ಫೆಬ್ರವರಿ 26 ಹಾಗೂ 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ (Udyoga mela ) ಆಯೋಜಿಸಲಾಗಿದೆ.
ವಿವಿಧ ಪದವಿ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳನ್ನು ಪೂರ್ಣಗೊಳಿಸಿರುವ ರಾಜ್ಯದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜ್ಯ ಸರ್ಕಾರದಿಂದಲೇ ಫೆಬ್ರವರಿ 26 ಮತ್ತು 27 ರಂದು ನಗರದ ಅರಮನೆ ಮೈದಾನದಲ್ಲಿ ಯುವ ಸಮೃದ್ಧಿ ಹೆಸರಿನ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಕೌಶಲ್ಯಾಭಿವೃದ್ಧಿಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮೇಳದ ಕುರಿತು ಮಾಹಿತಿ ನೀಡಿದರು.
ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿ, ಫೆಬ್ರವರಿ 26 ರಂದು ಮುಖ್ಯಮಂತ್ರಿಗಳು ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಪದವಿ, ತಾಂತ್ರಿಕ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳನ್ನು ಮುಗಿಸುವವರಿಗೆ ಉದ್ಯೋಗ ಒದಗಿಸುವ ಮೇಳ ಇದಾಗಿದೆ.
ಉದ್ಯೋಗ ಮೇಳದಲ್ಲಿ 600ಕ್ಕೂ ಹೆಚ್ಚು ಸ್ಟಾಲ್ ಗಳನ್ನು ಹಾಕಲಾಗಿದೆ. ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಯಾವ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿ ನೀಡಲು ಆಯಾ ಕಂಪನಿಗಳ ನುರಿತ ತಜ್ಞರು, ಪರಿಣಿತರು ಇರುತ್ತಾರೆ ಎಂದರು.
ಉದ್ಯೋಗ ಸಿಗದವರಿಗೆ ಕೌಶಲ್ಯ ತರಬೇತಿ ಸಚಿವ ಪ್ರಯಾಕ್ ಖರ್ಗೆ ಮಾತನಾಡಿ, ಮೇಳದಲ್ಲಿ ಕೆಲಸ ಸಿಗದವರಿಗೆ ಸರ್ಕಾರದಿಂದ ಅಗತ್ಯ ಕೌಶಲ್ಯ ತರಬೇತಿ ನೀಡುವ ಉದ್ದೇಶವಿದೆ. ಇದಕ್ಕಾಗಿ ನುರಿತ ತಜ್ಞರು ಮುಂದೆ ಬಂದಿದ್ದಾರೆ. ಅಭ್ಯರ್ಥಿಗಳು ತರಬೇತಿ ಪಡೆದು ನಂತರ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು. ಉದ್ಯೋಗ ಮೇಳದ ಸಂಬಂಧ ಮಾಹಿತಿಗೆ ಉದ್ಯೋಗ ಮೇಳ ಸಹಾಯವಾಣಿ ಆರಂಭಿಸಲಾಗಿದೆ. ಉದ್ಯೋಗ ಸಹಾಯವಾಣಿ ನಂಬರ್ 18005999918 ಕ್ಕೆ ಅಭ್ಯರ್ಥಿಗಳು ಕರೆ ಮಾಡಿಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
Udyoga mela ಕ್ಕೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕೇ?
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://skillconnect.kaushalkar.com/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಉದ್ಯೋಗ ಮೇಳ ಮೇಲೆ ಕ್ಲಿಕ್ ಮಾಡಬೇಕು. ನಂತರ ಕ್ಯಾಂಡಿಡೇಟ್ ರೆಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿಸ್ಯಾಂಪಲ್ ರೆಸ್ಯುಮ್ ಮೇಲೆ ಕ್ಲಿಕ್ ಮಾಡಬೇಕು. ರೆಸ್ಯೂಮ್ ಡೌನ್ಲೋಡ್ ಆಗುತ್ತದೆ. ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಬೇಕು.
ನಂತರ ಫೋನ್ ನಂಬರ್ ಹಾಕಿ ವೆರಿಫೈ ಫೋನ್ ವೈ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ನಮೂದಿಸಿ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
Udyoga mela ಕ್ಕೆ ಉಚಿತ ಬಸ್ ವ್ಯವಸ್ಥೆ
ಉದ್ಯೋಗ ಮೇಳಕ್ಕಾಗಿ ಬರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಮೆಜಿಸ್ಟಿಕ್ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಶಾಂತಿ ನಗರ ಬಸ್ ನಿಲ್ದಾಣದಿಂದ ಉಚಿತ ವಿಶೇಷ ಬಸ್ ವ್ಯವಸ್ಥೆ ಇರಲಿದೆ.
ಫೆಬ್ರವರಿ 26 ರಂದು ನೇರ ಸಂದರ್ಶನ
ಹಾಸನ ಜಿಲ್ಲೆಯಲ್ಲಿ ಜವಳಿ ಕಾರ್ಖಾನೆಯಾದ ಗೋಕುಲ್ ದಾಸ್ ಎಕ್ಸ್ ಪೋರ್ಟ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಮತ್ತು ಮೆಡ್ ಪ್ಲಸ್ ಫಾರ್ಮಸಿಯಿಂದ ನಿರುದ್ಯೋಗ ಯುವಕರಿಗೆ ಫೆಬ್ರವರಿ 26 ರಂದು ಬೆಳಗ್ಗೆ 10.30 ರಿಂದ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮ ಕಚೇರಿ, ರೇಲ್ವೆ ಸ್ಟೇಶನ್ ಹತ್ತಿರ, ಸರ್ಕಾರಿ ಐಟಿಐಕಾಲೇಜು ಆವರಣ, ಹಾಸನ ಖಾಲಿ ಇಱುವ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಇದನ್ನೂ ಓದಿ : Gruhalakshmi Annabhagya bele hani ಸ್ಟೇಟಸ್ ಇಲ್ಲೇ ಚೆಕ್ ಮಾಡಿ
ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ 08172 296574, 9449692691 ಹಾಗೂ 8722606874 ಗೆ ಸಂಪರ್ಕಿಸಲು ಕೋರಲಾಗಿದೆ.
ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾಸನ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಯನ್ನು ಮಾಡಲಾಗುತ್ತಿದ್ದು, ಖಾಲಿಯಿರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಫೆಬ್ರವರಿ 22 ರಿಂದ ಮಾರ್ಚ್ 22 ರವರೆಗೆ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ನಿರ್ವಹಣಾಧಿಕಾರಿಬಿ. ಆರ್. ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.