ಇನ್ನೂ ಎರಡು ದಿನ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ

Written by Ramlinganna

Updated on:

Two more days rain  ರಾಜ್ಯದ ಏಳು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೌದು, ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ 6.5 ಸೆಂ.ಮೀ ನಿಂದ 11 ಸೆಂ. ಮೀ. ವರೆಗೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 7ಹಾಗೂ ಸೆಪ್ಟೆಂಬರ್ 8 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಲಿದೆ. ಅದೇ ರೀತಿ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಈವಾರ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

Two more days rain  ಹವಾಮಾನ ಇಲಾಖೆಯ ಮಳೆಯ ಮುನ್ಸೂಚನೆಯನ್ನು ಎಲ್ಲಿ ನೋಡಬಹುದು?

ಹವಾಮಾನ ಇಲಾಖೆಯ ಮಳೆಯ ಮುನ್ಸುಚನೆಯನ್ನು ರೈತರು ನೋಡಲು ಈ

https://www.ksndmc.org/default.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪೇಜ್ ತೆರೆದುಕೊಳ್ಳುತ್ತದೆ. ಇಲ್ಲಿ ಕೆಳಗಡೆ ನಿಮಗೆ ಮಳೆಯ ಮುನ್ಸೂಚನೆ ಸಿಗುತ್ತದೆ. ಹೌದು, ಯಾವ ಜಿಲ್ಲೆಗಳಲ್ಲಿ ಎಷ್ಟುಪ್ರಮಾಣದಲ್ಲಿ ಮಳೆಯಾಗಿದೆ  ಕುರಿತು ಇತ್ತೀಚಿನ ಎಚ್ಚರಿಕೆಗಳು weather information ಕೆಳಗಡೆ  ಸ್ಕ್ರಾಲ್ ಆಗುತ್ತಿರುತ್ತದೆ.  ಯಾವ ಜಿಲ್ಲೆಯ ಯಾವ ಪ್ರದೇಶದಲ್ಲಿ ಮಳೆಯಾಗಿದೆ ಎಂಬ ಮಾಹಿತಿ ನೀಡಲಾಗಿರುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಒರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಮಳೆಯ ಎಚ್ಚರಿಕೆಯನ್ನು ಟ್ವೀಟ್ ಹಾಗೂ ಫೇಸ್ಬೂಕ್ ಪೋಸ್ಟ್ ನಲ್ಲಿಯೂ ನೀಡಲಾಗಿರುತ್ತದೆ. Our facebook post ನ ಕೆಳಗಡೆ ಯಾವ ಯಾವ ಜಿಲ್ಲೆಯಲ್ಲಿ ಯಾವ ದಿನಾಂಕದಿಂದ ಯಾವ ದಿನಾಂಕದವರೆಗೆ ಮಳೆಯಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಲಾಗಿರುತ್ತದೆ.

ಹವಾಮಾನ ಎಚ್ಚರಿಕೆಗಳು

ಹವಾಮಾನ ಎಚ್ಚರಿಕೆಗಳು ಮೇಲೆ ಕ್ಲಿಕ್ ಮಾಡಿದರೆ ಅಲ್ಲಿ ಮಿಂಚಿನ ಎಚ್ಚರಿಕೆ ಭಾರಿ ಮಳೆಯ ಎಚ್ಚರಿಕೆ ಆಯ್ಕೆಗಳು ಕಾಣಿಸುತ್ತವೆ. ನೀವು ಮಿಂಚಿನ ಎಚ್ಚರಿಕೆಗಳು ಮೇಲೆ ಕ್ಲಿಕ್ ಮಾಡಿದರೆ ಯಾವ ಯಾವ ಪ್ರದೇಶದಲ್ಲಿ ಮಿಂಚು (ಸಿಡಿಲು) ಸಂಭವಿಸುತ್ತವೆ ಎಂಬುದರ ಮಾಹಿತಿ ನೀಡಲಾಗುವುದು. ಮಿಂಚಿನೊಂದಿಗೆ ಎಲ್ಲೆಲ್ಲಿ ಯಾವ ದಿನಾಂಕದಂದು ಯಾವ ಸಮಯಕ್ಕಾಗುತ್ತದೆ ಎಂಬ ಮಾಹಿತಿಯನ್ನು ಸಹ ನೀಡಲಾಗಿರುತ್ತದೆ.

ಮೊಬೈಲ್ ನಲ್ಲೇ ಪಡೆಯಿರಿ ಮಳೆಯ ಮಾಹಿತಿ

ರೈತರು, ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ನಿಮ್ಮ ಊರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ ಗೆ ಕರೆ ಮಾಡಿದರೆ ಸಾಕು, ಒಂದೇ ನಿಮಿಷದಲ್ಲಿ ಮಳೆಯ ಮಾಹಿತಿ ಪಡೆಯಬಹುದು.  ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ನಂಬರಿಗೆ ಕರೆ ಮಾಡಬೇಕು. ಆಗ ಕರೆ ಸ್ವೀಕಿಸಿದ ಸಿಬ್ಬಂದಿಗಳು ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದರ ಕುರಿತು ಖಚಿತ ಮಾಹಿತಿಯನ್ನು ನೀಡುವರು. ಈ ವರುಣಮಿತ್ರ ಉಚಿತ ಸಹಾಯವಾಣಿಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.

ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾನುವಾರ ಹಾಗೂ ಸೋಮವಾರ ಉತ್ತಮ ಮಳೆಯಾಗಿದೆ. ಹೌದು, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ. ಕಲಬುರಗಿ, ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಳ್ಳಕೊಳ್ಳಗಳು ಭರ್ತಿಯಾಗಿದೆ. ಕಲಬುರಗಿ ನಗರದ ಹಲವೆಡೆ ಮುಖ್ಯರಸ್ತೆಗಳು ಜಲಾವೃತ್ತವಾಗಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅಪಾರಹಾನಿ ಸಂಭವಿಸಿದೆ. ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ 1200 ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ

Leave a Comment