ವಿವಿಧ ಜಿಲ್ಲೆಗಳಿಂದ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

ತೋಟಗಾರಿಕೆ ಇಲಾಖೆಯಿಂದ ರಾಮನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ದೊಡ್ಡಬಳ್ಳಾಪುರ ಸೇರಿದಂತೆ ಇತರ ಜಿಲ್ಲೆಗಳಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿನಲ್ಲಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತೋಟಗಾರಿಕೆ ಮಿಷನ್  ಯೋಜನೆಯಡಿ ಪ್ರದೇಶ ವಿಸ್ತರಣೆ, ಪಾಲಿಹೌಸ್, ಪ್ಯಾಕ್ ಹೌಸ್, ವೈಯಕ್ತಿಕ ಹಾಗೂ ಸಮುದಾಯ ಕೃಷಿಹೊಂಡ ಪ್ಲಾಸ್ಟಿಕ್ ಹೊದಿಕೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸಹಾಯಧನ ಸೌಲಭ್ಯಗಳನ್ನು ಪಡೆಯಲು ಅರ್ಹ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತ ಬಾಂಧವರಿದಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಸೆಪ್ಟೆಂಬರ್ 11 ರೊಳಗಾಗಿ ಈ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಈ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ. ಅಲ್ಲದೆ ಅರ್ಜಿ ಸಲ್ಲಿಸುವಾಗ ರೈತರು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದವರಾಗಿದ್ದರೆ ಜಾತಿ ಪ್ರಮಾಣ ಪತ್ರ ಮತ್ತು ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಿ ಸಲ್ಲಿಸಬೇಕೆಂದು ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆ ಹಾಗೂ ಕೇಂದ್ರೀಯ ಪುರಸ್ಕೃತ ಕೃಷಿ ತರಬೇತಿ ಮತ್ತು ಅಭಿಯಾನ ಯೋಜನೆಯಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ವ್ಯಾಪ್ತಿಯ ಅರ್ಹ ರೈತ ಫಲಾನುಭವಿಗಳಿಂದ ವಿವಿಧ ಘಟಕಗಳಿಗೆ ಸಹಾಯಥನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸೆಪ್ಟೆಂಬರ್ 7ಅಂತಿಮ ದಿನವಾಗಿದೆ ಎಂದು ತೋಟಗಾರಿಕೆ ಸಹಾಯಕ ನಿರ್ದೇಶಕಿ ರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : 11 ಇ ನಕ್ಷೆ, ಪೋಡಿ, ಮೋಜಿಣಿ, ಆಕಾರಬಂದ್ ದಾಖಲೆಗಳು ಇಲ್ಲಿ ಲಭ್ಯ- ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಿ

ರೈತರು ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಆಧಾರ್, ಬ್ಯಾಂಕ್ ಖಾತೆ ವಿವರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ತಾಲೂಕು ಕಚೇರಿಗೆ ಸಂಪರ್ಕಿಸಬಹುದು. ಮಾಹಿತಿಗೆ ತಾಲೂಕು ತೋಟಗಾರಿಕೆ ಅಧಿಕಾರಿ 9483478162 / 8217210320 ಗೆ ಸಂಪರ್ಕಿಸಲು ಕೋರಲಾಗಿದೆ.

ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಹ ತೋಟಗಾರಿಕೆ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಡೂರು, ಬಳ್ಳಾರಿ ಮತ್ತು ಸಿರಗುಪ್ಪ ತಾಲೂಕುಗಳಲ್ಲಿ ಈರುಳ್ಳಿ ಶೇಖರಣೆ ಘಟಕ ಹಾಗೂ ಫಾರಂ ಘಟಕ ನಿರ್ಮಾಣಕ್ಕಾಗಿ ಸೌಲಭ್ಯ ನೀಡಲಾಗುವುದು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೇಗಾ ಮೈಕ್ರಿ ಅಗ್ರಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ಮಾವು, ಸೀತಾಫಲ್, ಸೀಬೆ, ಗೇರು, ಹುಣಸೆ, ನೇರಳೆ ಹಾಗೂ ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಹಾಗೂ ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ, ಶ್ರೀಗಂಧ ಬೆಳೆಯಲು ಆಸಕ್ತ ರೈತರಿಂದ ಅರ್ಜಿ ಸಲ್ಲಿಸಬಹುದು.

ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ, ಯೋಜನೆಗಳ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ ಯೋಜನೆಯ ಕಾರ್ಯಕ್ರಮಗಳ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08392 278179 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಶು ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಪಶು ಆಸ್ಪತ್ರೆ, ದೇವನಹಳ್ಳಿಯಿಂದ 2022-23ನೇ ಸಾಲಿನಲ್ಲಿ ಆರ್.ಕೆವಿವೈ ಯೋಜನೆಯಡಿ ಶೇ. 50 ರಷ್ಟು ಸಹಾಯಧನದೊಂದಿಗೆ ಹಸುಗಳ 2 ರಬ್ಬರ್ ನೆಲಹಾಸುಗಳನ್ನು ವಿತರಿಸಲು ಅರ್ಜಿಗಳನ್ನು ಆಗಸ್ಟ್ 25 ರಿಂದ ಸೆಪ್ಟೆಂಬರ್ 4 ರವರೆಗೆ ಸ್ವೀಕರಿಸಲಾಗುವುದು.

ಅರ್ಜಿಗಳನ್ನು ತಾಲೂಕಿನ ಎಲ್ಲಾ ಪಶುವೈದ್ಯ ಸಂಸ್ಥೆಗಳಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅದೇ ಸಂಸ್ಥೆಯಲ್ಲಿ ನೀಡಬಹುದಾಗಿದೆ.

ಹಸುಗಳ 2 ರಬ್ಬರ್ ನೆಲಹಾಸು ಬೆಲೆಯು 5600 ರೂಪಾಯಿಗಳಾಗಿದ್ದು, ಎಲ್ಲಾ ವರ್ಗದ ಫಲಾನುಭವಿಗಳಿಗೆ ಸಹಾಯಧನದ ಮೊತ್ತ 2800 ರೂಪಾಯಿ ಹಾಗೂ ಫಲಾನುಭವಿಗಳ ವಂತಿಕೆ 2800 ರೂಪಾಯಿಗಳಾಗಿರುತ್ತದೆ.

ತಾಲೂಕಿನ ಎಲ್ಲಾ ಹೈನುಗಾರರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ದೇವನಹಳ್ಳಿ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment