ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಡಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಎರಡು ದಿನ ಭಾರಿ ಮಳೆಯೊಂದಿಗೆ ಅಲ್ಲಲ್ಲಿ ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೂ ಬಿಸಲಿದೆ ಹಾಗಾಗಿ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡನ ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಹಾಸನ, ಕೊಡಗು ಚಿಕ್ಕಮಗಳೂರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಾಯಂಕಾಲ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಯಾವ ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ?
ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರು, ವಿಜಯಪುರ, ಬೆಂಗಳೂ ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಮಂಡ್ಯ, ಚಿಕ್ಕಮಗಳೂರು, ರಾಮನಗರ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೇ 1 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ( ಈ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115. ಮಿ.ಮೀ ವರೆಗೆ ಮಳೆಯಾಗಬಹುದು)
ಯಾವ ಯಾವ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ?
ಬೀದರ್, ಕೊಪ್ಪಳ, ಮಂಡ್ಯ, ಕೊಡಗು ಹಾಗೂ ರಾಯಚೂರು ಜಿಲ್ಲೆಗಳಲ್ಲಿಯೂ ಮೇ 2 ರಂದು ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ( ಈ ಜಿಲ್ಲೆಗಳಲ್ಲಿ 115.6 ಮಿ.ಮೀನಿಂದ 204.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದೆ)
ನಿಮ್ಮ ಜಿಲ್ಲೆಯಲ್ಲಿ ಮುಂದಿನ ಐದು ದಿನ ಯಾವಾಗ ಮಳೆಯಾಗಲಿದೆ?
ದೇಶದ ಯಾವ ಯಾವ ಭಾಗದಲ್ಲಿ ಮಳೆಯಾಗಲಿದೆ ಎಂಬುದರೊಂದಿಗೆ ನಿಮ್ಮ ಜಿಲ್ಲೆಯಲ್ಲಿ ಮುಂದಿನ ಐದು ದಿನ ಯಾವ ದಿನ ಮಳೆಯಾಗಲಿದೆ ಎಂಬುದನ್ನು ಚೆಕ್ ಮಾಡಲು ಈ
https://mausam.imd.gov.in/responsive/districtWiseWarning.php
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಹವಾಮಾನ ಇಲಾಖೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಗ ನಿಮಗೆ ದೇಶದ ಮ್ಯಾಪ್ ಕಾಣಿಸುತ್ತದೆ. ಅಲ್ಲಿ ಮೇಲ್ಗಡೆ No warning, Watch , alert and Warning ಹೀಗೆ ನಾಲ್ಕು ವಿಭಾಗದಲ್ಲಿ ವಿಂಗಡಿಸಲಾಗಿದೆ. ನಿಮ್ಮ ಕರ್ನಾಟಕದ ಮ್ಯಾಪ್ ನಲ್ಲಿ ನಿಮ್ಮ ಜಿಲ್ಲೆಯ ಬಳಿ ಯಾವ ಬಣ್ಣ ಗುರುತಿಸಲಾಗಿದೆ. ಹಾಗೂ ಅಲ್ಲಿ ಮಳೆಯೊಂದಿಗೆ ಗುಡುಗು ಸಿಡಿಲು ಇದೆಯೇ ಎಂಬುದನ್ನು ಚೆಕ್ ಮಾಡಬಹುದು.
ಇದನ್ನೂ ಓದಿ : ನಿಮ್ಮ ಜಮೀನಿನ ಮ್ಯಾಪ್ ನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ
ಅದೇ ರೀತಿ ಮೇಲ್ಗಡೆ ಇಂದಿನಿಂದ ಹಿಡಿದು ಮುಂದಿನ ನಾಲ್ಕು ದಿನಗಳ ಹವಾಮಾನ ವರದಿಯನ್ನು ಚೆಕ್ ಮಾಡಬಹುದು. ಮುಂದಿನ ದಿನಾಂಕ ಕ್ಲಿಕ್ ಮಾಡಿ ಕರ್ನಾಟಕದ ನಿಮ್ಮ ಜಿಲ್ಲೆಯ ಮಾಹಿತಿ ಪಡೆಯಬಹುದು.
ಭಾನುವಾರ ಎಲ್ಲೆಲ್ಲಿ ಮಳೆಯಾಯಿತು?
ಕಳೆದ 24 ಗಂಟೆಯಲ್ಲಿ ಹಾಸನದ ಕೊಣನೂರಿನಲ್ಲಿ 8 ಸೆಂ.ಮೀ, ಯಾದಗಿರಿಯ ಕಕ್ಕೇರಿಯಲ್ಲಿ 7. ಸೆಂ.ಮೀ, ಚಿಕ್ಕಮಗಳೂರುಜಿಲ್ಲೆಯ ಶಿವನಿಯಲ್ಲಿ 6 ಸೆಂ.ಮೀ, ರಾಯಚೂರಿನ ಸಿಂಧನೂರು, ಮುದಗಲ್, ಹಾಸನದ ಶ್ರವಣಬೆಳಗೊಳದಲ್ಲಿ ತಲಾ 4. ಸೆಂ.ಮೀ ಮಳೆಯಾಗಿದೆ. ವಿಜಯಪುರದ ಆಲಮಟ್ಟಿ, ಚಿತ್ರದುರ್ಗದ ಹೊಸದುರ್ಗ, ತುಮಕೂರಿನ ಗುಬ್ಬಿ ಹಾಗೂ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.