Bhu siri ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷ ರೈತರ ಖಾತೆಗೆ 10 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು.
ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ನಲ್ಲಿ ಭೂ ಸಿರಿ ಯೋಜನೆಯನ್ನು ಘೋಷಣೆ ಮಾಡದ್ದಾರೆ. ಈ ಯೋಜನೆಯಡಿಯಲ್ಲಿ ರೈತರ ಖಾತೆಗೆ 10 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಯಾವ ರೈತರ ಖಾತೆಗೆ ಜಮೆ ಮಾಡಲಾಗುವುದು? ಯಾವಾಗ ಜಮೆ ಮಾಡಲಾಗುವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಏನಿದು ಭೂ ಸಿರಿ ಯೋಜನೆ? (what is Bhu siri scheme)
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಡಿಯಲ್ಲಿ 2023-24ನೇ ಸಾಲಿನಿಂದ ಪ್ರತಿ ರೈತರಿಗೆ 10 ಸಾವಿರ ರೂಪಾಯಿ ಹೆಚ್ಚವರಿ ಸಹಾಯಧನ ನೀಡಲಾಗುವುದು.
ಭೂ ಸಿರಿ ಯೋಜನೆ ರೈತರಿಗೆ ಹೇಗೆ ಪ್ರಯೋಜನಕಾರಿ? (benefit of bhu siri scheme)
ಭೂ ಸಿರಿ ಯೋಜನೆಯಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಅನುಕೂಲವಾಗಲಿದೆ.
ಇದನ್ನೂ ಓದಿ : ಜಮೀನಿನ ಓರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಮೊಬೈಲಿನಲ್ಲಿ ಒಂದೇ ನಿಮಿಷದಲ್ಲಿ ಡೌನ್ಲೋಡ್ ಮಾಡಿ
ಭೂ ಸಿರಿ ಯೋಜನೆಯಡಿಯಲ್ಲಿ ರೈತರಿಗೂ ನೀಡಲಾಗುವ ಮೊತ್ತದಲ್ಲಿ ರಾಜ್ಯ ಸರ್ಕಾರದ 2500 ರೂಪಾಯಿ ಹಾಗೂ ನಬಾರ್ಡ್ ಬ್ಯಾಂಕಿನ 7500 ರೂಪಾಯಿ ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ತಲಾ 10 ಸಾವಿರ ರೂಪಾಯಿ ನೀಡಲಾಗುವುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ 10 ಸಾವಿರ ಸಹಾಯಧನ
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆಯಡಿ 10 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಇಲ್ಲವೇ? ಈಗಲೇ ಅರ್ಜಿ ಸಲ್ಲಿಸಿ
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆಯಡಿಯಲ್ಲಿ ಸಹಾಯಧನ ನೀಡಲಾಗುವುದರಿಂದ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳಬೇಕು. ರಾಷ್ಟ್ರೀಕೃತ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿಯೂ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುವುದು. ರೈತರು ಅರ್ಜಿ ಸಲ್ಲಿಸಿ ತಮ್ಮ ಹತ್ತಿರದ ಬ್ಯಾಂಕಿನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಎಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು?
ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಬೇಕಾದರೆ ರೈತರು ಈ
https://pmkisan.gov.in/Documents/Kcc.pdf
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ತೆರೆದುಕೊಳ್ಳುತ್ತದೆ. ಈ ಅರ್ಜಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಂಡು ಮಾಹಿತಿಗಳನ್ನು ಭರ್ತಿ ಮಾಡಿ ನಿಮ್ಮ ಹತ್ತಿರದ ಬ್ಯಾಂಕಿಗೆ ಸಲ್ಲಿಸಿ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳಬಹುದು.
ರೈತ ಸಿರಿ ಯೋಜನೆಯಡಿಯಲ್ಲಿಯೂ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ
ರಾಜ್ಯದ ರೈತರಿಗೆ ಘೋಷಣೆ ಮಾಡಿದ ಯೋಜನೆಗಳಲ್ಲಿ ರೈತ ಸಿರಿ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಸಿರಿಧಾನ್ಯ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಈ ಯೋಜನೆಯಡಿಯಲ್ಲಿ ಸಿರಿಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ.
ತೊಗರಿ ಬೆಳೆ ಹಾನಿಯಾದ ರೈತರಿಗೂ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ
ಬೀದರ್, ಕಲಬುರಗಿ. ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ರೈತರ ಅಪಾರ ಬೆಳೆ ಹಾಳಾಗಿತ್ತು. ಇದರಿಂದಾಗಿ ರೈತರು ಸಂಕಷ್ಟಕ್ಕೊಳಗಾಗಿದ್ದರು. ಅಂತಹ ರೈತರಿಗೆ ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ಘೋಷಣೆ ಮಾಡಿದ್ದಾರೆ. ಅತೀ ಶೀಘ್ರದಲ್ಲಿ ಈ ರೈತರ ಖಾತೆಗೆ 10 ಸಾವಿರ ರೂಪಾಯಿ ಸಹಾಯಧನ ಜಮೆ ಮಾಡಲಾಗುವುದು.