ಇಂದಿನಿಂದ ಎರಡು ದಿನ ಭಾರಿ ಮಳೆ ಮುನ್ಸೂಚನೆ

Written by Ramlinganna

Published on:

Two days rain here ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಇನ್ನೂ ಎರಡು ದಿನ ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರಕನ್ನಡ, ದಕ್ಷಿಣ ಕನ್ನಡ, ಉಡಿಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಿಂದ 2 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ  ಎರಡು ದಿನಗಳ ಕಾಲ ಆರೇಂಜ್ ಅಲರ್ಟ್ ನೀಡಲಾಗಿದೆ.

ಗಂಟೆಗೆ35 ರಿಂದ 45 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಗಾಳಿ, ಕರಾವಳಿ ಉದ್ದಕ್ಕು ಮತ್ತು ಹೊರೆಗೆ ಚಾಲ್ತಿಯಲ್ಲಿ ಇರಲಿದೆ. ಬಾಗಲಕೋಟೆ, ಗದಗ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಸಾಮಾನ್ಯ ಮಳೆಗಿಂತ ಈ ಬಾರಿ ಹೆಚ್ಚಿನ ಮಳೆ                              

ಬೆಂಗಳೂರಿನಲ್ಲಿ ಏಪ್ರೀಲ್ 15 ರಂದು ಭಾರತೀಯ ಹವಾಮಾನ ಇಲಾಖೆ ಈ ಬಾರಿಯ ನೈಋತ್ಯ ಮಾನ್ಸೂನ್ ಮಳೆಯ ಸಾಮಾನ್ಯ ಮಳೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಎಂದು ಸೂಚಿಸಿದೆ.

ಮಳೆ ಮಾಹಿತಿ ಬೇಕೆ? ಈ ನಂಬರಿಗೆ ಕರೆ                                                                

ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಬೇಕೆ? ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹೌದು, 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ.

ಇದನ್ನೂ ಓದಿ ನೀವು ನಿಂತಿರುವ ಜಮೀನು ಯಾರ ಹೆಸರಿಗಿದೆ? ಚೆಕ್ ಮಾಡಿ

ನಿಮ್ಮೂರಿನ ಸುತ್ತಮುತ್ತಲಿನ ವಾತಾವರಣ ಹೇಗಿರಲಿದೆ? ಮಳೆಯಾಗುತ್ತೋ ಇಲ್ಲವೋ ಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ಸಹ ನಿಮಗೆ ಸಿಗುತ್ತದೆ.ಇದಕ್ಕಾಗಿ ನೀವು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಮನೆಯಲ್ಲಿಯೇ ಕುಳಿತು ಕೇವಲ ಒಂದು ಕರೆ ಮಾಡಿ ಮಾಹಿತಿಯನ್ನು ಅತೀ ಸುಲಭವಾಗಿ ಪಡೆಯಬಹುದು.

Two days rain here ಕಳೆದೆರಡು ದಿನಗಳಿಂದ ಭರ್ಜರಿ ಮಳೆ

ಕಳೆದ ಎರಡು ದಿನಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ರೈತರ ಜಮೀನುಗಳಲ್ಲಿ ಮಳೆ ನೀರು ನಿಂತಿದ್ದರಿಂದ ಬೆಳೆಗಳು ಜಲಾವೃತ್ತವಾಗಿದೆ. ಇದರಿಂದಾಗಿ ರೈತರಿಗೆ ಆಂತಕ ಉಂಟಾಗಿದೆ. ಇನ್ನೆರಡು ದಿನ ಇದೇ ರೀತಿ ಮಳೆಯಾದರೆ ಬೆಳೆಗಳಿಗೆ ಅಪಾರ ಹಾನಿಯಾಗುವ ಸಾಧ್ಯತೆಯಿದೆ.

Leave a Comment