ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯಲಚ್ಚಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಇದರೊಂದಿಗೆ ಯಾವ ಯಾವ ಷರತ್ತುಗಳಿವೆ ಎಂಬುದರ ಮಾಹಿತಿ ಇಲ್ಲಿದೆ.

ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವದಲ್ಲಿ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿತ್ತು. ಹೌದು, ತನ್ನ ನೂತನ ಗ್ಯಾರೆಂಟಿ ಯೋಜನೆಯ ಅಂಗವಾಗಿ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿದೆ. ಇದೀಗ ಈ ಯೋಜನೆಗೆ ಸಂಬಂಧ ಷರತ್ತು ಮತ್ತು ನಿಬಂಧನೆಗಳ ಕುರಿತು ಆದೇಶ ಸಹ ಹೊರಡಿಸಲಾಗಿದೆ.

ಗೃಹ ಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ತಿಂಗಳಿಗೆ ಗರಿಷ್ಠ 200  ಯುನಿಟ್ ವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್ ಗಳ ಮೇಲೆ ಶೇ. 10 ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಲಾಗಿದೆ.

ಈ ಯೋಜನೆಯು ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ತಿಂಗಳಿನಲ್ಲಿ ನೀಡುವ ಬಿಲ್ಲಿಗೆ ಅನ್ವಯವಾಗುತ್ತದೆ.  ಉಚಿತ ವಿದ್ಯುತ್ ಪೂರೈಕೆಗೆ ತಗಲುವ ವೆಚ್ಚವನ್ನು ಭರಿಸಲು ವಿದ್ಯುತ್ ಸರಬರಾಜು ಕಂಪನಿಗಳಿಗೆ ಮುಂಗಡವಾಗಿ ಅನುದಾನ ಒದಗಿಸಲಾಗುವುದು ಎಂದು ಇಂಧನ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ನಲ್ಲಿ ಅರ್ಜಿ ಸಲ ಸಲ್ಲಿಸಬಹುದು.

2022-23ನೇ ಆರ್ಥಿಕ ವರ್ಷದಲ್ಲಿ ತಿಂಗಳಿಗೆ  ಸರಾಸರಿ 200 ಯುನಿಟ್ ಗಳಿಗಿಂತ ಹೆಚ್ಚು ವಿದ್ಯುತ್ ಬಳಸಿರುವ ಕುಟುಂಬಗಳು ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ. ಅವರು ಬಿಲ್ ನ ಪೂರ್ಣ ಮೊತ್ತವನ್ನು ಪಾವತಿಸಬೇಕು.  ಪ್ರತಿ ತಿಂಗಳು ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ ನಮೂದಿಸಬೇಕು.

ಗೃಹ ಜ್ಯೋತಿ ಯೋಜನೆಗೆ ಇರುವ ನಿಯಮಗಳು

200 ಯುನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ ನ್ನು ಪಾವತಿಸಬೇಕು.ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಬಳಸಿದ್ದಲ್ಲಿ ಅನ್ವಯವಾಗುವುದಿಲ್ಲ. ವುದಿಲ್ಲ.ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುತ್ತದೆ. ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡಲಾಗುತ್ತದೆ. ಹಾಗೂ ಗ್ರಾಹಕರು ಈ ಬಿಲ್ ಪಾವತಿಸಬೇಕು. ಅರ್ಹ ಯುನಿಟ್ ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ನೀಡಲಾಗುತ್ತದೆ.

ಇದನ್ನೂ ಓದಿ : ನಿರುದ್ಯೋಗಿಗಳಿಗೆ 3 ಸಾವಿರ ರೂಪಾಯಿಯವರೆಗೆ ನಿರುದ್ಯೋಗ ಭತ್ಯೆ ನೀಡಲು ಅರ್ಜಿ ಆಹ್ವಾನ

ಗೃಹಜ್ಯೋತಿ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲಿಚ್ಚಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಪ್ರತಿ ಫಲಾನುಭವಿಯು ತನ್ನ customer ID / Account ID ಕಡ್ಡಾಯವಾಗಿ ಆಧಾರ್ ಕಾರ್ಡ್ ಗೆ ಜೋಡಣೆ ಮಾಡಬೇಕು.  ಪ್ರಸ್ತುತ ಜಾರಿಯಲ್ಲಿರುವ ಭಾಗ್ಯ ಜ್ಯೋತಿ / ಕುಟಿರ ಜ್ಯೋತಿ ಯೋಜನೆ ಹಾಗೂ ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಈ ಯೋಜನೆಯಲ್ಲಿ ಸೇರಿಸಬಹುದು.

2023 ರ ಜೂನ್ 20 ಅಂತ್ಯಕ್ಕೆ (ಜೂನ್ ತಿಂಗಳಿನಲ್ಲಿ ಬಳಸಿದ ವಿದ್ಯುತ್ ಗೆ ಜುಲೈನಲ್ಲಿ ನೀಡಲಾಗುವ ವಿದ್ಯುತ್ ಬಿಲ್ ಸೇರಿದಂತೆ ) ಬಾಕಿ ಇರುವ ವಿದ್ಯುತ್ ಶುಲ್ಕವನ್ನು ಮೂರು ತಿಂಗಳೊಳಗೆ ಪಾವತಿಸಬೇಕು. ಅವಧಿಯೊಳಗೆ ಪಾವತಿ ಮಾಡದಿದ್ದಲ್ಲಿ ಅಂತಹವರ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುತ್ತದೆ. ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕ ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿದೆ. ಗೃಹ ಬಳಕೆಯ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಮೀಟರ್ ಇದ್ದಲ್ಲಿ ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

Leave a Reply

Your email address will not be published. Required fields are marked *