ವೇಗ ತೇವಾಂಶದ ಮಾಹಿತಿ ಕಾಣಿಸುತ್ತದೆ. ಮುನ್ಸೂಚನೆ ಮೇಲೆ ಕ್ಲಿಕ್ ಮಾಡಿದಾಗ ಮುಂದಿನ ಐದು ದಿನಗಳ ಕಾಲ ಹವಾಮಾನದ ವರದಿ ಕಾಣಿಸುತ್ತದೆ.

Leave a comment