Udyoga ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮಾ ಐಟಿಐ ಅಥವಾ ಪದವಿ ಪಾಸಾದವರಿಗೆ ಗುಡ ನ್ಯೂಸ್ ಇಲ್ಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಹೌದು, ಚಿತ್ರದುರ್ಗ ಜಿಲ್ಲೆಯ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮೇ 22 ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ವಿವಿಧ ಖಾಸಗಿ ಕಂಪನಿಗಳು ಖಾಲಿಯಿರುವ ಹುದ್ದೆಗಳಿಗೆ ಪುರುಷ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮಾ, ಐಟಿಐ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 30 ವಯೋಮಾನದೊಳಗಿನವರು ಪಾಲ್ಗೊಳ್ಳಬಹುದು. ಸಂದರ್ಶನಕ್ಕೆ ಆಗಮಿಸುವವರು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಫೋಟೋಗಳನ್ನು ತರಬೇಕು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ದೂರವಾಣಿ ಸಂಖ್ಯೆ 7022459064, 8105619020 ಹಾಗೂ 9945587060 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Udyoga Mela ಇಂದು ಇಲ್ಲಿ ಉದ್ಯೋಗ ಮೇಳ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೇಕಲ್ ತಿರುಪತಿಯಲ್ಲಿರುವ ಚಂದ್ರಶೇಖರ ಭಾರತಿ ಐಟಿಐ ಆವರಣದಲ್ಲಿ ಇದೇ ಮೇ 21 ರಂದು ಹೆಸರಾಂತ ಕಂಪನಿಗಳಿಂದ ಉದ್ಯೋಗ ಮೇಳವನ್ನು ತಮ್ಮ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದೆ ಎಂದು ಶ್ರೀ ಚಂದ್ರಶೇಖರ ಭಾರತಿ ಐಟಿಐ ಕಾಲೇಜಿನ ಪ್ರಾಚಾರ್ಯ ಕೆ.ಆರ್. ಸುರೇಶ ತಿಳಿಸಿದ್ದಾರೆ.
ಇದನ್ನೂ ಓದಿ : ಪಿಎಂ ಕಿಸಾನ್ ಹಣ ಜಮೆಯಾಗಿಲ್ಲವೇ? ಈ ನಂಬರಿಗೆ ಕರೆ ಮಾಡಿ
ಗ್ರಾಮೀಣ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸುವ ಸಲುವಾಗಿಯೇ ಸಂಸ್ಥಾಪಕರು ಈ ಕಾಲೇಜಿನ್ನು ಪ್ರಾರಂಭಿಸಿದ್ದಾರೆ. ಪ್ರಸ್ತುತ ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಈ ಕ್ಯಾಂಪಸ್ ನಡೆಯುತ್ತಿದ್ದು, ಹೆಸರಾಂತ ಕಂಪನಿಗಳಾದಗ ಟೋಯೋಟಾ, ಆರ್ಟೇಕ್ ಮಿಷನರಿ ಕಂಪನಿ, ಎಟಿಎ ಸ್ಕಂಪನಿ, ಈ ಕ್ಯಾಪ್ ಕಂಪನಿಗಳು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆಗಮಿಸುತ್ತಿವೆ.
ಬೆಳಗ್ಗೆ 10.30 ಗಂಟೆಗೆ ಉದ್ಯೋಗ ಮೇಳಕ್ಕೆ ಆಗಮಿಸುವ ವಿದ್ಯಾರ್ಥಿಗಳು ತಮ್ಮ ಮೊದಲನೇ ವರ್ಷದ ಅಂಕಪಟ್ಟಿಯೊಂದಿಗೆ ಹಾಜರಾಗಬೇಕು ಎಂದು ತಿಳಿಸಿದರು.
ಇನ್ನೇಕೆ ತಡ, ಕೂಡಲೇ ನಿಮ್ಮ ಹೆಸರು ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಎಲ್ಲಾ ದಾಖಲೆೆೆೆಗಳೊಂದಿಗೆ ಅರ್ಜಿಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬಹುದು.
ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ
ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ವಿವಿಧ ವೃತ್ತಿಗಳಲ್ಲಿ30ದಿನಗಳ ಕಾಲ ಉಚಿತವಾಗಿ ನಿರ್ಧಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೇವರ್ಗಿಯಲ್ಲಿಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ಕುರಿತು ತರಬೇತಿ, ಯಡ್ರಾಮಿಯಲ್ಲಿ ಪ್ಯಾಷನ್ ಡಿಸೈನಿಂಗ್ ತರಬೇತಿ, ಕಲಬುರಗಿಯಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ನೆಟ್ವರ್ಕಿಂಗ್ ತರಬೇತಿ, ಸೇಡಂದಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೈಯನ್ಸ್ ತರಬೇತಿ ಹಾಗೂ ಆಳಂದಲ್ಲಿಮೊಬೈಲ್ ಫೋನ್ಸ್ ರಿಪೇರ್ ಆ್ಯಂಡ್ ಸರ್ವಿಸಿಂಗ್ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಯೋಮಿತಿ 18 ರಿಂದ 40 ವಯೋಮಾನದೊಳಗಿನ ಕನಿಷ್ಟ ಎಸ್.ಎಸ್.ಎಲ್.ಸಿ ಪಾಸಾದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭೇಟಿ ನೀಡಿ ಮೇ 30 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಸರು ನೋಂದಣಿ ಹಾಗೂ ಇತರ ಮಾಹಿತಿಗಾಗಿ 8867748956, 9108972833, 9986332736 ಗಳಿಗೆ ಪ್ರತಿ ದಿನ ಬೆಳಗ್ಗೆ10 ರಿಂದ ಸಂಜೆ 5.30 ಗಂಟೆಯೊಳಗೆ ಕರೆ ಮಾಡಿತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.