Udyogini scheme subsidy get : ಮಹಿಳೆಯರು ಸ್ವಂತ ಉದ್ಯೋಗ ಕೈಗೊಂಡು ಸ್ವಾವಂಬಿಯಾಗಿ ಜೀವನ ಸಾಗಿಸಲು 3 ಲಕ್ಷ ರೂಪಾಯಿಯವರೆಗೆ ಸಾಲ ಸಿಗಲಿದೆ. ಇದರೊಂದಿಗೆ 2 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಸಿಗಲಿದೆ.
ಹೌದು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಕರ್ನಾಟಕ ಸರ್ಕಾರವು ಅನುಮೋದಿಸಿದ ಒಂದು ನೀವು ಯೋಜನೆಯಾಗಿದ್ದು, ಮಹಿಳೆಯರು ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸಲು ಸಹಾಯ ಮಾಡುತ್ತದೆ.
Udyogini scheme subsidy get ಯೋಜನೆಯಿಂದ ಸಿಗುವ ಸಾಲ ಸಬ್ಸಿಡಿ
ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನವನ್ನು ನೀಡಲಾಗುವುದು.
ಸಾಲದ ಮೊತ್ತ ಕನಿಷ್ಟ 50 ಸಾವಿರ ರೂಪಾಯಿ ಗರಿಷ್ಠ 3 ಲಕ್ಷ ರೂಪಾಯಿ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ75 ರಷ್ಟು ಅಥವಾ ಗರಿಷ್ಠ 2 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಸಿಗಲಿದೆ. ಇತರ ವರ್ಗದ ಫಲಾನುಭವಿಗಳಿಗೆ ಶೇ. 30 ರಷ್ಟು ಅಥವಾ ಗರಿಷ್ಠ 90 ಸಾವಿರ ರೂಪಾಯಿಯವಗೆ ಸಬ್ಸಿಡಿ ಸಿಗಲಿದೆ.
ಏನಿದು ಉದ್ಯೋಗಿನಿ ಯೋಜನೆ ?
ಉದ್ಯೋಗಿನಿ ಯೋಜನೆ ಎನ್ನುವುದು ಮಹಿಳಾ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಮತ್ತು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಬ್ಯಾಂಕುಗಳ ಮೂಲಕ 1 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿಯವರೆಗೆ ಸಾಲವನ್ನ ನೀಡುವ ಕಾರ್ಯಕ್ರಮ ಇದಾಗಿದೆ.
ಇದನ್ನೂ ಓದಿ : ಪಿಎಂ ಕಿಸಾನ್ ಹಣ ಈ ಪಟ್ಟಿಯಲ್ಲಿರುವ ರೈತರಿಗೆ ಅಕ್ಟೋಬರ್ 30 ರಂದು ಜಮೆ
ಹಣಕಾಸು ಸಂಸ್ಥೆಗಳು ಅಥವಾ ಬ್ಯಾಂಕ್ ಗಳು ಮಂಜೂರು ಮಾಡುವ ಸಾಲದ ಮೊತ್ತಕ್ಕೆ ನಿಗಮದಿಂದ ಸಹಾಯಧನ ಮಂಜೂರು ಮಾಡಲು ಅವಕಾಶವಿದೆ.
ಯಾವ ಯಾವ ಉದ್ದೇಶಕ್ಕೆ ಸಾಲ ಸೌಲಭ್ಯ ಸಿಗಲಿದೆ
ಉದ್ಯೋಗಿನ ಯೋಜನೆ ಅಡಿಯಲ್ಲಿ ಮಹಿಳೆಯರು ಲಾಭದಾಯಕ ಚಟುವಟಿಕೆ ಕೈಗೊಳ್ಳಲು ಬುಕ್ ಬೈಂಡಿಂಗ್ ಮತ್ತು ನೋಟ್ ಬುಕ್ ಗಳ ತಯಾರಿಕೆ, ಜಾಮ್, ಜೆಲ್ಲಿ ಉಪ್ಪಿನಕಾಯಿ ತಯಾರಿಕೆ, ಪಾಪಡ್ ತಯಾರಿಕೆ, ಸೀರೆ ಮತ್ತು ಕಸೂತಿ ಕೆಲಸ, ಬಟ್ಟೆಗಳ ಮುದ್ರಣ ಮತ್ತು ಬಣ್ಣ ಹಾಕುವುದು ಮತ್ತು ಉಣ್ಮೆಯ ನೇಯ್ಕೆ ಮುಂತಾದವುಗಳಿರಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅರ್ಜಿದಾರರು ಮಹಿಳೆಯಾಗಿರಬೇಕು ಹಾಗೂ ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. ಅರ್ಜಿದಾರರು ಯಾವುದೇ ಹಣಕಾಸು ಸಂಸ್ಥೆಯಲ್ಲಿ ಈ ಹಿಂದೆ ಪಡೆದ ಸಾಲವನ್ನು ಮರುಪಾವತಿ ಮಾಡದೆ ಬಾಕಿ ಇಟ್ಟಿರಬಾರದು. ಅತ್ಯಂತ ಬಡವರು, ನಿರ್ಗತಿಕರು, ವಿಧವೆ ಮತ್ತು ದೈಹಿಕವಾಗಿ ಅಸ್ವಸ್ಥರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ವಾಸಸ್ಥಳ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಅಧವಾ ಆಧಾರ್ ಕಾರ್ಡ್, ಅಱ್ಜಿದಾರರ ಮೂರು ಪಾಸ್ ಪೋರ್ಟ್ ಗಾತ್ರದ ಛಾಯಾಚಿತ್ರಗಳು, ಸಾಲ ಪಡೆಯಲು ಉದ್ದೇಶಿಸಿರುವ ಆದಾಯೋತ್ಪನ್ನ ಚಟುವಟಿಕೆಗೆ ಸಂಬಂಧಿಸಿದಂತೆ ಯೋಜನಾ ವರದಿ, ಜಾತಿ ಪ್ರಮಾಣ ಪತ್ರ (ಎಸ್.ಸಿ. ಎಸ್.ಟಿ ಆಗಿದ್ದಲ್ಲಿ) ಅರ್ಜಿದಾರರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ವಿವರ, ಸಂಬಂಧಪಟ್ಟ ತಹಶೀಲ್ದಾರರು ನೀಡಿರುವ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು.
ಅರ್ಜಿ ಎಲ್ಲಿ ಸಲ್ಲಿಸಬೇಕು ?
ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಈ ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಆಯ್ಕೆ ಆಗದವರು ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಂತಹವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಕ ಅಕ್ಟೋಬರ್ 31. ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು.





