Two thousand crop compensation ಬರದಿಂದ ಬೆಳೆ ನಾಶವಾಗಿ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂಪಾಯಿಯವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲುಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮೆ ಮಾಡಲು ಸೂಚನೆ ನೀಡಿದ್ದಾರೆ.
ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಎಲ್ಲರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ ಅಗತ್ಯ ಸಲಹೆ ಮತ್ತುಸೂಚನೆಗಳನ್ನು ನೀಡಿದರು.
ರಾಜ್ಯದಲ್ಲಿ ತಲೆದೊರಿರುವ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ದೋಪಾದಿಯಲ್ಲಿ ಕೆಲಸ ಮುಂದುವರೆಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ ಅಂಶಗಳ ಸಹಿತ ಒದಗಿಸಬೇಕು ಎಂದು ಸೂಚನೆ ನೀಡಿದರು.
Two thousand crop compensation ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ
ರೈತರಗೆ ಮೊದಲ ಹಂತದಲ್ಲಿ 2 ಸಾವಿರ ರೂಪಾಯಿಯವರಗೆ ನೀಡಲು ಘೋಷಿಸಿರುವ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿಬಿಟಿ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಫ್ರೂಟ್ಸ್ ಐಡಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ಬೆಳೆ ಹಾನಿ ಪರಿಹಾರ ಜಮೆ
ಫ್ರೂಟ್ಸ್ ಐಡಿ ಹೊಂದಿದ ರೈತರಿಗೆ ಮಾತ್ರ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುವುದು. ಹೌದು, ಈ ಕುರಿತು ಕೃಷಿ ಅಧಿಕಾರಿಗಳು ಹಲವಾರು ಸಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೂಡಲೇ ಫ್ರೂಟ್ಸ್ ಐಡಿಯಲ್ಲಿ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳಬೇಕು. ಇನ್ನೂ ಕಾಲಾವಕಾಶವಿದೆ. ರೈತರು ಕೂಡಲೇ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಫ್ರೂಟ್ಸ್ ಐಡಿಯನ್ನು ಮಾಡಿಕೊಳ್ಳಬಹುದು.
ಇದನ್ನೂ ಓದಿ Pahani Aadhaarcard link ಮೊಬೈಲ್ ನಲ್ಲಿ ಹೀಗೆ ಮಾಡಿ
ಹೌದು, ರೈತರು ಆಧಾರ್ ಕಾರ್ಡ್, ಜಮೀನಿಗೆ ಸಂಬಂಧಿಸಿದ ದಾಖಲೆಗಳು, (ಪಹಣಿ), ಬ್ಯಾಂಕ್ ಪಾಸ್ ಬುಕ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಹಾಗೂ ಫೋಟೊದಂಗಿ ಹತ್ತಿರ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಫ್ರೂಟ್ಸ್ಐಡಿಗೆ ನೋಂದಣಿ ಮಾಡಿಸಿಕೊಳ್ಳಬೇಕು.
ನಿಮ್ಮ ಹೆಸಿರಗೆ ಪ್ರೂಟ್ಸ್ ಐಡಿ ಆಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ಫ್ರೂಟ್ಸ್ ಐಡಿ ಮಾಡಿಸಿಕೊಂಡ ರೈತರು ತಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಹೌದು, ಈ
https://fruitspmk.karnataka.gov.in/MISReport/GetDetailsByAadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಆಧಾರ್ ಕಾರ್ಡ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ನಿಮ್ಮ ಹೆಸರು, ಪಿಎಂಕೆವೈಸಿ ಹಾಗೂ ಎಫ್ಐಡಿ ಕಾಣಿಸುತ್ತದೆ. ಎಫ್ಐಡಿ ಆಗಿರದಿದ್ದರೆ ಕೂಡಲೇ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬಹುದು.
ಬೆಳೆ ಹಾನಿ ಪರಿಹಾರ ಸ್ಟೇಟಸ್ ಎಲ್ಲಿ ಚೆಕ್ ಮಾಡಬೇಕು?
ಬೆಳೆ ಹಾನಿ ಪರಿಹಾರ ಸ್ಟೇಟಸ್ ನ್ನು ರೈತರು ಜಮೆಯಾಗುವುದನ್ನು ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ Drought ಆಯ್ಕೆ ಮಾಡಿಕೊಳ್ಳಬೇಕು. 2023-24 ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.